Sunday, Apr 5 2020 | Time 15:55 Hrs(IST)
 • ಮಾಜಿ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
 • ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
 • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
 • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
 • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
 • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
 • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
 • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
 • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
 • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
 • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
 • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
 • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
 • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
 • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
International Share

ಕಾಬೂಲ್ ಗುರುದ್ವಾರದ ಮೇಲೆ ಆತ್ಮಾಹುತಿ ದಾಳಿ; ೧೧ ಮಂದಿ ಸಾವು

ಕಾಬೂಲ್ ಗುರುದ್ವಾರದ ಮೇಲೆ ಆತ್ಮಾಹುತಿ ದಾಳಿ; ೧೧ ಮಂದಿ ಸಾವು
ಕಾಬೂಲ್ ಗುರುದ್ವಾರದ ಮೇಲೆ ಆತ್ಮಾಹುತಿ ದಾಳಿ; ೧೧ ಮಂದಿ ಸಾವು

ಕಾಬೂಲ್ , ಮಾ ೨೫(ಯುಎನ್‌ಐ) ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿರುವ ಸಿಖ್ ಧರ್ಮೀಯರ ಗುರುದ್ವಾರದ ಮೇಲೆ ಬುಧವಾರ ಬೆಳಗ್ಗೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ೧೧ ಜನ ಮಂದಿ ಮೃತಪಟ್ಟು, ಇತರ ೧೦ ಮಂದಿ ಗಾಯಗೊಂಡಿದ್ದಾರೆ.

ಆತ್ಮಾಹತಿ ದಾಳಿಕೋರರ ಗುಂಪೊಂದು ಸ್ಥಳೀಯ ಕಾಲಮಾನ ಬೆಳಗ್ಗೆ ೭.೪೫ರ ಸುಮಾರಿನಲ್ಲಿ ಶೋರ್ ಬಜಾರ್ ನಲ್ಲಿರುವ ಗುರುದ್ವಾರಕ್ಕೆ ನುಗ್ಗಿ ಈ ದಾಳಿ ನಡೆದಿದೆ.

ಸ್ಥಳದಲ್ಲಿ ಗುಂಡಿನ ಚಕಮಕಿ ಕೊನೆಯ ವರದಿ ಬರುವವರೆಗೂ ಮುಂದುವರಿದಿತ್ತು

ದಾಳಿ ನಡೆದ ಸಂದರ್ಭದಲ್ಲಿ ಸುಮಾರು ೧೫೦ ಮಂದಿ ಗುರುದ್ವಾರದಲ್ಲಿ ಪ್ರಾರ್ಥನೆ ನಡೆಸುತ್ತಿದ್ದರು ಎಂದು ವರದಿಯಾಗಿದೆ.

ಈ ನಡುವೆ ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ದಾಳಿ ಕುರಿತಂತೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಕಾಬೂಲ್ ನಲ್ಲಿರುವ ಗುರುದ್ವಾರದ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿ ವಿಷಯ ತಿಳಿದು ಆಘಾತಕೊಳಕ್ಕಾಗಿದ್ದೇನೆ. ಗುರುದ್ವಾರದಲ್ಲಿ ಸಿಲುಕಿರುವ ಸಿಖ್ ಸಹೋದರರ ಸುರಕ್ಷತೆ ಖಾತ್ರಿ ಪಡಿಸಲು ಆಫ್ಘಾನಿಸ್ತಾನದಲ್ಲಿರುವ ಭಾರತೀಯ ಹೈ ಕಮೀಷನ್ ಗೆ ತಕ್ಷಣವೇ ಸೂಚನೆ ನೀಡಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಮನವಿ ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಈ ದಾಳಿಯ ಹೊಣೆಯನ್ನು ತಾಲಿಬಾನ್ ಸೇರಿದಂತೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ. ತಾಲಿಬಾನ್ ವಕ್ತಾರ ಝಬಿವುಲ್ಲಾ ಮುಜಾಹಿದ್, ಕಾಬೂಲ್ ನಗರದ ಶೋರ್ ಬಜಾರ್ ಗುರುದ್ವಾರ ಮೇಲೆ ನಡೆದ ದಾಳಿಯಲ್ಲಿ ಇಸ್ಲಾಮಿಕ್ ಎಮಿರೇಟ್ ಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಯುಎನ್‌ಐ ಕೆವಿಆರ್ ೧೪೩೭