Tuesday, Sep 29 2020 | Time 14:16 Hrs(IST)
  • ವಲಸೆ ಕಾರ್ಮಿಕರ ಹೊಟ್ಟೆ ತುಂಬಿಸಲು ಮಮತಾ ಕಿಚನ್ ರೆಡಿ
  • ಪಾಕ್ ರಡಾರ್ ನಲ್ಲಿ ಶ್ರೀನಗರ: ದಾರಿ ತಪ್ಪಿರುವ ಯುವಕರನ್ನು ವಾಪಸ್ ಕರೆ ತರಲು ಕ್ರಮ- ಡಿಜಿಪಿ ದಿಲ್‍ಬಾಗ್ ಸಿಂಗ್
  • ಗಾಂಜಾ ಮಾರಾಟ ಯತ್ನಿಸುತ್ತಿದ್ದವರ ಬಂಧನ
  • ಪೂಜಿಸುತ್ತಿದ್ದ ಕೃಷಿ ಉಪಕರಣಗಳಿಗೆ ಬೆಂಕಿ ಹಚ್ಚುವುದು ರೈತರನ್ನು ಅವಮಾನಿಸಿದಂತೆ: ಮೋದಿ
  • ಬಾಬ್ರಿ ಮಸೀದಿ ದ್ವಂಸ ಪ್ರಕರಣ: ನಾಳೆ ಅಂತಿಮ ತೀರ್ಪು, ಭದ್ರತೆ ಬಿಗಿ ಗೊಳಿಸಲು ರಾಜ್ಯಗಳಿಗೆ ಕೇಂದ್ರ ಆದೇಶ
  • ಮೂವರು ದರೋಡೆಕೋರರು ಬಂಧನ
  • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
  • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
  • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
  • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
  • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
  • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
  • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
  • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
  • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
Karnataka Share

ವಿಷ್ಣುವರ್ಧನ್ ಸ್ಮಾರಕಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೂಮಿಪೂಜೆ

ವಿಷ್ಣುವರ್ಧನ್ ಸ್ಮಾರಕಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೂಮಿಪೂಜೆ
ವಿಷ್ಣುವರ್ಧನ್ ಸ್ಮಾರಕಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೂಮಿಪೂಜೆ

ಬೆಂಗಳೂರು, ಸೆ.15 (ಯುಎನ್ಐ) ದಿ.ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್ ಲೈನ್ ಮೂಲಕ ಭೂಮಿ ಪೂಜೆ ನೆರವೇರಿಸಿದರು

ಬಳಿಕ ಮಾತನಾಡಿದ ಅವರು, ಡಾ.ವಿಷ್ಣುವರ್ಧನ ಅವರ 70ನೇ ವರ್ಷದ ಹುಟ್ಟುಹಬ್ಬದ, ವಿಶೇಷ ಸಂದರ್ಭದಲ್ಲಿ ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ. ವಿಷ್ಣುವರ್ಧನ್ ಕನ್ನಡ ನಾಡು ಕಂಡ ಅಪ್ರತಿಮ ಕಲಾವಿದರಲ್ಲಿ ಪ್ರಮುಖರು. ಶ್ರೇಷ್ಠ ನಾಯಕ ನಟರು ಮಾತ್ರವಲ್ಲದೇ ತಮ್ಮ ವ್ಯಕ್ತಿತ್ವದಲ್ಲೂ ಬಹಳಷ್ಟು ಶ್ರೇಷ್ಠ ಗುಣಗಳನ್ನು ಹೊಂದಿದ್ದು ಯುವಜನರಿಗೆ ಸ್ಪೂರ್ತಿಯ ಸೆಲೆಯಾಗಿದ್ದರು ಎಂದು ಬಣ್ಣಿಸಿದರು.

ತಮ್ಮ ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ” ಎಂದೇ ಪ್ರಖ್ಯಾತರಾದ ವಿಷ್ಣು ತಮ್ಮ ಶಿಸ್ತು, ಸಂಯಮಗಳಿಂದ ಎಲ್ಲರ ಪ್ರೀತಿಯನ್ನು ಗೆದ್ದಿದ್ದರು. ಕನ್ನಡ ಚಿತ್ರರಂಗಕ್ಕೆ ಡಾ. ರಾಜ್ಕುುಮಾರ್ ಅವರ ನಂತರದ ಪೀಳಿಗೆಯಲ್ಲಿ ಮಹತ್ವದ ಕೊಡುಗೆ ನೀಡಿರುವವರಲ್ಲಿ ಡಾ.ವಿಷ್ಣುವರ್ಧನ್ ಸಹ ಸೇರಿದ್ದಾರೆ. ಸತತವಾಗಿ 38 ವರ್ಷಗಳ ಕಾಲ, ನೂರಾರು ಸದಭಿರುಚಿಯ ಚಿತ್ರಗಳನ್ನು ಮಾಡುವ ಮೂಲಕ ಜನರ ಮನಸಿನಲ್ಲಿ ಶಾಶ್ವತವಾದ ಸ್ಥಾನವನ್ನು ಪಡೆದುಕೊಂಡಿದ್ದಾರೆ. “ನಾಗರಹಾವು” ಸಿನಿಮಾದಿಂದ “ಆಪ್ತರಕ್ಷಕ” ಸಿನಿಮಾವರೆಗಿನ, ಅವರ ಸಾಧನೆಯನ್ನು ನಾನು ಸಾಕಷ್ಟು ಗಮನಿಸಿದ್ದೇನೆ. ಅವರು ಸಿನಿಮಾ ರಂಗದ ಜೊತೆಗೆ ವಿಶೇಷವಾದ ಸಾಮಾಜಿಕ ಕಳಕಳಿಯನ್ನು ಹೊಂದಿದ್ದರು. ಸಮಾಜದ ಆಗು-ಹೋಗುಗಳ ಬಗ್ಗೆ ಸ್ಪಂದಿಸುವ ಮತ್ತು ಮಾನವೀಯತೆಯನ್ನು ತೋರುವ ವಿಶೇಷ ಗುಣ ಅವರಲ್ಲಿತ್ತು ಎಂದು ಯಡಿಯೂರಪ್ಪ ಹೇಳಿದರು.

ಡಾ. ವಿಷ್ಣುವರ್ಧನ್ ಅವರ ಶ್ರೀಮತಿಯವರಾದ ಪದ್ಮಶ್ರಿ ಪುರಸ್ಕೃತೆ ಡಾ. ಭಾರತಿ ವಿಷ್ಣುವರ್ಧನ್ ಅವರು ಪಂಚಭಾಷಾ ತಾರೆಯಾಗಿ, ಅತ್ಯುತ್ತಮ ಕಲಾವಿದೆಯಾಗಿ ನಮ್ಮ ನಡುವೇ ಇರುವುದು ಸಂತೋಷದ ಸಂಗತಿ. ಭಾರತಿ ದಂಪತಿ ಅಳಿಯ ಅನಿರುದ್ಧ್ ಅವರು ಉತ್ತಮ ಕಲಾವಿದರು ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ. ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಈಗಾಗಲೇ ತಡವಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಡಾ.ವಿಷ್ಣುವರ್ಧನ್ ಅವರ ತವರು ಜಿಲ್ಲೆ ಮೈಸೂರಿನಲ್ಲಿ, ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ. ಮೈಸೂರು ತಾಲ್ಲೂಕಿನ ಹೆಚ್.ಡಿ.ಕೋಟೆ ರಸ್ತೆಯ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ 5 ಎಕರೆ ಪ್ರದೇಶದಲ್ಲಿ ಪೊಲೀಸ್ ವಸತಿಗೃಹ ನಿರ್ಮಾಣ ಸಂಸ್ಥೆಯ ವತಿಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸ್ಮಾರಕ ನಿರ್ಮಾಣಕ್ಕೆ ಆಯವ್ಯಯದಲ್ಲಿ ರೂ. 11 ಕೋಟಿ ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಿಸಲು ರೂ. 5 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ವಿಷ್ಣುವರ್ಧನ್ ಸ್ಮಾರಕವು ಸುಸಜ್ಜಿತವಾಗಿ ನಿರ್ಮಾಣಗೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ. ವಿಷ್ಣುವರ್ಧನ್ ಅವರ ಕೀರ್ತಿ ಜನ ಮಾನಸದಲ್ಲಿ ಎಂದೆಂದಿಗೂ ಅಜರಾಮರವಾಗಿರಲಿ, ಇವರ ನಟನಾ ಕೌಶಲ್ಯ, ಇವರ ಸಾಧನೆಯ ಹಾದಿ ಮುಂದಿನ ಪೀಳಿಗೆಗೆ ಮಾದರಿಯಾಗಲಿ. ವಿಷ್ಣುವರ್ಧನ್ ಅವರಿಗೆ ನನ್ನ ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತಾ ಆದಷ್ಟು ಶೀಘ್ರ ಸ್ಮಾರಕದ ನಿರ್ಮಾಣ ಪೂರ್ಣಗೊಳ್ಳಬೇಕು ಎಂದು ಹೇಳಿದರು.

ಯುಎನ್ಐ ಎಸ್ಎಂಆರ್ ಎಎಚ್ 1143

More News

ಮೂವರು ದರೋಡೆಕೋರರು ಬಂಧನ

29 Sep 2020 | 12:41 PM

 Sharesee more..

ಉಡುಪಿ ಕೃಷ್ಣ ಮಠ : ಭಕ್ತರ ದರ್ಶನಕ್ಕೆ ಮುಕ್ತ

29 Sep 2020 | 12:28 PM

 Sharesee more..
ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ

ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ

29 Sep 2020 | 11:07 AM

ಬೆಂಗಳೂರು,ಸೆ.29 (ಯುಎನ್ಐ) ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ! ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

 Sharesee more..
ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್

29 Sep 2020 | 11:05 AM

ಬೆಂಗಳೂರು, ಸೆ.29 (ಯುಎನ್ಐ) ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಾಕಿರುವ ಅವರು, ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ

 Sharesee more..