Tuesday, Jan 21 2020 | Time 22:43 Hrs(IST)
 • ಸೌಹಾರ್ದತೆಯನ್ನು ಕೆಡಿಸುವ ರೇಣುಕಾಚಾರ್ಯ ಹೇಳಿಕೆ: ಎಸ್‍ಡಿಪಿಐ
 • ವುಹಾನ್‌ ವೈರಸ್‌: ಏಳು ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ
 • ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
 • ಸಿದ್ದರಾಮಯ್ಯ ವಿರುದ್ಧ ಪ್ರತಿಭಟಿಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್
 • ಅಂಧರ ಕ್ರಿಕೆಟ್: ಆಂಧ್ರ ಪ್ರದೇಶ ತಂಡಕ್ಕೆೆ ಟಿ-20 ಮುಕುಟ
 • ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಯಡಿಯೂರಪ್ಪ ಮನವಿ
 • ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಿಂದ ಇಶಾಂತ್ ಶರ್ಮಾ ಔಟ್
 • ನಾರಾಯಣ ಹೆಲ್ತ್ ಸಿಟಿಯಿಂದ ನಾಲ್ಕು ವರ್ಷದ ಮಗುವಿಗೆ ಹೃದಯ ಕಸಿ: ಮಹತ್ವದ ಸಾಧನೆ
 • ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ
 • ಅಮರಾವತಿ ಆಂಧ್ರ ರಾಜಧಾನಿಯಾಗಿ ಮುಂದುವರಿಯಲಿದೆ; ಪವನ್ ಕಲ್ಯಾಣ್
 • ಮನೆ ಮನೆಗೆ ಸಿಎಎ ವಿರುದ್ಧ ಅಭಿಯಾನ ಕೊಂಡೊಯ್ಯಲು ಜೆಡಿಎಸ್ ಸಿದ್ಧತೆ
 • ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ನೋಂದಣಿ ಇಳಿಮುಖ: ಮುಖ್ಯಚುನಾವಣಾಧಿಕಾರಿ ಬೇಸರ!
 • ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ
 • ಮೆಂಟನ್ ಕಪ್ ಶೂಟಿಂಗ್ : ಅಪೂರ್ವಿ, ದಿವ್ಯಾಂಶ್ ಗೆ ಚಿನ್ನದ ಪದಕ
 • ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!
International Share

ಭಾರತ ವಿರುದ್ದ ಅಂತರಾಷ್ಟ್ರೀಯ ಮಟ್ಟದ ಹೋರಾಟ ಕಷ್ಟ; ಸೋಲೊಪ್ಪಿಕೊಂಡ ಪಾಕ್ ವಿದೇಶಾಂಗ ಸಚಿವ !

ಭಾರತ ವಿರುದ್ದ ಅಂತರಾಷ್ಟ್ರೀಯ ಮಟ್ಟದ ಹೋರಾಟ ಕಷ್ಟ; ಸೋಲೊಪ್ಪಿಕೊಂಡ ಪಾಕ್ ವಿದೇಶಾಂಗ ಸಚಿವ !
ಭಾರತ ವಿರುದ್ದ ಅಂತರಾಷ್ಟ್ರೀಯ ಮಟ್ಟದ ಹೋರಾಟ ಕಷ್ಟ; ಸೋಲೊಪ್ಪಿಕೊಂಡ ಪಾಕ್ ವಿದೇಶಾಂಗ ಸಚಿವ ....!

ಇಸ್ಲಾಮಾಬಾದ್, ಆಗಸ್ಟ್ 13( ಯುಎನ್ಐ) ಜಮ್ಮು ಮತ್ತು ಕಾಶ್ಮೀರ ವಿಭಜನೆ, ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿದ ಭಾರತದ ಕ್ರಮಗಳ ವಿರುದ್ದ ನೆರೆಯ ದೇಶ ಪಾಕಿಸ್ತಾನ ಆಕ್ರೋಶ ವ್ಯಕ್ತಪಡಿಸುತ್ತಿರುವ ಸಂಗತಿ ಎಲ್ಲರಿಗೂ ತಿಳಿದಿರುವ ವಿಷಯ.

ಕಾಶ್ಮೀರ ವಿಭಜನೆಯ ವಿಷಯವನ್ನೇ ಮುಂದೆ ಮಾಡಿ ಭಾರತವನ್ನು ಅಂತರರಾಷ್ಟ್ರೀಯ ಸಮುದಾಯದ ಮುಂದೆ “ತಪ್ಪಿತಸ್ಥ” ದೇಶವನ್ನಾಗಿಸಲು ಪಾಕಿಸ್ತಾನ ನಡೆಸಿದ ಇನ್ನಿಲ್ಲದ ಪ್ರಯತ್ನಗಳಿಗೆ ನಿರಾಶೆಯಾಗಿದೆ

ಕಾಶ್ಮೀರ ಕುರಿತ ಭಾರತ ಕೈಗೊಂಡ ನಿರ್ಧಾರ ವಿರುದ್ದ ನಮ್ಮನ್ನು ಅಂತರರಾಷ್ಟ್ರೀಯ ಸಮುದಾಯ ಬೆಂಬಲಿಸುವ ಸಾಧ್ಯತೆ ಇಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಕಾಶ್ಮೀರ ಕುರಿತು ಭಾರತ ವಿರುದ್ಧ ಪಾಕಿಸ್ತಾನ ನೀಡಿದ ದೂರನ್ನು ಸ್ವೀಕರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಿದ್ಧವಿಲ್ಲ ಎಂದು ಖುರೇಷಿ ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು, "ಕಾಶ್ಮೀರ ವಿಷಯ ಬಳಸಿ ಭಾವನೆಗಳನ್ನು ಕೆರಳಿಸುವುದು ಹಾಗೂ ಆಕ್ಷೇಪ ವ್ಯಕ್ತಪಡಿಸುವುದು ಸುಲಭ. ಆದರೆ, ಈ ವಿಷಯದಲ್ಲಿ ಮುಂದೆ ಸಾಗುವುದು ತುಂಬಾ ಕಷ್ಟ. ಈ ವಿಚಾರದಲ್ಲಿ ಪಾಕಿಸ್ತಾನವನ್ನು ಹೂವಿನ ಹಾರ ಸ್ವಾಗತಿಸಲು ವಿಶ್ವಸಂಸ್ಥೆ ಸಿದ್ಧವಾಗಿಲ್ಲ ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ದೇಶಗಳ ಪೈಕಿ ಯಾವುದಾದರೂ ಸದಸ್ಯ ರಾಷ್ಟ್ರ ನಮಗೆ ಅಡ್ಡಿಪಡಿಸಬಹುದು. ಜನರು ವಿವೇಕಯುತವಾಗಿ ಆಲೋಚಿಸಬೇಕು ಎಂದು ಖುರೇಷಿ ಆಗ್ರಹಿಸಿದ್ದಾರೆ.

ಕಾಶ್ಮೀರ ಕುರಿತು ಭಾರತದ ನಿರ್ಧಾರವನ್ನು ರಷ್ಯಾ ಬೆಂಬಲಿಸಿದ ನಂತರ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಯುಎನ್ಐ ಕೆವಿಆರ್ ಎಸ್ ಎಲ್ ಎಸ್ 1813

More News
ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!

ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!

21 Jan 2020 | 6:33 PM

ತೆಹ್ರಾನ್, ಜ 21 (ಸ್ಪುಟ್ನಿಕ್ ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆ ಮಾಡಿದವರಿಗೆ 3 ಮಿಲಿಯನ್ ಡಾಲರ್ ಬಹುಮಾನ! ಹೀಗೆಂದು ಘೋಷಿಸಿರುವುದ ಇರಾನ್ ನ ಕೆರ್ಮಾನ್ ನಗರದ ಜನಪ್ರತಿನಿಧಿ ಅಹಮದ್ ಹಮ್ಜೇಹ್ ಎಂಬುವರು.

 Sharesee more..

ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಭಾರತೀಯರು ಸಾವು

21 Jan 2020 | 4:56 PM

 Sharesee more..

ಪಾಕಿಸ್ತಾನದಲ್ಲಿ ಗೋಧಿ ಹಿಟ್ಟಿಗಾಗಿ ಆಹಾಕಾರ !

21 Jan 2020 | 2:03 PM

 Sharesee more..