Wednesday, Feb 26 2020 | Time 12:00 Hrs(IST)
 • ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 20ಕ್ಕೆ ಏರಿದೆ
 • ಕಾಶ್ಮೀರದ ಬುದ್ಗಾಮ್‌ನಲ್ಲಿ ಎನ್‌ಐಎ ದಾಳಿ
 • ದೆಹಲಿ ಹಿಂಸಾಚಾರ: ಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
 • ಕಾರ್ಮಿಕನ ಬರ್ಬರ ಹತ್ಯೆ
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
National Share

ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ಭೇಟಿಯಾದ ಮೋದಿ

ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ಭೇಟಿಯಾದ ಮೋದಿ
ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿಯನ್ನು ಭೇಟಿಯಾದ ಮೋದಿ

ನವದೆಹಲಿ, ಸೆ 10 (ಯುಎನ್ಐ) ಸೈಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್ ಪ್ರಧಾನಿ ಡಾ. ರಾಲ್ಫ್ ಎವರಾರ್ಡ್ ಗೋನ್ಸಲ್ವೇಸ್ ಅವರು ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದು, ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಗೋನ್ಸಲ್ವೇಸ್ ಅವರು ಇಲ್ಲಿ ನಡೆಯಲಿರುವ ಮರುಭೂಮೀಕರಣವನ್ನು ತಡೆಯುವ ಕುರಿತ ವಿಶ್ವಸಂಸ್ಥೆಯ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತದ ಕುರಿತು ಸೈಂಟ್ ವಿನ್ಸೆಂಟ್, ಗ್ರೆನಡೈನ್‌, ಕೆರೆಬಿಯನ್ ಹಾಗೂ ಲ್ಯಾಟಿನ್ ಅಮೆರಿಕ ಪ್ರದೇಶದಲ್ಲಿ ಉತ್ತಮ ಅಭಿಪ್ರಾಯವಿದೆ. ತಮ್ಮ ದೇಶದ ಅಭಿವೃದ್ಧಿಗೆ ಭಾರತ ಮುಕ್ತ ಸಹಕಾರ ನೀಡಿದ್ದು, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ನೆರವಿಗೆ ಧಾವಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಪ್ರಧಾನಿ ಮೋದಿ ಮಾತನಾಡಿ, ಉಭಯ ರಾಷ್ಟ್ರಗಳ ನಡುವಿನ ಆಪ್ತ ಬಾಂಧವ್ಯವನ್ನು ಉಲ್ಲೇಖಿಸಿದರು. ಜೊತೆಗೆ, ವಿಶ್ವ ಸಂಸ್ಥೆಯ ಭದ್ರತಾ ಪರಿಷತ್ತಿನ ಶಾಶ್ವತವಲ್ಲದ ಸದಸ್ಯರಾಗಿ ಆಯ್ಕೆಯಾದ 'ಅತಿ ಸಣ್ಣ ದೇಶ' ಎಂಬ ಹೆಗ್ಗಳಿಕೆಗೆ ಪಾತ್ರವಾದ ವಿನ್ಸೆಂಟರ್ ಹಾಗೂ ಗ್ರೆನಡೈನ್ಸ್ ದೇಶವನ್ನು ಅಭಿನಂದಿಸಿದರು.

ಈ ನಾಯಕರು ಉಭಯ ರಾಷ್ಟ್ರಗಳ ನಡುವಿನ ಅಭಿವೃದ್ಧಿ, ತರಬೇತಿ, ಶಿಕ್ಷಣ, ಹಣಕಾಸು ಹಾಗೂ ವಿಪತ್ತು ನಿರ್ವಹಣಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಮುಂದುವರಿಸಲು ಒಪ್ಪಿಗೆ ಸೂಚಿಸಿದರು.

ಯುಎನ್ ಐ ಎಸ್ಎಚ್ ಎಎಚ್ 1543

More News
ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ

ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ

26 Feb 2020 | 11:05 AM

ನವದೆಹಲಿ, ಫೆ 26 (ಯುಎನ್ಐ) ಪೌರತ್ವ ತಿದ್ದುಪಡಿ, ಪರ- ವಿರೋಧಿ ಗಲಭೆ, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಈಗ, ಬುಧವಾರ 17 ಕ್ಕೆ ಏರಿಕೆಯಾಗಿದೆ ಎಂದು ಜಿಟಿಬಿ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

 Sharesee more..

"ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು

26 Feb 2020 | 11:01 AM

ನವದೆಹಲಿ, ಫೆ.26 (ಯುಎನ್ಐ) ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ಘೇರಾವ್ ಮಾಡಿದ ಪ್ರತಿಭಟನಕಾರರ ಗುಂಪನ್ನು ದೆಹಲಿ ಪೊಲೀಸರು ಬುಧವಾರ ಮುಂಜಾನೆ ಚದುರಿಸಿದ್ದಾರೆ.

 Sharesee more..