Wednesday, Feb 26 2020 | Time 12:42 Hrs(IST)
 • ದೆಹಲಿ ಹಿಂಸಾಚಾರ; ಮೃತರ ಸಂಖ್ಯೆ 20ಕ್ಕೇರಿಕೆ, ಸೇನೆ ನಿಯೋಜನೆಗೆ ಕೇಜ್ರೀವಾಲ್ ಮನವಿ
 • ಗಲಭೆ ಕೋರರನ್ನು ಮಟ್ಟ ಹಾಕಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಖಡಕ್ ಎಚ್ಚರಿಕೆ
 • ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 20ಕ್ಕೆ ಏರಿದೆ
 • ಕಾಶ್ಮೀರದ ಬುದ್ಗಾಮ್‌ನಲ್ಲಿ ಎನ್‌ಐಎ ದಾಳಿ
 • ದೆಹಲಿ ಹಿಂಸಾಚಾರ: ಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
 • ಕಾರ್ಮಿಕನ ಬರ್ಬರ ಹತ್ಯೆ
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
Special Share

AGITATION-AP CHALO ATMAKURU-TDP

AGITATION-AP CHALO ATMAKURU-TDP
AGITATION-AP CHALO ATMAKURU-TDP

ವಿಜಯವಾಡ, ಸೆ 11 (ಯುಎನ್‌ಐ) ತೆಲುಗುದೇಶಂ ಪಕ್ಷದ ನಾಯಕರ ಬಂಧನ ಹಾಗೂ ಚಂದ್ರಬಾಬು ನಾಯ್ಡು ಅವರ ಗೃಹಬಂಧನ ವಿರೋಧಿಸಿ ಹಮ್ಮಿಕೊಂಡಿರುವ 'ಚಲೋ ಆತ್ಮಕೂರು' ಕಾರ್ಯಕ್ರಮ ವಿಫಲಗೊಳಿಸುವ ಯತ್ನವಾಗಿ ಪೊಲೀಸರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ದಿನವಿಡೀ ಉಪವಾಸ ಆರಂಭಿಸಿದ ತೆಲುಗು ದೇಶಂ ಪಕ್ಷದ (ಟಿಡಿಪಿ) ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಗುಂಟೂರು ನಗರ ಪೊಲೀಸ್ ವರಿಷ್ಠಾಧಿಕಾರಿ ರಾಮ ಕೃಷ್ಣ ನೇತೃತ್ವದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಗರಕ್ಕೆ ಸಮೀಪದ ತಾಡೆಪಲ್ಲಿಯಲ್ಲಿರುವ ನಾಯ್ಡು ಅವರ ನದಿ ಮುಂಭಾಗದ ನಿವಾಸದಲ್ಲಿ ಬುಧವಾರ ನಿಯೋಜಿಸಲಾಗಿದೆ.

ಪೊಲೀಸರು ನಾಯ್ಡು ನಿವಾಸವನ್ನು ಸುತ್ತುವರಿದು, ಟಿಡಿಪಿ ನಾಯಕರು ಮನೆ ಪ್ರವೇಶಿಸದಂತೆ ತಡೆದರು. ನಾಯ್ಡು ಅವರು ಇಂದು ಆತ್ಮಕೂರಿಗೆ ಹೋಗುವುದು ನಿಶ್ಚಿತ ಎಂದು ಟಿಡಿಪಿ ನಾಯಕರು ಹೇಳಿದ್ದಾರೆ.

ಇಂದು ಬೆಳಿಗ್ಗೆ ಟಿಡಿಪಿ ನಾಯಕರೊಂದಿಗೆ ವಿಡಿಯೋ ಸಂವಾದ ನಡೆಸಿದ ನಾಯ್ಡು, ಪೊಲೀಸರ ಕ್ರಮವನ್ನು ಪ್ರಜಾಪ್ರಭುತ್ವ ವಿರೋಧಿ ಹಾಗೂ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕ್ರಮ ಎಂದು ಆರೋಪಿಸಿದ್ದಾರೆ.

ಆಡಳಿತಾರೂಢ ವೈಎಸ್‌ಆರ್‌ಸಿಪಿ ಪಕ್ಷದ ಕಾರ್ಯಕರ್ತರಿಂದ ದೌರ್ಜನ್ಯಕ್ಕೆ ಒಳಗಾಗಿ ಗುಂಟೂರಿನ ಅರಾಂಡಲ್‌ಪೇಟ್‌ನ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭೇಟಿಯಾಗಲು ಟಿಡಿಪಿ ಮುಖಂಡರಿಗೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ.

ಪರಿಹಾರ ಶಿಬಿರದಲ್ಲಿ ಸಂತ್ರಸ್ತರು ಉಪಾಹಾರ ತೆಗೆದುಕೊಳ್ಳುವುದನ್ನೂ ಪೊಲೀಸರು ತಡೆದಿದ್ದಾರೆ ಎಂದು ಟಿಡಿಪಿ ನಾಯಕರು ಆರೋಪಿಸಿದ್ದಾರೆ.

ಪೊಲೀಸರು ಕೆಲ ಟಿಡಿಪಿ ನಾಯಕರನ್ನು ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೂ ಕೆಲ ನಾಯಕರನ್ನು ಅವರ ಮನೆಗಳಲ್ಲಿ ಬಂಧಿಸಲಾಗಿದೆ. ಈ ಮಧ್ಯೆ, ಇಂದು ಪ್ರತಿಭಟನೆ ಮತ್ತು ಸಾರ್ವಜನಿಕ ಸಭೆ ನಡೆಯಬೇಕಿದ್ದ ಪಾಲ್ನಾಡು ಪ್ರದೇಶದ ಆತ್ಮಕೂರು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಇತ್ತು. ಗ್ರಾಮದಲ್ಲಿ ಬೃಹತ್ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು.ಆಡಳಿತಾರೂಢ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಟಿಡಿಪಿ ಕಾರ್ಯಕರ್ತರ ಮೇಲೆ ದೌರ್ಜನ್ಯಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷ ಟಿಡಿಪಿ 'ಚಲೋ ಆತ್ಮಕೂರು' ಪ್ರತಿಭಟನೆಗೆ ಕರೆ ನೀಡಿರುವುದನ್ನು ಇಲ್ಲಿ ಗಮನಿಸಬಹುದು.

ಆಡಳಿತಾರೂಢ ವೈಎಸ್‌ಆರ್‌ಸಿಪಿ ಸಹ ಇದೇ ಕರೆ ನೀಡಿರುವುದರಿಂದ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ವೈಎಸ್ಆರ್‌ಸಿಪಿ ಮುಖಂಡರಿಗೆ 'ಚಲೋ ಆತ್ಮಕೂರು' ಕಾರ್ಯಕ್ರಮ ನಡೆಸುವುದಕ್ಕೆ ಪೊಲೀಸರು ನಿರಾಕರಿಸಿದ್ದಾರೆ.

ಯುಎನ್‌ಐ ಎಸ್‌ಎಲ್‌ಎಸ್ ಕೆವಿಆರ್ 1157