Tuesday, Jun 25 2019 | Time 13:41 Hrs(IST)
 • ಜಪಾನ್ ನೊಂದಿಗಿನ ಭದ್ರತಾ ಒಪ್ಪಂದದಿಂದ ಹಿಂದೆ ಸರಿಯಲಿದೆಯೇ ಅಮೆರಿಕ?
 • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
 • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
 • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
 • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
 • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
 • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
 • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
 • ಮದಲ್ ಲಾಲ್ ಸೈನಿಗೆ ಶ್ರದ್ಧಾಂಜಲಿ: ರಾಜ್ಯಸಭಾ ಕಲಾಪ ಮುಂದೂಡಿಕೆ
 • ಪಾಕಿಸ್ತಾನಕ್ಕೆ ಉಪಯುಕ್ತ ಸಲಹೆ ನೀಡಿದ ವಾಸೀಮ್‌ ಅಕ್ರಂ
 • ಕ್ವಾರ್ಟರ್‌ ಫೈನಲ್‌ ಅರ್ಹತೆ ಪಡೆಯುವಲ್ಲಿ ಜಪಾನ್‌, ಈಕ್ವೆಡಾರ್‌ ವಿಫಲ
 • ಶ್ರೀನಗರದ ಹಿರಿಯ ಪತ್ರಕರ್ತ ಬಂಧನ
 • ಕಂದಕಕ್ಕೆ ಉರುಳಿದ ಬಸ್: ಐವರು ಸಾವು, 40 ಮಂದಿಗೆ ಗಾಯ
Karnataka Share

ಪ್ರಧಾನಿ ಮೋದಿ, ಅಮಿತ್ ಷಾ ಜತೆ ರಾಜ್ಯಪಾಲ ವಜುಬಾಯಿ ವಾಲಾ ಭೇಟಿ

ಪ್ರಧಾನಿ ಮೋದಿ, ಅಮಿತ್ ಷಾ ಜತೆ ರಾಜ್ಯಪಾಲ ವಜುಬಾಯಿ ವಾಲಾ ಭೇಟಿ
ಪ್ರಧಾನಿ ಮೋದಿ, ಅಮಿತ್ ಷಾ ಜತೆ ರಾಜ್ಯಪಾಲ ವಜುಬಾಯಿ ವಾಲಾ ಭೇಟಿ

ನವದೆಹಲಿ, ಜೂನ್ 11( ಯುಎನ್ಐ) ಕರ್ನಾಟಕ ರಾಜ್ಯಪಾಲ ವಜುಬಾಯಿವಾಲಾ ದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರ್ನಾಟಕದಲ್ಲಿ ಆಡಳಿತಾರೂಢ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದ ನಡುವಣ ಸಂಬಂಧ ಕಳೆದ ಕೆಲವು ತಿಂಗಳುಗಳಿಂದ ಕುಸಿಯುತ್ತಿರುವ ನಡುವೆಯೇ ರಾಜ್ಯಪಾಲರು ಪ್ರಧಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.

ಬಳಿಕ ರಾಜ್ಯಪಾಲರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ದೇಶದಲ್ಲಿ ಎನ್ ಡಿ ಎ ಮೈತ್ರಿಕೂಟ ದಿಗ್ವಿಜಯ ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.

ರಾಜ್ಯಪಾಲರು ತಮ್ಮ ಭೇಟಿ ಸಂದರ್ಭದಲ್ಲಿ ಮೋದಿ ಮತ್ತು ಅಮಿತ್ ಷಾ ಅವರಿಗೆ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳುವ ಬೆದರಿಕೆವೊಡ್ಡುವ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಚೌಕಾಸಿ ನಡೆಸುತ್ತಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಇದೇ 14ರ ಶುಕ್ರವಾರ ನಿಗದಿಯಾಗಿದೆ. ಜತೆಗೆ ರಾಜಕೀಯವಾಗಿ ಸಾಕಷ್ಟು ಬೆಳವಣಿಗೆಗಳಾಗುವ ಸಾಧ್ಯತೆಗಳ ಬಗ್ಗೆಯೂ ವಿವರ ನೀಡಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಅರುಣಾಚಲ ಪ್ರದೇಶ ರಾಜ್ಯಪಾಲ ಬ್ರಿಗೇಡಿಯರ್ ಬಿಡಿ ಮಿಶ್ರಾ ಅವರೂ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದರು.

ಯುಎನ್ಐ ಕೆವಿಆರ್ ಎಎಚ್ ವಿಎನ್ 1721