Saturday, Aug 15 2020 | Time 10:18 Hrs(IST)
  • ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿಯ ಹೊಸಪರ್ವವೇ ಆರಂಭ; ಸ್ವಾತಂತ್ರ್ಯ ದಿನದ ಸಂದೇಶದಲ್ಲಿ ಕೆ ಎಸ್ ಈಶ್ವರಪ್ಪ
  • ಭಾನುವಾರದಿಂದ ಮಾತಾ ವೈಷ್ಣೋ ದೇವಿ ಯಾತ್ರೆ ಆರಂಭ
  • ಭಾರತೀಯರು ಸ್ಥಳೀಯರ ಧ್ವನಿಯಾಗಬೇಕು- ಪ್ರಧಾನಿ ಪ್ರತಿಪಾದನೆ
  • ನಾಡಿನ ಜನತೆಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಕೋರಿದ ಮುಖ್ಯಮಂತ್ರಿ
  • ಆತ್ಮನಿರ್ಭರ ಭಾರತ, ಪ್ರತಿ ಭಾರತೀಯರ ದಿವ್ಯ ಮಂತ್ರ: ಪ್ರಧಾನಿ
  • ಅಧಿಕೃತ ನಿವಾಸದಲ್ಲೇ ಧ್ವಜಾರೋಹಣ ನೆರವೇರಿಸಿದ ರಾಜನಾಥ್ ಸಿಂಗ್
  • ಕರೋನ ಸಮರದಲ್ಲಿ ಗೆಲ್ಲುವುದೆ ನಮ್ಮ ಮುಖ್ಯ ಗುರಿ: ಮೋದಿ
  • ಡಿ ಜೆ ಹಳ್ಳಿ ಗಲಭೆ ಪ್ರಕರಣ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ಮಾಡಿ ರಾಜ್ಯ ಸರ್ಕಾರದ ಆದೇಶ
business economy Share

ಆಸ್ಪತ್ರೆಯಿಂದಲೇ ಜಿ ಎಸ್ ಟಿ ಸಭೆಯಲ್ಲಿ ಸಿಎಂ ಭಾಗಿ

ಪುದುಚೇರಿ, ನ 30 (ಯುಎನ್‌ಐ) ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಜಿಎಸ್‌ಟಿ ಮಂಡಳಿ ಸಭೆಗೆ ಆಸ್ಪ್ರತ್ರೆಯಲ್ಲಿ ಮಲಗಿಯೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿರುವುದು ವಿಶೇಷವಾಗಿದೆ.
ನಾರಾಯಣಸಾಮಿ ಅವರ ಕಾಲಿಗೆ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಅವರೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.
ಕೇರಳ ಹಣಕಾಸು ಸಚಿವ ಥಾಮಸ್ ಇಸಾಕ್ ಅಧ್ಯಕ್ಷತೆಯಲ್ಲಿ ಜಿ ಎಸ್ ಟಿ ಮಂಡಳಿ ಸಭೆ ನಡೆದಿದ್ದು ಈ ಸಭೆಯಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ, ದೆಹಲಿ, ಪಂಜಾಬ್ ಮತ್ತು ರಾಜಸ್ತಾನದ ಹಣಕಾಸು ಸಚಿವರು ಭಾಗವಹಿಸಿದ್ದರು.
ಜಿ ಎಸ್ ಟಿ ಪರಿಹಾರ ಪಾವತಿ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲರಿಗೂ ವಾಪಸಾತಿ ಮೊತ್ತವನ್ನು ಶೀಘ್ರವಾಗಿ ಬಿಡುಗಡೆ ಮಾಡುವ ಸಂಬಂಧ ಸಭೆ ನಡೆದು ಸರ್ವಸಮ್ಮತ ಪರಿಹಾರ ಸೂತ್ರ ಹೊರಹೊಮ್ಮುವ ಸಂಭವವಿದೆ.

ಅನಾರೋಗ್ಯದ ನಿಮಿತ್ತ ಮುಖ್ಯಮಂತ್ರಿ ನಾರಾಯಣಸಾಮಿ ಆಸ್ಪತ್ರೆಯಿಂದಲೇ ವಿಡಿಯೋ ಸಂವಾದದ ಮೂಲಕ ಜಿ ಎಸ್ ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದುದು ಇಂದಿನ ವಿಶೇಷವಾಗಿತ್ತು.
ಯುಎನ್ಐ ಕೆಎಸ್ಆರ್ 1429