Tuesday, Jun 25 2019 | Time 14:11 Hrs(IST)
 • ಜಿಂದಾಲ್ ಗೆ ಭೂಮಿ: ಲ್ಯಾಂಡ್ ಆಡಿಟ್ ಮಾಡಿಸಲು ಪಾಟೀಲ್ ಆಗ್ರಹ
 • ಕಳೆದ ಐದು ವರ್ಷದಲ್ಲಿ ದೇಶ ತುರ್ತು ಪರಿಸ್ಥಿತಿಯಲ್ಲಿ ಸಾಗಿದೆ: ಮಮತಾ ಬ್ಯಾನರ್ಜಿ
 • ಲೋಕಸಭಾ ಸದಸ್ಯರಾಗಿ ನುಸ್ರತ್ ಜಹಾನ್, ಮಿಮಿ ಚಕ್ರವರ್ತಿ ಪ್ರಮಾಣ ವಚನ
 • ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ, ಕಡ್ಡಾಯವಾಗಬೇಕೋ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ
 • ಕಾಂಗ್ರೆಸ್ ಮುಕ್ತ ಭಾರತ ಕನಸು ನನಸಾಗಲಿದೆ: ಯಡಿಯೂರಪ್ಪ
 • ಜಪಾನ್ ನೊಂದಿಗಿನ ಭದ್ರತಾ ಒಪ್ಪಂದದಿಂದ ಹಿಂದೆ ಸರಿಯಲಿದೆಯೇ ಅಮೆರಿಕ?
 • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
 • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
 • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
 • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
 • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
 • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
 • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
Karnataka Share

ಜಿಂದಾಲ್ ಸ್ಟೀಲ್ ಗೆ ಜಮೀನು ಮಾರಾಟಕ್ಕೆ ಹೊಸ ತಿರುವು : ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ

ಜಿಂದಾಲ್ ಸ್ಟೀಲ್ ಗೆ ಜಮೀನು ಮಾರಾಟಕ್ಕೆ ಹೊಸ ತಿರುವು : ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ
ಜಿಂದಾಲ್ ಸ್ಟೀಲ್ ಗೆ ಜಮೀನು ಮಾರಾಟಕ್ಕೆ ಹೊಸ ತಿರುವು : ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ

ಬೆಂಗಳೂರು, ಜೂ 12 (ಯುಎನ್ಐ) ಜಿಂದಾಲ್ ಸ್ಟೀಲ್ ಕಂಪನಿಗೆ ಗುತ್ತಿಗೆ ನೀಡಿದ್ದ 3,667 ಎಕರೆ ಜಮೀನು ಮಾರಾಟ ಪ್ರಕರಣಕ್ಕೆ ತಡೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ ಈ ಸಂಬಂಧ ಕಡತವನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಹಾಗೂ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮ್ಮತಿಸಿದ್ದಾರೆ

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಕೈಗಾರಿಕೆ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಸುಧೀರ್ಘ ಸಮಾಲೋಚನೆ ನಡೆಸಿದರು ಎನ್ನಲಾಗಿದೆ. ಸಭೆಯ ಬಳಿಕ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಸ್ಟೀಲ್ ಕಂಪನಿಗೆ ಪರಭಾರೆ ಮಾಡುವ ತೀರ್ಮಾನ ಕೈಗೊಂಡಿರುವ ಮೇ 27ರ ಸಚಿವ ಸಂಪುಟ ನಿರ್ಣಯವನ್ನು ಮರು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಸಹಮತಿ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪರಮೇಶ್ವರ್ ಹಾಗೂ ಜಾರ್ಜ್ ಅವರ ಜೊತೆ ಜಿಂದಾಲ್ ಸಂಸ್ಥೆಗೆ ಭೂಮಿ ಪರಬಾರೆ ಬಗ್ಗೆ ಚರ್ಚೆ ನಡೆಸಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ .

ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ್ ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟಕ್ಕೆ ತಡೆಯೊಡ್ಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕೈಗಾರಿಕಾ ಸಚಿವ ಕೆ ಜೆ ಜಾರ್ಜ್ ಜೊತೆ ಪತ್ರ ಸಮರ ನಡೆಸಿದ್ದರು. ಆದರೂ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಭೂಮಿ ಪರಬಾರೆ ಮಾಡುವ ನಿರ್ಧಾರ ಕೈಗೊಂಡ ಕ್ರಮಕ್ಕೆ ಬೇಸರಗೊಂಡು ಪತ್ರ ಸಮರವನ್ನು ಹೆಚ್ ಕೆ ಪಾಟೀಲ್ ತೀವ್ರಗೊಳಿಸಿದ್ದರು.

ಜಿಂದಾಲ್ ಭೂಮಿ ಮಾರಾಟ ಪ್ರಕರಣದಲ್ಲಿ ಹಾಲಿ ಮತ್ತು ಮಾಜಿ ಸಚಿವರ ತಿಕ್ಕಾಟಕ್ಕೆ ತಡೆಯೊಡ್ಡಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಧ್ಯ ಪ್ರವೇಶಿಸಿ ಸಂದಾನ ಸಭೆ ನಡೆಸಿದ್ದರು. ಅಂತಿಮವಾಗಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡಬೇಕೆ ಅಥವಾ ಮುಂದುವರಿಸಬೇಕೆ ಎಂಬುದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ಸಚಿವ ಕೆ ಜೆ ಜಾರ್ಜ್ ಭರವಸೆ ನೀಡಿದ್ದರು.

ಈ ನಡುವೆ ಬಿಜೆಪಿ ಜೂ.14 ರಿಂದ ಮೂರು ದಿನಗಳು ಅಹೋರಾತ್ರಿ ಧರಣಿ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ತಂತ್ರ ರೂಪಿಸಿತ್ತು. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರ ನಿರ್ಧಾರವನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದ್ದರು.

ಅಂತಿಮವಾಗಿ ಎಲ್ಲಾ ಆಯಾಮಗಳಿಂದ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ತೀರ್ಮಾನವನ್ನು ಮರು ಪರಿಶೀಲಿಸಲು ಸಮ್ಮತಿಸಿದ್ದಾರೆ.

ಯುಎನ್ಐ ಎಸ್ಎಂಆರ್ ವಿಎನ್ ಆರ್‌ಕೆ 0910