Tuesday, Jan 21 2020 | Time 23:48 Hrs(IST)
 • ಸೌಹಾರ್ದತೆಯನ್ನು ಕೆಡಿಸುವ ರೇಣುಕಾಚಾರ್ಯ ಹೇಳಿಕೆ: ಎಸ್‍ಡಿಪಿಐ
 • ವುಹಾನ್‌ ವೈರಸ್‌: ಏಳು ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ
 • ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
 • ಸಿದ್ದರಾಮಯ್ಯ ವಿರುದ್ಧ ಪ್ರತಿಭಟಿಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್
 • ಅಂಧರ ಕ್ರಿಕೆಟ್: ಆಂಧ್ರ ಪ್ರದೇಶ ತಂಡಕ್ಕೆೆ ಟಿ-20 ಮುಕುಟ
 • ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಯಡಿಯೂರಪ್ಪ ಮನವಿ
 • ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಿಂದ ಇಶಾಂತ್ ಶರ್ಮಾ ಔಟ್
 • ನಾರಾಯಣ ಹೆಲ್ತ್ ಸಿಟಿಯಿಂದ ನಾಲ್ಕು ವರ್ಷದ ಮಗುವಿಗೆ ಹೃದಯ ಕಸಿ: ಮಹತ್ವದ ಸಾಧನೆ
 • ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ
 • ಅಮರಾವತಿ ಆಂಧ್ರ ರಾಜಧಾನಿಯಾಗಿ ಮುಂದುವರಿಯಲಿದೆ; ಪವನ್ ಕಲ್ಯಾಣ್
 • ಮನೆ ಮನೆಗೆ ಸಿಎಎ ವಿರುದ್ಧ ಅಭಿಯಾನ ಕೊಂಡೊಯ್ಯಲು ಜೆಡಿಎಸ್ ಸಿದ್ಧತೆ
 • ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ನೋಂದಣಿ ಇಳಿಮುಖ: ಮುಖ್ಯಚುನಾವಣಾಧಿಕಾರಿ ಬೇಸರ!
 • ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ
 • ಮೆಂಟನ್ ಕಪ್ ಶೂಟಿಂಗ್ : ಅಪೂರ್ವಿ, ದಿವ್ಯಾಂಶ್ ಗೆ ಚಿನ್ನದ ಪದಕ
 • ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!
Karnataka Share

ನೆರೆ ಪರಿಹಾರ ನೆಪದಲ್ಲಿ ವಂಚನೆ ಸಹಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಕಾರ್ಯದರ್ಶಿ ಶಿವಯೋಗಿ ಕಳಸದ್

ನೆರೆ ಪರಿಹಾರ ನೆಪದಲ್ಲಿ ವಂಚನೆ ಸಹಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಕಾರ್ಯದರ್ಶಿ ಶಿವಯೋಗಿ ಕಳಸದ್
ನೆರೆ ಪರಿಹಾರ ನೆಪದಲ್ಲಿ ವಂಚನೆ ಸಹಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಕಾರ್ಯದರ್ಶಿ ಶಿವಯೋಗಿ ಕಳಸದ್

ನಂಜುಂಡಪ್ಪ.ವಿ.

ಬೆಂಗಳೂರು, ಆ 13 [ಯುಎನ್ಐ] ರಾಜ್ಯದಲ್ಲಿ ವ್ಯಾಪಕ ಮಳೆ, ಭೀಕರ ಪ್ರವಾಹದಿಂದ ಆಗಿರುವ ಹಾನಿ ಹಿನ್ನೆಲೆಯಲ್ಲಿ ಪರಿಹಾರ ಕೈಗೊಳ್ಳಲು ಉದ್ಯಮಿಗಳು, ಜನಪ್ರತಿನಿಧಿಗಳು, ಚಿತ್ರೋದ್ಯಮದ ಗಣ್ಯರು, ಸಾರ್ವಜನಿಕರು ಉದಾರವಾಗಿ ನೆರವು ನೀಡದಿದ್ದರೆ ಕರ್ನಾಟಕದ ಪುನರ್ ನಿರ್ಮಾಣ ಕಷ್ಟಸಾಧ್ಯವಾಗಲಿದೆ.

ಊಹೆಗೆ ನಿಲುಕದಷ್ಟು ಬೆಳೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ಇದಕ್ಕೆ ಸೂಕ್ತ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಲು ಸಾರ್ವಜನಿಕರ ನೆರವು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಈ ಹಿನ್ನೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರದಿಂದ ಸಂಪನ್ಮೂಲ ಸಂಗ್ರಹಣೆಗೆ ಒತ್ತು ನೀಡಲಿದ್ದಾರೆ.

ಬುಧವಾರ ಯಡಿಯೂರಪ್ಪ ನಾಡಿನ ಪ್ರಮುಖ ಉದ್ಯಮಿಗಳ ಸಭೆ ಕರೆದಿದ್ದು, ಭಾರೀ ಪ್ರಮಾಣದಲ್ಲಿ ಸಂಭವಿಸಿರುವ ನೈಸರ್ಗಿಕ ವಿಪತ್ತಿಗೆ ಸೂಕ್ತ ಪರಿಹಾರ ಒದಗಿಸುವಂತೆ ಕೋರಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಾಗೂ ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್ ಈ ಕುರಿತು ಯುಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಪರಿಹಾರ ಮತ್ತು ಪುನರ್ ವಸತಿ ಕಾರ್ಯಕ್ಕೆ ಅಪಾರ ಪ್ರಮಾಣದಲ್ಲಿ ಆರ್ಥಿಕ ಸಂಪನ್ಮೂಲದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಸರಣಿ ಸಭೆಗಳನ್ನು ನಡೆಸಿ, ಎಲ್ಲಾ ವಲಯದಿಂದ ನೆರವು ಯಾಚಿಸಲಿದ್ದಾರೆ ಎಂದರು.

ಕೇಂದ್ರ ಸರ್ಕಾರ ಅಗತ್ಯ ಪ್ರಮಾಣದಲ್ಲಿ ನೆರವು ನೀಡುವ ಭರವಸೆ ಕೊಟ್ಟಿದ್ದು, ರಾಜ್ಯದ ಸಂಪನ್ಮೂಲದಿಂದಲೂ ಪರಿಹಾರ ಕಾರ್ಯಕ್ಕೆ ಹಣ ಒದಗಿಸಲಾಗುವುದು. ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹೇಗೆ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಬಹುದು ಎನ್ನುವ ಬಗ್ಗೆಯೂ ಮುಖ್ಯಮಂತ್ರಿ ಅವರು ಚರ್ಚಿಸಲಿದ್ದಾರೆ ಎಂದು ಹೇಳಿದರು.

ಇನ್ ಫೋಸಿಸ್ ಪ್ರತಿಷ್ಠಾನ ಈಗಾಗಲೇ ಹತ್ತು ಕೋಟಿ ರೂ ನೀಡುವುದಾಗಿ ಹೇಳಿದ್ದು, ಸರ್ಕಾರಿ ನೌಕರರ ಸಂಘ ಒಂದು ದಿನದ ವೇತನವನ್ನು ನೆರೆ ಸಂತ್ರಸ್ತರಿಗೆ ಕೊಡುವುದಾಗಿ ಭರವಸೆ ನೀಡಿದೆ. ಸಾರ್ವಜನಿಕ ಸಂಘ ಸಂಸ್ಥೆಗಳು, ವೈಕ್ತಿಯವಾಗಿ ಸಾರ್ವಜನಿಕರು ದೇಣಿಗೆ ನೀಡಲು ಮುಂದಾಗಬೇಕು. ಅದರಲ್ಲೂ ಪ್ರಮುಖವಾಗಿ ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಇಲ್ಲಿನ ನೋವಿಗೆ ಮಿಡಿಯಬೇಕು ಎಂದರು.

ಪ್ರಮುಖವಾಗಿ ಚಿತ್ರೋದ್ಯಮ ನಾಡಿನ ನೋವಿಗೆ ಸ್ಪಂದಿಸುವ ವಿಶ್ವಾಸವಿದ್ದು, ಇದಕ್ಕಾಗಿ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಚಿತ್ರರಂಗದ ಗಣ್ಯರು ಸಂಪನ್ಮೂಲ ಸಂಗ್ರಹಿಸಲು ಸರ್ಕಾರದೊಂದಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ತೀವ್ರ ಸಂಕಷ್ಟದಲ್ಲಿದ್ದು, ಕೆಲವು ದುಷ್ಟ ಶಕ್ತಿಗಳು ಸಾರ್ವಜನಿಕರಿಂದ ದೇಣಿಗೆ ವಸೂಲಿ ಮಾಡಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಗಳು ಸಹ ಇರುತ್ತವೆ. ಅಂತಹ ಅನುಮಾನ ಬಂದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಬೇಕು ಎಂದು ಸಹ ಶಿವಯೋಗಿ ಕಳಸದ್ ಮನವಿ ಮಾಡಿದ್ದಾರೆ.

ನೆರೆ ಪರಿಹಾರದ ಹಿನ್ನೆಲೆಯಲ್ಲಿ ದೇಣಿಗೆ ನೀಡುವವರು, ಈ ಖಾತೆಗೆ ಚೆಕ್, ಡಿಡಿ, ನೇರ ನಗದು ವರ್ಗಾವಣೆ ಮೂಲಕ ನೆರವಾಗಬಹುದು.

ಖಾತೆಯ ಹೆಸರು : chief minister relief fund natural calamity

ಬ್ಯಾಂಕ್ ಹೆಸರು : sbi bank, vidhana soudha

ಬ್ಯಾಂಕ್ ಖಾತೆ ಸಂಖ್ಯೆ ; 37887098605

ಐ.ಎಫ್.ಎಸ್.ಸಿ. ಕೋಡ್ ; sbin004027

ಎಂಐಸಿಆರ್ ಕೋಡ್ ; 560002419

ಯುಎನ್ಐ ವಿಎನ್ 1621

More News
ಜನಪ್ರತಿನಿಧಿಗಳ ಶಿಫಾರಸು ಪತ್ರ ಆಧರಿಸಿ ಮಾಡುವ ವರ್ಗಾವಣೆ ಕಾನೂನುಬಾಹಿರ; ಹೈಕೋರ್ಟ್

ಜನಪ್ರತಿನಿಧಿಗಳ ಶಿಫಾರಸು ಪತ್ರ ಆಧರಿಸಿ ಮಾಡುವ ವರ್ಗಾವಣೆ ಕಾನೂನುಬಾಹಿರ; ಹೈಕೋರ್ಟ್

21 Jan 2020 | 8:50 PM

ಬೆಂಗಳೂರು, ಜ 21 (ಯುಎನ್ಐ) ಮುಖ್ಯಮಂತ್ರಿ ಸೇರಿದಂತೆ ಹಲವು ಜನಪ್ರತಿನಿಧಿಗಳ ಶಿಫಾರಸು ಆಧರಿಸಿ ಅಧಿಕಾರಿಗಳ ವರ್ಗಾವಣೆ ಮಾಡುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಹೇಳಿದೆ.

 Sharesee more..