Monday, Aug 2 2021 | Time 13:39 Hrs(IST)
  • ಕೊರೋನ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ
  • ಮೇಲ್ಮನೆ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಪರ ಮಠಾಧೀಶರು ವಕಾಲತ್ತು
  • ದೇಶದಲ್ಲಿ 41, 134 ಹೊಸ ಕೊರೋನ ಪ್ರಕರಣ: 422 ಜನರ ಸಾವು
  • ಅಫ್ಘಾನಿಸ್ತಾನದಲ್ಲಿ ನಿಲ್ಲದ ಕದನ, 20 ಮಂದಿ ಸಾವು
  • ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಅಪಘಾತ: ನಾಲ್ವರ ಸಾವು
Karnataka Share

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧಾರ: ಕೋಟಾ ಶ್ರೀನಿವಾಸ ಪೂಜಾರಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧಾರ: ಕೋಟಾ ಶ್ರೀನಿವಾಸ ಪೂಜಾರಿ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧಾರ: ಕೋಟಾ ಶ್ರೀನಿವಾಸ ಪೂಜಾರಿ

ದಾವಣಗೆರೆ, ಜುಲೈ 21(ಯುಎನ್‍ಐ)- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್‍ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ.

ಬಿ ಎಸ್ ಯಡಿಯೂರಪ್ಪ ಅವರನ್ನು ಮುಂದುವರಿಸುವ ಕುರಿತು ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಗೆ ಕಾಂಗ್ರೆಸ್ ನಾಯಕರ ಹೇಳಿಕೆಗಳು ಎಂದಿಗೂ ಮಾರ್ಗಸೂಚಿಗಳಾಗುವುದಿಲ್ಲ.

ಮಠಾಧೀಶರು ಬಹಿರಂಗವಾಗಿ ಮುಖ್ಯಮಂತ್ರಿಗೆ ಬೆಂಬಲ ನೀಡುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಅವರು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ಇದೆ. ಆದರೆ, ಈ ಕುರಿತು ಪಕ್ಷದ ನಾಯಕತ್ವವಷ್ಟೇ ನಿರ್ಧರಿಸಲಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಯುಎನ್‍ಐ ಎಸ್‍ಎಲ್ಎಸ್ 1950