Saturday, Aug 15 2020 | Time 10:13 Hrs(IST)
  • ಭಾನುವಾರದಿಂದ ಮಾತಾ ವೈಷ್ಣೋ ದೇವಿ ಯಾತ್ರೆ ಆರಂಭ
  • ಭಾರತೀಯರು ಸ್ಥಳೀಯರ ಧ್ವನಿಯಾಗಬೇಕು- ಪ್ರಧಾನಿ ಪ್ರತಿಪಾದನೆ
  • ನಾಡಿನ ಜನತೆಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಕೋರಿದ ಮುಖ್ಯಮಂತ್ರಿ
  • ಆತ್ಮನಿರ್ಭರ ಭಾರತ, ಪ್ರತಿ ಭಾರತೀಯರ ದಿವ್ಯ ಮಂತ್ರ: ಪ್ರಧಾನಿ
  • ಅಧಿಕೃತ ನಿವಾಸದಲ್ಲೇ ಧ್ವಜಾರೋಹಣ ನೆರವೇರಿಸಿದ ರಾಜನಾಥ್ ಸಿಂಗ್
  • ಕರೋನ ಸಮರದಲ್ಲಿ ಗೆಲ್ಲುವುದೆ ನಮ್ಮ ಮುಖ್ಯ ಗುರಿ: ಮೋದಿ
  • ಡಿ ಜೆ ಹಳ್ಳಿ ಗಲಭೆ ಪ್ರಕರಣ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ಮಾಡಿ ರಾಜ್ಯ ಸರ್ಕಾರದ ಆದೇಶ
Entertainment Share

ಈ ವಾರ ತೆರೆಗೆ ‘ಕಥಾ ಸಂಗಮ’

ಈ ವಾರ ತೆರೆಗೆ ‘ಕಥಾ ಸಂಗಮ’
ಈ ವಾರ ತೆರೆಗೆ ‘ಕಥಾ ಸಂಗಮ’

ಬೆಂಗಳೂರು, ಡಿ ೦೨ (ಯುಎನ್‌ಐ) ಈ ಹಿಂದೆ ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಾರಥ್ಯದಲ್ಲಿ ಮೂಡಿಬಂದಿದ್ದ ’ಕಥಾ ಸಂಗಮ’ ಪ್ರೇಕ್ಷಕರನ್ನು ಆಕರ್ಷಿಸಿತ್ತು ವಿಭಿನ್ನ ಪ್ರಯೋಗ ಎಂಬ ಮೆಚ್ಚುಗೆಗೆ ಪಾತ್ರವಾಗಿತ್ತು ಈಗ ಅದೇ ಶೀರ್ಷಿಕೆಯೊಂದಿಗೆ ರಿಷಬ್ ಶೆಟ್ಟಿ ಫ಼ಿಲಂಸ್ ಹಾಗೂ ಶ್ರೀದೇವಿ ಎಂಟರ್‍ಟೈನರ್ಸ್ ಲಾಂಛನದಲ್ಲಿ ರಿಷಬ್ ಶೆಟ್ಟಿ, ಕೆ ಹೆಚ್ ಪ್ರಕಾಶ್ ಹಾಗೂ ಪ್ರದೀಪ್ ಎನ್ ಆರ್ ನಿರ್ಮಿಸಿರುವ ‘ಕಥಾ ಸಂಗಮ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ

ಏಳು ಕಥೆಗಳ ಸಂಗಮವಿರುವ ಈ ಚಿತ್ರವನ್ನು ಏಳು ಜನ ನಿರ್ದೇಶಕರು ನಿರ್ದೇಶಿಸಿದ್ದಾರೆ ಮೊದಲ ಕಥೆಯನ್ನು ಶಶಿಕುಮಾರ್ ನಿರ್ದೇಶಿಸಿದ್ದು, ಜಯಂತ್ ಸೀಗೆ ಕಥೆ, ಚಿತ್ರಕಥೆ ಬರೆದಿದ್ದಾರೆ ಸಂಭಾಷಣೆಯನ್ನು ರಾಜ್ ಬಿ ಶೆಟ್ಟಿ, ಅನಿರುದ್ಧ್ ಮಹೇಶ್ ಬರೆದಿದ್ದಾರೆ ಗೊಮಟೇಶ್ ಉಪಾಧ್ಯೆ ಛಾಯಾಗ್ರಹಣ, ದಾಸ್ ಮೊಡ್ ಸಂಗೀತ ನಿರ್ದೇಶನ ಹಾಗೂ ಆರ್ಯ ಅವರ ಸಂಕಲನವಿದೆ. ರಾಜ್.ಬಿ.ಶೆಟ್ಟಿ, ಅಮೃತ ನಾಯಕ್, ಜೆ.ಪಿ ತುಮ್ಮಿನಾಡ್ ತಾರಾಬಳಗದಲ್ಲಿದ್ದಾರೆ

ಎರಡನೇ ಕಥೆಯನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿದ್ದಾರೆ. ಕಿಶೊರ್, ಯಜ಼?ಞ ಶೆಟ್ಟಿ, ಬಾಬು ಮೃದುನಿಕ ನಟಿಸಿರುವ ಈ ಕಥೆಗೆ ಗಗನ್ ಬಡೇರಿಯ ಸಂಗೀತ ನೀಡಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ ಹಾಗೂ ರಿತ್ವಿಕ್ ರಾವ್ ಸಂಕಲನ ಈ ಚಿತ್ರಕ್ಕಿದೆ.

ಮೂರನೇ ಕಥೆಗೆ ಮಾಧುರಿ ಎನ್ ರಾವ್ ಹಾಗೂ ಕರಣ್ ಅನಂತ್ ಕಥೆ, ಚಿತ್ರಕಥೆ ಬರೆದಿದ್ದು, ಕರಣ್ ಅನಂತ್ ನಿರ್ದೇಶಿಸಿದ್ದಾರೆ. ಪ್ರಕಾಶ್ ಬೆಳವಾಡಿ, ಸೌಮ್ಯ, ಜಗನ್‌ಮೂರ್ತಿ, ವಸು ದೀಕ್ಷಿತ್ ಅಭಿನಯಿಸಿದ್ದಾರೆ. ದೀಪಕ್ ಛಾಯಾಗ್ರಹಣ, ವಸು ದೀಕ್ಷಿತ್ ಸಂಗೀತ ನಿರ್ದೇಶನ ಹಾಗೂ ಭರತ್ ಎಂ.ಸಿ ಅವರ ಸಂಕಲನ ಈ ಚಿತ್ರಕ್ಕಿದೆ.

ನಾಲ್ಕನೇ ಕಥೆಯ ತಾರಾಬಳಗದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ಬಾಲಾಜಿ ಮನೋಹರ್ ಇದ್ದಾರೆ. ರಾಹುಲ್ ಪಿ.ಕೆ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಸಂದೀಪ್ ಅವರ ಛಾಯಾಗ್ರಹಣ, ವಿನಾಯಕ್ ಗುರುನಾರಾಯಣ್ ಅವರ ಸಂಕಲನವಿದೆ.

ಐದನೇ ಕಥೆಯನ್ನು ಜಮದಗ್ನಿ ಮನೋಜ್ ನಿರ್ದೇಶಿಸಿದ್ದಾರೆ. ಅವಿನಾಶ್, ಹರಿ ಸಮಶ್ಟಿ ಅಭಿನಯಿಸಿದ್ದಾರೆ. ರಘುನಾಥ್ ಛಾಯಾಗ್ರಹಣ, ಅಭೀಷೇಕ್ ಅವರ ಸಂಕಲನ ಹಾಗೂ ಗಿರೀಶ್ ಹಾತೂರ್ ಅವರ ಸಂಗೀತ ನಿರ್ದೇಶನವಿದೆ.

ರಿಷಬ್ ಶೆಟ್ಟಿ ಹಾಗೂ ಹರಿಪ್ರಿಯ ನಟನೆಯ ಆರನೇ ಕಥೆಯನ್ನು ಕಿರಣ್ ರಾಜ್ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ರೂಬಿ(ನಾಯಿ) ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ.. ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ, ರಿತ್ವಿಕ್ ರಾವ್ ಅವರ ಸಂಕಲನ ಹಾಗೂ ನೊಬಿನ್ ಪಾಲ್ ಅವರ ಸಂಗೀತ ನಿರ್ದೇಶನವಿದೆ.

ಏಳನೇ ಕಥೆಯಲ್ಲಿ ಪ್ರಣವ್, ರಾಘವೇಂದ್ರ, ಬೀರೇಶ್ ಪಿ ಬಂಡೆ, ನಿಧಿ ಹೆಗ್ಡೆ ಅಭಿನಯಿಸಿದ್ದು, ಜೈ ಶಂಕರ್ ಅವರ ರಚನೆ ಹಾಗೂ ನಿರ್ದೇಶನವಿದೆ. ಸೌರವ್ ಪ್ರತೀಕ್ ಸನ್ಯಾಲ್ ಛಾಯಾಗ್ರಹಣ, ಚಂದನ್ ಸಂಕಲನ ಹಾಗೂ ವಾಸುಕಿ ವೈಭವ್ ಸಂಗೀತ ನಿರ್ದೇಶನವಿದೆ.

ಯುಎನ್‌ಐ ಎಸ್‌ಎ ವಿಎನ್ ೧೬೫೧