Saturday, Dec 5 2020 | Time 01:30 Hrs(IST)
Karnataka Share

ಇಸ್ರೋ ಅಧ್ಯಕ್ಷ ಕೆ ಶಿವನ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಗೌರವ ಡಾಕ್ಟರೇಟ್ ಪ್ರದಾನ

ಇಸ್ರೋ ಅಧ್ಯಕ್ಷ ಕೆ ಶಿವನ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಗೌರವ ಡಾಕ್ಟರೇಟ್ ಪ್ರದಾನ
ಇಸ್ರೋ ಅಧ್ಯಕ್ಷ ಕೆ ಶಿವನ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು, ನ 21 (ಯುಎನ್‌ಐ) ಇಸ್ರೋ ಅಧ್ಯಕ್ಷ ಮತ್ತು ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಕೆ ಶಿವನ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ರಾಜ್ಯಪಾಲ ವಜುಭಾಯ್ ವಾಲ ಅವರು ಶನಿವಾರ ನಡೆದ ಸಮಾರಂಭದಲ್ಲಿ ಸಿವನ್‍ ಅವರಿಗೆ ಡಾಕ್ಟರೇಟ್ ಪ್ರದಾನ ಮಾಡಿದರು. ಇಸ್ರೋ ಅಧ್ಯಕ್ಷರಾಗಿ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ರಾಜ್ಯಪಾಲರು ಶ್ಲಾಘಿಸಿದರು.

ಉಪಮುಖ್ಯಮಂತ್ರಿ ಡಾ ಸಿ ಎನ್‍ ಅಶ್ವಥ್‍ ನಾರಾಯಣ ಅವರು ಶಿವನ್‍ ಅವರನ್ನು ಅಭಿನಂದಿಸಿ, ಶಿವನ್ ಅವರ ನಾಯಕತ್ವದಲ್ಲಿ ಇಸ್ರೋ ಅದ್ಭುತಗಳನ್ನು ಸೃಷ್ಟಿಸುತ್ತಿದೆ. ದೇಶ ಕೈಗೊಂಡ ಅನೇಕ ಬಾಹ್ಯಾಕಾಶ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಾರೆ. ಅವರ ಮುಂದಿನ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿ ಎಂದು ಹಾರೈಸಿದರು.

ಯುಎನ್ಐ ಎಸ್ಎಲ್ಎಸ್ 2053

More News
6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ; ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ; ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

04 Dec 2020 | 9:12 PM

ಬೆಂಗಳೂರು, ಡಿ 4 (ಯುಎನ್ಐ) ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಹಸಿರು ನಿಶಾನೆ ತೋರಿರುವ ಹೈಕೋರ್ಟ್‌, ಹಿಂದಿನಂತೆ 198 ವಾರ್ಡ್‌ಗಳಿಗೆ ಆರು ವಾರಗಳಲ್ಲಿ ಚುನಾವಣೆ ನಡೆಸುವಂತೆ ಮಹತ್ವದ ಆದೇಶ ಹೊರಡಿಸಿದೆ.

 Sharesee more..