Wednesday, Mar 3 2021 | Time 19:22 Hrs(IST)
 • ಆರ್ಥಿಕ ಸಂಕಷ್ಟದ ನಡುವೆ ಬಜೆಟ್ ಅಧಿವೇಶನ: ಬೆಲೆ ಏರಿಕೆ, ಬಿಜೆಪಿ ಆಂತರಿಕ ಕಚ್ಚಾಟ, ಮೀಸಲಾತಿ ವಿಚಾರಗಳಲ್ಲಿ ಸರ್ಕಾರವನ್ನು ತರಾಟೆಗೆ ತೆರೆದುಕೊಳ್ಳಲು ವಿಪಕ್ಷ ಸಜ್ಜು
 • ಮೇಲ್ಮನೆಯಲ್ಲಿ ಸುಗಮ ಕಲಾಪಕ್ಕೆ ಸಭಾಪತಿ ಹೊರಟ್ಟಿ ಪೂರ್ವಭಾವಿ ಸಭೆ:ಸದಸ್ಯರಿಗೆ ಸೂಚನೆ
 • ವನ್ಯಜೀವಿಗಳನ್ನು ಕಾಪಾಡಿ, ಸಂರಕ್ಷಿಸುವಂತೆ ಜನರಿಗೆ ಉಪರಾಷ್ಟ್ರಪತಿ, ಪ್ರಧಾನಿ ಕರೆ
 • ‘ಸಂಘ’ ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿಗೆ ಇನ್ನೂ ಬಹಳಷ್ಟು ಸಮಯಬೇಕಿದೆ; ಜಾವಡೇಕರ್
 • 'ಚಿನ್ನಮ್ಮ' ಶಶಿಕಲಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಅಣ್ಣಾ ಡಿಎಂಕೆ ಮೇಲೆ ಬಿಜೆಪಿ ನಾಯಕರ ಒತ್ತಡ ?
 • ಆಪಾದನೆ ಬಂದ ಮಾತ್ರಕ್ಕೆ ಅಪರಾಧಿಯಲ್ಲ:ಬಿಸಿಪಾ
 • ನವೀಕರಿಸಬಹುದಾದ ಇಂಧನ ವಲಯಲ್ಲಿ ಭಾರತ, ಫ್ರಾನ್ಸ್ ನಡುವೆ ಸಹಕಾರ ಕುರಿತ ಒಪ್ಪಂದಕ್ಕೆ ಸಚಿವ ಸಂಪುಟ ಒಪ್ಪಿಗೆ
 • ರಾಸಲೀಲೆ ಪ್ರಕರಣ:ರಮೇಶ್ ಜಾರಕಿಹೊಳಿ ರಾಜೀನಾಮೆ
 • ಮದರಸಾಗಳಲ್ಲಿ ಭಗವದ್ಗೀತೆ, ರಾಮಾಯಣ !
 • ಹತ್ರಾಸ್ ಪ್ರಕರಣ: ಮುಖ್ಯ ಆರೋಪಿ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಣೆ
 • ಕೋವಿಡ್ ಲಸಿಕೆ ಹಾಕಿಸಿಕೊಂಡ: ರಾಷ್ಟ್ರಪತಿ ರಾಮನಾಥ್ ಕೋವಿಂದ್
 • ಲಡಾಖ್ಗೆ ಕಾಶ್ಮೀರ ಸಂಪರ್ಕಿಸುವ ಹೆದ್ದಾರಿ ಬಂದ್: ವೈಮಾನಿಕವಾಗಿ 500 ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಳಾಂತರ
 • ನಟ ತಾಪ್ಸಿ ಪನ್ನು , ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಆಸ್ತಿಗಳ ಮೇಲೆ ಐಟಿ ದಾಳಿ
 • ದೇಶಾದ್ಯಂತ ಇದುವರೆಗೆ 1 56 ಕೋಟಿ ಜನರಿಗೆ ಕೋವಿಡ್ ಲಸಿಕೆ
 • ಆ ದೇಶದಲ್ಲಿ ಒಂದೇ ದಿನ 1,641 ಮಂದಿ ಸಾವು
Karnataka Share

ತಮಿಳುನಾಡು ವಿರುದ್ಧ ಕೇಂದ್ರಕ್ಕೆ ದೂರು - ಮೇಕೆದಾಟು ಯೋಜನೆ ನಿಲ್ಲದು: ಡಿಸಿಎಂ

ತಮಿಳುನಾಡು ವಿರುದ್ಧ ಕೇಂದ್ರಕ್ಕೆ ದೂರು - ಮೇಕೆದಾಟು ಯೋಜನೆ ನಿಲ್ಲದು: ಡಿಸಿಎಂ
ತಮಿಳುನಾಡು ವಿರುದ್ಧ ಕೇಂದ್ರಕ್ಕೆ ದೂರು - ಮೇಕೆದಾಟು ಯೋಜನೆ ನಿಲ್ಲದು: ಡಿಸಿಎಂ

ಮಂಡ್ಯ, ಫೆ 22 (ಯುಎನ್ಐ) ರಾಜ್ಯದ ನೀರಾವರಿ ಹಿತಾಸಕ್ತಿ, ಯೋಜನೆ ಜಾರಿ ವಿಚಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ ಮಂಡ್ಯದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು , ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ತಮಿಳುನಾಡು ಸರಕಾರ ರೂಪಿಸಿರುವ ಯೋಜನೆಯ ವಿರುದ್ಧ ಕೇಂದ್ರಕ್ಕೆ ದೂರು ಸಲ್ಲಿಸಲಾಗುವುದು.

ಕಾವೇರಿ ನದಿಯನ್ನು ವೈಗೈ, ವಾಲ್ಲಾರು ಮತ್ತು ಗುಂಡಾರು ನದಿಗಳಿಗೆ ಜೋಡಿಸುವ ತಮಿಳುನಾಡು ಪ್ರಸ್ತಾವನೆಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರಕ್ಕೆ ಆಕ್ಷೇಪಣೆ ಸಲ್ಲಿಸುವುದಾಗಿಯೂ ಅವರು ತಿಳಿಸಿದರು. . ತಮಿಳುನಾಡು ಯೋಜನೆಯನ್ನು ತಡೆಯಲು ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ಸರಕಾರ ಮಾಡಲಿದೆ ಎಂದು ಸ್ಷಷ್ಟಪಡಿಸಿದರು.

ಈಗಾಗಲೇ ಜಾರಕಿಹೊಳಿ ಅವರು ದೆಹಲಿಗೆ ತೆರಳಿದ್ದು, ಇವತ್ತು ಕೇಂದ್ರದ ಜಲಸಂಪನ್ಮೂಲ ಸಚಿವರ ಜತೆ ಮಾತುಕತೆ ನಡೆಸಲಿದ್ದಾರೆ. ನಮ್ಮ ರಾಜ್ಯದ ನೀರಾವರಿ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳುತ್ತಿದೆ.

ಮೇಕೆದಾಟು ಯೋಜನೆ ನಿಲ್ಲದು:

ತಮಿಳುನಾಡು ಅಪಸ್ವರ ಎತ್ತಿದ್ದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ. ಅದು ಕಾರ್ಯಗತವಾಗುವುದು ಶತಃಸಿದ್ಧ. ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ . ಕುಡಿಯುವ ನೀರಿಗಾಗಿ ಕಾರ್ಯಗತ ಮಾಡುತ್ತಿರುವ ಈ ಯೋಜನೆಯನ್ನು ನಮ್ಮ ಸರಕಾರದ ಅವಧಿಯಲ್ಲೇ ಮಾಡಲಾಗುವುದು. ಇದಕ್ಕೆ ನಾಡಿನ ಜನರ ಬೆಂಬಲವಿದೆ ಎಂದು ಹೇಳಿದರು.

ಹಾಸನದಲ್ಲಿ ವಿಮಾನ ನಿಲ್ದಾಣ ಶೀಘ್ರ:

ನನೆಗುದಿಗೆ ಬಿದ್ದಿರುವ ಹಾಸನ ಜಿಲ್ಲೆಯ ವಿಮಾನ ನಿಲ್ದಾಣ ಯೋಜನೆಯನ್ನು ಆದಷ್ಟು ಬೇಗ ಮುಗಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ. ಇದರ ಜತೆಗೆ, ರಾಜ್ಯದಲ್ಲಿ ಇನ್ನೂ ಯಾವ ಯಾವ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಅಗತ್ಯವಿದೆಯೋ ಆ ಎಲ್ಲ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಬೀದರ್, ಕಾರವಾರ, ಶಿವಮೊಗ್ಗ, ಕಲಬುರಗಿಯಲ್ಲೂ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಮೀಸಲು ಪ್ರಚೋದನೆ ಬೇಡ:

ಮೀಸಲಾತಿ ಹೋರಾಟ ಅತ್ಯಂತ ಸೂಕ್ಷ್ಮ ವಿಚಾರ. ಈ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರಾಗಲಿ ಅಥವಾ ಇನ್ನಾರೇ ಪ್ರತಿಪಕ್ಷ ನಾಯಕರಾಗಲಿ ತಮ್ಮ ಹೇಳಿಕೆಗಳನ್ನು ನೀಡಬೇಡಿ ಎಂದು ಹೇಳಲಾಗುವುದಿಲ್ಲ. ಆದರೆ, ಯಾವ ರೀತಿಯ ಹೇಳಿಕೆ ಕೊಡಬೇಕು ಎಂಬುದು ಅವರವರ ವಿವೇಚನೆಗೆ ಬಿಟ್ಟಿದ್ದು. ಸರಕಾರ ಎಲ್ಲರ ಬೇಡಿಕೆಗಳನ್ನು ಗಮನಿಸುತ್ತಿದೆ. ಅಂತಿಮವಾಗಿ ಎಲ್ಲವನ್ನೂ ಪರಿಶೀಲನೆ ಮಾಡಿ ಸರಕಾರ ನ್ಯಾಯ ಸಮ್ಮತ ತೀರ್ಮಾನ ಕೈಗೊಳ್ಳಲಿದೆ ಎಂದೂ ಉಪ ಮುಖ್ಯಮಂತ್ರಿ ತಿಳಿಸಿದರು.

ಯುಎನ್ಐ ಕೆಎಸ್ಆರ್ ಎಸ್ ಎಂ ಆರ್ 1450

More News
ಮೇಲ್ಮನೆಯಲ್ಲಿ ಸುಗಮ ಕಲಾಪಕ್ಕೆ ಸಭಾಪತಿ ಹೊರಟ್ಟಿ ಪೂರ್ವಭಾವಿ ಸಭೆ:ಸದಸ್ಯರಿಗೆ ಸೂಚನೆ

ಮೇಲ್ಮನೆಯಲ್ಲಿ ಸುಗಮ ಕಲಾಪಕ್ಕೆ ಸಭಾಪತಿ ಹೊರಟ್ಟಿ ಪೂರ್ವಭಾವಿ ಸಭೆ:ಸದಸ್ಯರಿಗೆ ಸೂಚನೆ

03 Mar 2021 | 5:50 PM

ಬೆಂಗಳೂರು, ಫೆ.3(ಯುಎನ್ಐ) ನಾಳೆಯಿಂದ ಆರಂಭ ಆಗಲಿರುವ ವಿಧಾನಮಂಡಲ ಅಧಿವೇಶನ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ವಿರೋಧ ಪಕ್ಷಗಳ ಮುಖಂಡರು, ಸಭಾನಾಯಕರು, ಮುಖ್ಯಸಚೇತಕರ ಜೊತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸದನದಲ್ಲಿ ಸದಸ್ಯರ ನಡವಳಿಕೆ, ವರ್ತನೆ ಹೇಗಿರಬೇಕು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

 Sharesee more..

ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ: ನಟ‌ ದರ್ಶನ್

03 Mar 2021 | 5:16 PM

 Sharesee more..