Saturday, Feb 29 2020 | Time 16:05 Hrs(IST)
 • ಪ್ರತೀ ಜಿಲ್ಲೆಗೊಂದು ಮತ್ಸ್ಯದರ್ಶಿನಿ ಹೋಟೇಲು: ಬಜೆಟ್ ನಲ್ಲಿ ಹೊಸ ಯೋಜನೆ ಘೋಷಣೆ
 • ಮಲೇಷಿಯಾ ನೂತನ ಪ್ರಧಾನಿಯಾಗಿ ಮುಹಿದ್ದೀನ್ ಯಾಸಿನ್ ನೇಮಕ
 • ಮಲೇಷಿಯಾದ ನೂತನ ಪ್ರಧಾನಮಂತ್ರಿಯಾಗಿ ಮುಹಿದ್ದೀನ್ ಯಾಸಿನ್ ನೇಮಕ
 • ಭಾರತದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಟೆನಿಸ್ ಸ್ಟಾರ್ ನೊವಾಕ್ ಜೊಕೊವಿಚ್
 • ದೇಶದ ಜನರಿಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ; ಪ್ರಧಾನಿ ಮೋದಿ
 • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
 • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
 • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
 • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
 • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
 • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
 • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
 • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
 • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
 • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
Karnataka Share

ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ: ಎಚ್.ಡಿ.ದೇವೇಗೌಡ ಆರೋಪ

ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ: ಎಚ್.ಡಿ.ದೇವೇಗೌಡ ಆರೋಪ
ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ: ಎಚ್.ಡಿ.ದೇವೇಗೌಡ ಆರೋಪ

ರಾಯಚೂರು, ಫೆ.13 (ಯುಎನ್ಐ) ಹಿರಿಯ ಅಧಿಕಾರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಿದೆ, ಜನ ಸಾಮಾನ್ಯರು ಸಹ ಹೇಳುತ್ತಿದ್ದಾರೆ. ಬಿಜೆಪಿ ಪಕ್ಷದವರು ಸಹ ಭ್ರಷ್ಟಾಚಾರದ ಬಗ್ಗೆ ಹೈಕಮಾಂಡ್‌ಗೆ ದೂರು‌ ಕೊಟ್ಟಿದ್ದಾರೆ. ಈ ವ್ಯವಸ್ಥೆ ಬಗ್ಗೆ ಹಾಗೂ ಇದನ್ನು ಪವಿತ್ರ ಸರ್ಕಾರ ಎಂದು ಹೇಳುವಾಗ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು.

ರಾಯಚೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮೂರು ವರ್ಷ ಅಧಿಕಾರಾವಧಿ ಪೂರೈಸಲಿ. ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ನಮ್ಮ ವಿರೋಧವಿಲ್ಲ. ಆದರೆ ಬಿಜೆಪಿ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿಯವರೇ ಹೇಳಿದ್ದಾರೆ. ಇದನ್ನು ನಾನು ಹೇಳಿಲ್ಲ. ಮುಚ್ಚುಮರೆ ಇಲ್ಲದೆ ಬಿಜೆಪಿ ಹೇಳಿಕೊಳ್ಳುತ್ತಿದೆ. ಅದಕ್ಕೆ ಯಾರು ಕಾರಣ. ಅವರ ಪಕ್ಷದವರೇ ಭ್ರಷ್ಟಾಚಾರ ಬಗ್ಗೆ ಹೈಕಮಾಂಡ್‌ಗೆ ದೂರು ಕೊಟ್ಟಿದ್ದಾರೆ ಎಂದು ಬಹಿರಂಗಪಡಿಸಿದರು.

ಮೈತ್ರಿ ಸರ್ಕಾರ ಬಿದ್ದು ಹೋದ ಮೇಲೆ ಬಿಜೆಪಿ ಸರ್ಕಾರ ರಚನೆ ಆಗಿದೆ. ಬಿಜೆಪಿ ಪಕ್ಷದ ಹೈಕಮಾಂಡ್ ರಾಜ್ಯ ಬಿಜೆಪಿಗೆ ಸಂಪೂರ್ಣ ಅಧಿಕಾರಿ ಕೊಟ್ಟಿದೆ. ಆರೋಪ-ಪ್ರತ್ಯರೋಪ ಇರುತ್ತದೆ. ಇನ್ನೂ ಮೂರು ವರ್ಷ ಬಿಜೆಪಿ ರಾಜ್ಯ ಆಳಿದರೆ ಸಂತೋಷ. ಅನರ್ಹರು ಗೆದ್ದವರಿಗೆ ಅಧಿಕಾರಿಗಳ ಹಂಚಿಕೆಯಲ್ಲಿ ವ್ಯತ್ಯಾಸ ಇದೆಯೋ, ಇಲ್ಲವೋ ಎಂಬುದನ್ನು ನಾನು ವ್ಯಾಖ್ಯಾನ ಮಾಡುವುದಿಲ್ಲ. 58 ವರ್ಷ ರಾಜಕೀಯ ಮಾಡಿದ್ದೇನೆ, ಈ ರಾಜಕೀಯ ನಡವಳಿಕೆ ಸಾಕಾಗಿದೆ ಎಂದು ದೇವೇಗೌಡ ಹೇಳಿದರು.

ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳ ಪಾತ್ರ ಏನು ಎನ್ನುವುದು ನನ್ನ ಪ್ರಶ್ನೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದೇನೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ದೆಹಲಿಯಲ್ಲಿ ಶೇಕಡಾವಾರು ಮತದಾನ ಬಿಜೆಪಿಗೆ ಕಡಿಮೆಯಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ಮೂರು ಚುನಾವಣೆಯಲ್ಲಿ ಸೋತಿದೆ. ಜನರಿಗೆ ಬದಲಾವಣೆ ಬೇಕಿದೆ. ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತಮಿಳುನಾಡು, ಕೇರಳದಲ್ಲಿ ಕಷ್ಟವಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಅಸ್ತಿತ್ವ ಇಲ್ಲ ಎಂದು ದೇವೇಗೌಡ ಭವಿಷ್ಯ ನುಡಿದರು.

ಯುಎನ್ಐ ಎಸ್‌ಎಂಆರ್ ಎಎಚ್ 2133

More News