Wednesday, Feb 26 2020 | Time 11:23 Hrs(IST)
  • ಕಾರ್ಮಿಕನ ಬರ್ಬರ ಹತ್ಯೆ
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
Karnataka Share

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ರೂ.ಲಕ್ಷಕ್ಕೆ ಹೆಚ್ಚಳ: ಯಡಿಯೂರಪ್ಪ

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ರೂ.ಲಕ್ಷಕ್ಕೆ ಹೆಚ್ಚಳ: ಯಡಿಯೂರಪ್ಪ
ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ರೂ.ಲಕ್ಷಕ್ಕೆ ಹೆಚ್ಚಳ: ಯಡಿಯೂರಪ್ಪ

ಬೆಂಗಳೂರು, ಸೆ. 11 (ಯುಎನ್‌ಐ) ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ನಗರದ ಅರಣ್ಯ ಭವನದಲ್ಲಿಂದು ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದ ನಂತರ ಮಾತನಾಡಿ,

ರಾಜ್ಯದಲ್ಲಿ ಒಟ್ಟು ಭೌಗೋಳಿಕ ವಿಸ್ತೀರ್ಣದ ಶೇ. 22ರಷ್ಟು ಅರಣ್ಯ ಪ್ರದೇಶ ಇರುವುದು ನೆಮ್ಮದಿ ನೀಡುವ ವಿಚಾರ. ಇದಕ್ಕಾಗಿ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಯ ಕಾಯಕ ಶ್ಲಾಘನೀಯ ಎಂದರು.

ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿರುವಾಗ ಮೃತಪಟ್ಟರೆ ನೀಡುವ ಪರಿಹಾರ ಮೊತ್ತವನ್ನು ಪೊಲೀಸ್ ಇಲಾಖೆಗೆ ಸರಿ ಸಮನಾಗಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಅಲ್ಲದೆ, ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೂ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ದಿನಗೂಲಿ ನೌಕರರ ಸಮಸ್ಯೆ ಕುರಿತು ಸಹ ಚರ್ಚಿಸಿ ಶೀಘ್ರವೇ ಕ್ರಮ ಕೈಗೊಳ್ಳುವುದು. ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ಸರ್ವೋಚ್ಛ ತ್ಯಾಗವನ್ನು ಮಾಡಿದಂತಹ ಸಮರ್ಪಣಾ ಮನೋಭಾವದ ಹಲವಾರು ಅರಣ್ಯ ಅಧಿಕಾರಿಗಳ ಹೆಸರುಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಇಂದಿಗೂ ಹಚ್ಚಹಸಿರಾಗಿ ರಾರಾಜಿಸುತ್ತಿವೆ. ಇವರ ಅಸಾಧಾರಣ ಪ್ರಯತ್ನಗಳು, ಧೈರ್ಯಶೀಲ ಕಾರ್ಯಗಳು ಅಪಾಯಕ್ಕೆ ಒಳಗಾದ, ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ವನ್ಯಜೀವಿಗಳನ್ನು ಸಂರಕ್ಷಿಸಿ ಕಾಪಾಡಲು ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿದೆ ಎಂದು ಮುಖ್ಯಮಂತ್ರಿ ಗಳು ಬಣ್ಣಿಸಿದರು.

ಅರಣ್ಯ ಸಂಪತ್ತಿನ ರಕ್ಷಣೆ ಮಾಡುವಾಗ ದುರಾದೃಷ್ಟವಶಾತ್ ಕಳ್ಳಕಾಕರ, ವನ್ಯಪ್ರಾಣಿಗಳ ಹಾಗೂ ಇತರೆ ದುಷ್ಟಶಕ್ತಿಗಳ ದಾಳಿಗೆ ಸಿಲುಕಿ ಈವರೆಗೆ 47 ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ.

ಈ ಹಿಂದೆ ಕುಖ್ಯಾತ ಕಾಡುಗಳ್ಳ ವೀರಪ್ಪನ್‍ನ ಮೋಸದ ಬಲೆಗೆ ಸಿಲುಕಿ ಶ್ರೀ ಪಿ. ಶ್ರೀನಿವಾಸ್, ಭಾರತೀಯ ಅರಣ್ಯ ಸೇವಾ ಅಧಿಕಾರಿ ಇವರು ಹುತಾತ್ಮರಾಗಿದ್ದರು. ಇವರು ಸಹ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಇವರ ಕಾರ್ಯದಕ್ಷತೆ ಪ್ರಾಮಾಣಿಕತೆ ಹಾಗೂ ಅಮೋಘ ಸೇವೆಯನ್ನು ಮೆಚ್ಚಿ ಭಾರತ ಸರ್ಕಾರ ಇವರಿಗೆ “ಕೀರ್ತಿ ಚಕ್ರ” ಶೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿರುವುದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಕರ್ತವ್ಯ ನಿರ್ವಹಿಸುವಾಗ ಕಾಡಾನೆಯ ದಾಳಿಯಿಂದ ಮೃತಪಟ್ಟ ಕ್ಷೇಮಾಭಿವೃದ್ಧಿ ನೌಕರರಾದ ಕಾವೇರಿ ವನ್ಯಜೀವಿ ವಿಭಾಗದ ಅಲಗಾ ಹಾಗೂ ಹಾಸನ ವಿಭಾಗದ ಎಲ್.ಎನ್. ಅಣ್ಣೇಗೌಡ ಇವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಅವರು ಆನೆಗಳ ದಾಳಿಯಿಂದ ಪ್ರಾಣ ಹಾನಿ, ರೈತರ ಬೆಳೆ ಹಾನಿ ಹಾಗೂ ಆರ್ಥಿಕ ಸಂಕಷ್ಟವನ್ನು ಪರಿಗಣಿಸಿ ಮಾನವ – ಆನೆ ಸಂಘರ್ಷ ನಿಯಂತ್ರಣಕ್ಕೆ ಸರ್ಕಾರ ಯೋಜನೆ ರೂಪಿಸಿದೆ.

ರಾಜ್ಯದ ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯನ್ನು ಇನ್ನಷ್ಟು ಸದೃಢಗೊಳಿಸಬೇಕಾಗಿದ್ದು, ಅದಕ್ಕಾಗಿ ವಿವಿಧ ಹಂತದ ಕ್ಷೇತ್ರ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಲು ಸರ್ಕಾರ ಕ್ರಮ ಕೈಗೊಂಡಿರುತ್ತದೆ ಎಂದರು.

ಅರಣ್ಯ ಪ್ರದೇಶಗಳಲ್ಲಿ ಬೇಟೆ ಹಾಗೂ ಅಕ್ರಮ ಚಟುವಟಿಕೆಗಳ ನಿಗ್ರಹಕ್ಕಾಗಿ ಅತ್ಯಾಧುನಿಕ ಸಲಕರಣೆಗಳನ್ನು ಅರಣ್ಯ ಸಿಬ್ಬಂದಿಗೆ ಪೂರೈಸಲಾಗುತ್ತಿದೆ. ಈ ಕ್ರಮ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರೊಂದಿಗೆ ಕಳ್ಳಬೇಟೆ ಮೇಲೂ ಕಣ್ಣಿಡಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂದೀಪ್ ದವೆ , ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನ ಟಿ ಶ್ರೀಧರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಯುಎನ್‌ಐ ಎಸ್‌ಎಂಆರ್‌ ಆರ್‌ಕೆ 1344

More News
2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ

2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ

26 Feb 2020 | 10:50 AM

ಬೆಂಗಳೂರು, ಫೆ 26 (ಯುಎನ್ಐ) ಇತ್ತೀಚೆಗಷ್ಟೇ ಬಂಧನವಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಆತನ ವಿರುದ್ಧ ತಿಲಕ್ ನಗರದಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಬುಧವಾರ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

 Sharesee more..
ಸೌಮ್ಯಾರೆಡ್ಡಿ ಈಗ  ಆದರ್ಶ ಯುವ ಶಾಸಕಿ

ಸೌಮ್ಯಾರೆಡ್ಡಿ ಈಗ ಆದರ್ಶ ಯುವ ಶಾಸಕಿ

26 Feb 2020 | 10:46 AM

ಬೆಂಗಳೂರು,ಫೆ. 26 (ಯುಎನ್‌ಐ) ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯರೆಡ್ಡಿ ಆದರ್ಶಿ ಯುವ ಶಾಸಕಿ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಉತ್ತಮ ಸೇವಾ ಕಾರ್ಯಗಳಿಗಾಗಿ ಭಾರತೀಯ ಛಾತ್ರಾ ಸಂಸದ್ ಸೌಮ್ಯರೆಡ್ಡಿ ಅವರಿಗೆ "ಆದರ್ಶ ಯುವ ಶಾಸಕಿ" ಪ್ರಶಸ್ತಿ ನೀಡಿ ಗೌರವಿಸಿದೆ.

 Sharesee more..

ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

26 Feb 2020 | 10:09 AM

 Sharesee more..