Friday, Jan 22 2021 | Time 11:01 Hrs(IST)
  • ಶಿವಮೊಗ್ಗ ದುರಂತ: ತಾವು ಹಿಂದೆಂದೂ ಕಂಡುಕೇಳರಿಯದ ಘಟನೆ- ಈಶ್ವರಪ್ಪ
  • ಇಬ್ಬರು ಅಂತಾರಾಜ್ಯ ಕನ್ನಕಳವು ಆರೋಪಿಗಳ ಬಂಧನ; 75 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
  • ಲಸಿಕೆ ಪಡೆದ ಫಲಾನುಭವಿಗಳ ಜೊತೆ ಪ್ರಧಾನಿ ಸಂವಾದ
  • ಸರ್ಕಾರದ ಪ್ರಸ್ತಾಪ ತಿರಸ್ಕರಿದ ರೈತರು, ಇಂದು 11 ನೇ ಸುತ್ತಿನ ಸಂಧಾನ ಸಭೆ
  • ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ; ಮುಖ್ಯಮಂತ್ರಿ
  • ಶಿವಮೊಗ್ಗ ದುರಂತ; ಪ್ರಧಾನಿ ಮೋದಿ ಸಂತಾಪ
  • ಶಿವಮೊಗ್ಗ ದುರಂತ; ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಆದೇಶ
  • ಕಲ್ಲು ಗಣಿಗಾರಿಕೆಗೆ ಸಾಗಿಸುತ್ತಿದ್ದ ಡೈನಮೈಟ್, ಜಿಲೆಟಿನ್ ಸ್ಫೋಟ; 8ಕ್ಕೂ ಅಧಿಕ ಮಂದಿ ಸಾವು
Karnataka Share

ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ; ಸಿದ್ದರಾಮಯ್ಯ

ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ; ಸಿದ್ದರಾಮಯ್ಯ
ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ; ಸಿದ್ದರಾಮಯ್ಯ

ಬೆಂಗಳೂರು, ಜ.13 (ಯುಎನ್ಐ) ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕೃತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ಪೂರ್ತಿ ವರ್ಷ ಮುಖ್ಯಮಂತ್ರಿಯಾಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಕಳೆದ 48 ದಿನಗಳಿಂದ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ.

ಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೆಚ್. ವಿಶ್ವನಾಥ್ ಅವರು ತಮಗೆ ಲೋಕಸಭೆಗೆ ಟಿಕೆಟ್ ಕೊಡಿಸಿದ್ದು, 2008ರಲ್ಲಿ ವಿಧಾನಸಭೆಗೆ ಟಿಕೆಟ್ ಕೊಡಿಸಿದ್ದು ಯಾರು ಎಂಬುದನ್ನು ನೆನಪು ಮಾಡಿಕೊಂಡು ಹೇಳಲಿ, ಆ ಮೇಲೆ ನನ್ನ ವಿರುದ್ಧ ಮಾತನಾಡಲಿ. ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ ಯಡಿಯೂರಪ್ಪ ಅವರೂ ಇವರನ್ನು ಮಂತ್ರಿ ಮಾಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಯುಎನ್ಐ ಎಎಚ್ 1600