Tuesday, Jan 21 2020 | Time 22:42 Hrs(IST)
 • ಸೌಹಾರ್ದತೆಯನ್ನು ಕೆಡಿಸುವ ರೇಣುಕಾಚಾರ್ಯ ಹೇಳಿಕೆ: ಎಸ್‍ಡಿಪಿಐ
 • ವುಹಾನ್‌ ವೈರಸ್‌: ಏಳು ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ
 • ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
 • ಸಿದ್ದರಾಮಯ್ಯ ವಿರುದ್ಧ ಪ್ರತಿಭಟಿಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್
 • ಅಂಧರ ಕ್ರಿಕೆಟ್: ಆಂಧ್ರ ಪ್ರದೇಶ ತಂಡಕ್ಕೆೆ ಟಿ-20 ಮುಕುಟ
 • ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಯಡಿಯೂರಪ್ಪ ಮನವಿ
 • ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಿಂದ ಇಶಾಂತ್ ಶರ್ಮಾ ಔಟ್
 • ನಾರಾಯಣ ಹೆಲ್ತ್ ಸಿಟಿಯಿಂದ ನಾಲ್ಕು ವರ್ಷದ ಮಗುವಿಗೆ ಹೃದಯ ಕಸಿ: ಮಹತ್ವದ ಸಾಧನೆ
 • ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ
 • ಅಮರಾವತಿ ಆಂಧ್ರ ರಾಜಧಾನಿಯಾಗಿ ಮುಂದುವರಿಯಲಿದೆ; ಪವನ್ ಕಲ್ಯಾಣ್
 • ಮನೆ ಮನೆಗೆ ಸಿಎಎ ವಿರುದ್ಧ ಅಭಿಯಾನ ಕೊಂಡೊಯ್ಯಲು ಜೆಡಿಎಸ್ ಸಿದ್ಧತೆ
 • ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ನೋಂದಣಿ ಇಳಿಮುಖ: ಮುಖ್ಯಚುನಾವಣಾಧಿಕಾರಿ ಬೇಸರ!
 • ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ
 • ಮೆಂಟನ್ ಕಪ್ ಶೂಟಿಂಗ್ : ಅಪೂರ್ವಿ, ದಿವ್ಯಾಂಶ್ ಗೆ ಚಿನ್ನದ ಪದಕ
 • ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!
Entertainment Share

ಕೋಮಲ್ ಮೇಲೆ ದಾದಾಗಿರಿ ನಡೆಸಿರುವ ಪುಂಡರಿಗೆ ತಕ್ಕ ಶಾಸ್ತಿಯಾಗಬೇಕು: ಜಗ್ಗೇಶ್ ಕಿಡಿ

ಕೋಮಲ್ ಮೇಲೆ ದಾದಾಗಿರಿ ನಡೆಸಿರುವ ಪುಂಡರಿಗೆ ತಕ್ಕ ಶಾಸ್ತಿಯಾಗಬೇಕು: ಜಗ್ಗೇಶ್ ಕಿಡಿ
ಕೋಮಲ್ ಮೇಲೆ ದಾದಾಗಿರಿ ನಡೆಸಿರುವ ಪುಂಡರಿಗೆ ತಕ್ಕ ಶಾಸ್ತಿಯಾಗಬೇಕು: ಜಗ್ಗೇಶ್ ಕಿಡಿ

ಬೆಂಗಳೂರು, ಆ 13 (ಯುಎನ್ಐ) ನಟ ಕೋಮಲ್ ಅವರ ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಪ್ರಕರಣದ ಬಗ್ಗೆ ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದು, ದಾದಾಗಿರಿ ಮಾಡಿದವರನ್ನು ಖಂಡಿತಾ ಸುಮ್ಮನೆ ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆನಟ ಕೋಮಲ್ ಅವರ ಕಾರು ಅಡ್ಡಗಟ್ಟಿದ ಹಲ್ಲೆ ನಡೆಸಿರುವ ಘಟನೆ ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ರೈಲ್ವೇ ಕೆಳ ಸೇತುವೆ ಬಳಿ ಮಂಗಳವಾರ ನಡೆದಿದೆಹಲ್ಲೆಯ ಕುರಿತು ಪ್ರತಿಕ್ರಿಯಿಸಿದ ಜಗ್ಗೇಶ್, “ನನ್ನ ತಮ್ಮ ಕೋಮಲ್, ಮಗನನ್ನು ಟ್ಯೂಶನ್ ಗೆ ಬಿಡಲು ಹೋಗುತ್ತಿದ್ದ ಶ್ರೀರಾಮಪುರ ರೈಲ್ವೇ ಅಂಡರ್ ಪಾಸ್ ಬಳಿ ಬರುತ್ತಿದಾಗ ಈ ಘಟನೆ ನಡೆದಿದೆ ನಾಲ್ಕು ಜನ ಬೈಕ್ ಸವಾರರು ಸೈಡ್ ಕೊಟ್ಟಿಲ್ಲ ಎನ್ನುವ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ ಈ ವೇಳೆ ಮೂವರು ಕೋಮಲ್ ನನ್ನು ಹಿಡಿದುಕೊಂಡಿದ್ದಾರೆ ಇನ್ನೊಬ್ಬ ಹಲ್ಲೆ ಮಾಡಿದ್ದಾನೆ ನಾಲ್ವರೂ ಪಾನಮತ್ತರಾಗಿದ್ದರು ಎಂದು ತಿಳಿದುಬಂದಿದೆ ಈ ರೀತಿ ದಾದಾಗಿರಿ ಮಾಡುವವರನ್ನು ಪೊಲೀಸರು ಸುಮ್ಮನೆ ಬಿಡಬಾರದು “ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ“ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂತಹ ಘಟನೆಗಳು ನಡೆಯಬಾರದು ನನ್ನ ತಮ್ಮ ಅಥವಾ ನಟ ಮೇಲೆ ಹಲ್ಲೆ ನಡೆದಿದೆ ಎಂದು ಈ ಮಾತು ಹೇಳುತ್ತಿಲ್ಲ. ಯಾರಿಗೂ ಕೂಡ ಹೀಗಾಗಬಾರದು. ಕುಡಿದು, ಗಾಂಜಾ ಸೇವಿಸಿದ ಪುಂಡರು ನಶೆಯಲ್ಲಿ ಈ ರೀತಿ ಗಲಾಟೆ ಮಾಡಿದರೆ ಏನು ಅರ್ಥ? ಇದರ ಹಿಂದೆ ಯಾರಿದ್ದಾರೆ? ಇಂಡಸ್ಟ್ರಿಯವರು ಮಾಡಿದ್ದಾರಾ ಅಥವಾ ಬೇರೆಯವರು ಹಲ್ಲೆ ಮಾಡಿದ್ದಾರೋ ಗೊತ್ತಿಲ್ಲ” ಎಂದಿದ್ದಾರೆ“ನಾನು ಕಳೆದ ಮೂವತ್ತು ವರ್ಷದಿಂದ ಚಿತ್ರರಂಗದಲ್ಲಿದ್ದೇನೆ ನನಗೆ ಅವಾಚ್ಯ ಪದಗಳಲ್ಲಿ ಬೈಯಲು ಬರುತ್ತದೆ ಆದರೆ ಕೋಮಲ್ ಪಾಪದವನು, ಅವನಿಗೆ ಇವೆಲ್ಲಾ ತಿಳಿಯುವುದಿಲ್ಲ ಅಂತಹ ಅಮಾಯಕನ ಮೇಲೆ ಹಲ್ಲೆ ಮಾಡಿದವರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಆಗಲೇಬೇಕು” ಎಂದು ಹರಿಹಾಯ್ದಿದ್ದಾರೆಹಲ್ಲೆಯಿಂದಾಗಿ ಕೋಮಲ್ ಮುಖ ಹಾಗೂ ಮೂಗಿಗೆ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಆದರೆ, ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಸದ್ಯ ಮಲ್ಲೇಶ್ವರಂ ಠಾಣಾ ಪೊಲೀಸರು ಹಲ್ಲೆ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಇತ್ತೀಚೆಗಷ್ಟೆ ನಟ ಕೋಮಲ್ ಅಭಿನಯದ ಕೆಂಪೇಗೌಡ 2 ಚಿತ್ರ ಬಿಡುಗಡೆಯಾಗಿದ್ದು, ರಾಜ್ಯಾದ್ಯಂತ ಪ್ರದರ್ಶನ ಕಾಣುತ್ತಿದೆ

ಯುಎನ್ಐ ಎಸ್ಎ ಎಸ್ಎಚ್ 1948

More News
`ನಾನು ಮತ್ತು ಗುಂಡ’ ಶ್ವಾನವೇ ಡಬ್ಬಿಂಗ್ ಮಾಡಿರುವ ಭಾವನಾತ್ಮಕ ಚಿತ್ರ!

`ನಾನು ಮತ್ತು ಗುಂಡ’ ಶ್ವಾನವೇ ಡಬ್ಬಿಂಗ್ ಮಾಡಿರುವ ಭಾವನಾತ್ಮಕ ಚಿತ್ರ!

21 Jan 2020 | 7:22 PM

ಬೆಂಗಳೂರು, ಜ 21 (ಯುಎನ್‍ಐ) ಶ್ವಾನ ಹಾಗೂ ಆಟೋ ಚಾಲಕನ ನಡುವಿನ ಭಾವನಾತ್ಮಕ ಸಂಬಂಧವನ್ನು ಬಿಂಬಿಸುವ ಚಿತ್ರ ‘ನಾನು ಮತ್ತು ಗುಂಡ’ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ

 Sharesee more..