NationalPosted at: Nov 22 2019 11:03PM Share370ನೇ ವಿಧಿ ರದ್ದುಗೊಳಿಸುವ ಮೂಲಕ ಬಿಜೆಪಿ ರಾಜಕೀಯ ವಿಶ್ವಾರ್ಹತೆ ಮರುಸ್ಥಾಪಿಸಿದೆ- ರಾಜನಾಥ್ ಸಿಂಗ್ಲಕ್ನೋ, ನವೆಂಬರ್ 22 (ಯುಎನ್ಐ) ಜಮ್ಮು- ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿರುವುದು ದೊಡ್ಡ ಸಾಧನೆ ಎಂದು ಹೇಳಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಸರ್ಕಾರ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುವ ಮೂಲಕ ರಾಜಕೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಿದೆ ಎಂದು ಹೇಳಿದ್ದಾರೆ.‘ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುತ್ತೇವೆ ಎಂದು ನಾವು ಭರವಸೆ ನೀಡಿದ್ದೆವು. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಎರಡನೇ ಅವಧಿಯಲ್ಲಿ ಅದನ್ನು ಸಾಕಾರಗೊಳಿಸಿದ್ದೇವೆ. ರಾಜಕೀಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವಲ್ಲಿ ನಮ್ಮ ನಂಬಿಕೆಯನ್ನು ಇದು ತೋರಿಸುತ್ತದೆ. ನಾವು ಯಾವ ಭರವಸೆ ನೀಡುತ್ತೇವೆಯೋ ಅದನ್ನು ಈಡೇರಿಸುತ್ತೇವೆ.’ ಎಂದು ರಾಜನಾಥ್ ಸಿಂಗ್ ಶುಕ್ರವಾರ ಇಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ. ‘ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಪಡಿಸಿದಾಗಿನಿಂದ ಜಮ್ಮು-ಕಾಶ್ಮೀರದಲ್ಲಿ ಯಾವುದೇ ನಾಗರಿಕ ಕೊಲ್ಲಲ್ಪಟ್ಟಿಲ್ಲ. ಆದರೆ ಹಲವಾರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿವೆ ಎಂದು ಅವರು ಹೇಳಿದರು. ‘ನಮ್ಮ ಸರ್ಕಾರ ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನರ್ ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇದರಲ್ಲಿ ಬಹುಮಟ್ಟಿಗೆ ನಾವು ಯಶಸ್ವಿಯೂ ಆಗಿದ್ದೇವೆ.’ ಎಂದು ಅವರು ಹೇಳಿದ್ದಾರೆ.ಕಾಶ್ಮೀರದ ಬಗ್ಗೆ ಧ್ವನಿ ಎತ್ತುತ್ತಿರುವ ಪಾಕಿಸ್ತಾನ, ಜಾಗತಿಕವಾಗಿ ಮಿತ್ರ ದೇಶಗಳನ್ನು ಕಳೆದುಕೊಳ್ಳುತ್ತಿದೆ. ಪಾಕಿಸ್ತಾನದ ಆರ್ಥಿಕತೆ ತತ್ತರಿಸಿದ್ದರೂ ಅದು ಇನ್ನೂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಇತ್ತೀಚೆಗೆ, ತಾವು ಬ್ಯಾಂಕಾಕ್ನಲ್ಲಿ ನಡೆದ ಆಸಿಯಾನ್ ರಕ್ಷಣಾ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಎಲ್ಲ ದೇಶಗಳು ಭಾರತದೊಂದಿಗೆ ಮಾತನಾಡಲು ಉತ್ಸುಕವಾಗಿದ್ದವು. ಏಕೆಂದರೆ, ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಭಾರತದ ಬದ್ಧತೆ ಏನೆಂಬುದು ಪ್ರಪಂಚಕ್ಕೆ ಗೊತ್ತಿದೆ ಎಂದು ಅವರು ಹೇಳಿದ್ದಾರೆ. ಯುಎನ್ಐ ಎಸ್ಎಲ್ಎಸ್ 2238