Sunday, Apr 5 2020 | Time 15:38 Hrs(IST)
 • ಮಾಜಿ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
 • ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
 • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
 • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
 • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
 • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
 • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
 • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
 • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
 • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
 • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
 • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
 • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
 • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
 • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
International Share

ಉಕ್ರೇನ್‌ನಲ್ಲಿ ಕರೋನ ಪ್ರಕರಣಗಳ ಸಂಖ್ಯೆ 145 ಕ್ಕೆ ಏರಿಕೆ

ಕೀವ್, ಮಾರ್ಚ್ 26 (ಸ್ಪುಟ್ನಿಕ್) ಉಕ್ರೇನ್‌ನಲ್ಲಿ ಮಾರಕ ಕರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಈಗ 145 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಸಾವಿನ ಸಂಖ್ಯೆ ಐದಕ್ಕೆ ಏರಿದೆ ಎಂದು ಉಕ್ರೇನಿಯನ್ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ) ಹೇಳಿಕೆಯಲ್ಲಿ ತಿಳಿಸಿದೆ.
ಹಿಂದಿನ ಬುಧವಾರ, ಸಚಿವಾಲಯದ ಹೇಳಿಕೆ ಪ್ರಕಾರ ಉಕ್ರೇನ್‌ನಲ್ಲಿ 113 ಸೋಂಕು ಪ್ರಕರಣಗಳನ್ನು ದಾಖಲಾಗಿದ್ದವು ಅವುಗಳ ಪೈಕಿ ನಾಲ್ವರು ಮೃತಪಟ್ಟಿದ್ದು ಒಬ್ಬರು ಚೇತರಿಕೆಯಾಗಿದ್ದಾರೆ ಎಂದು ತಿಳಿಸಿದೆ .
ಉಕ್ರೇನ್‌ನಲ್ಲಿ ಇದುವರೆಗೆ 145 ಕರೋನ ಪ್ರಕರಣ ದೃಡಪಟ್ಟಿದೆ ಎಂದು ಪ್ರಯೋಗಾಲಯ ವರದಿಗಳು ಖಚಿತಪಡಿಸಿವೆ. ಐವರು ಮೃತಪಟ್ಟಿದ್ದಾರೆ ಕಳೆದ 24 ಗಂಟೆಯಲ್ಲಿ ಒಟ್ಟು 32 ಹೊಸ ಪ್ರಕರಣಗಳನ್ನು ಗುರುತಿಸಲಾಗಿದೆ ಎಂದೂ ಪಿಎಚ್‌ಸಿ ಫೇಸ್‌ಬುಕ್‌ನಲ್ಲಿ ತಿಳಿಸಿದೆ.
ಯುಎನ್ಐ ಕೆಎಸ್ಆರ್ 0846