Tuesday, Sep 29 2020 | Time 13:02 Hrs(IST)
  • ಬಾಬ್ರಿ ಮಸೀದಿ ದ್ವಂಸ ಪ್ರಕರಣ: ನಾಳೆ ಅಂತಿಮ ತೀರ್ಪು, ಭದ್ರತೆ ಬಿಗಿ ಗೊಳಿಸಲು ರಾಜ್ಯಗಳಿಗೆ ಕೇಂದ್ರ ಆದೇಶ
  • ಮೂವರು ದರೋಡೆಕೋರರು ಬಂಧನ
  • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
  • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
  • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
  • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
  • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
  • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
  • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
  • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
  • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
  • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
  • ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್
  • ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಉಮಾ ಭಾರತಿ
  • ನಮಾಮಿ ಗಂಗೆ : 6 ಬೃಹತ್ ಯೋಜನೆಗಳಿಗೆ ಮೋದಿ ಚಾಲನೆ
business economy Share

ಉಚಿತವಾಗಿ ಐಪಿಎಲ್‌ ನೋಡಲು ಜಿಯೋ ಧನ್ ಧನಾ ಧನ್ ಕೊಡುಗೆ!

ಮುಂಬೈ, ಸೆ.16 (ಯುಎನ್ಐ) ಎಲ್ಲಾ ಕ್ರಿಕೆಟ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿಯನ್ನು ಜಿಯೋ ನೀಡಿದೆ. ಜಿಯೋ ಈ ಬಾರಿಯ ಐಪಿಎಲ್ ಅನ್ನು ಹೆಚ್ಚು ಆನಂದದಾಯಕವಾಗಿಸಲು ಹೊಸ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಜಿಯೋ ಕ್ರಿಕೆಟ್ ಯೋಜನೆಗಳಲ್ಲಿ ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಒಂದು ವರ್ಷದ ಚಂದಾದಾರಿಕೆಯೊಂದಿಗೆ ಡೇಟಾ, ವಾಯ್ಸ್ ಮತ್ತು ಎಸ್‌ಎಂಎಸ್‌ ಲಾಭಗಳನ್ನು ಪಡೆಯಬಹುದಾಗಿದೆ.
ಲೈವ್ ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಸಬ್‌ಸ್ಕ್ರಿಪ್ಷನ್‌ನೊಂದಿಗೆ ಲೈವ್ ಐಪಿಎಲ್ ಮ್ಯಾಚ್‌ಗಳನ್ನು ವೀಕ್ಷಿಸಲು ಹೊಸ ಹೊಸ ಟ್ಯಾರಿಫ್ ಯೋಜನೆಗಳನ್ನು ಪ್ರಾರಂಭಿಸುತ್ತಿದೆ. ಇದರಲ್ಲಿ 1 ತಿಂಗಳು, 2 ತಿಂಗಳುಗಳು, 3 ತಿಂಗಳುಗಳು ಮತ್ತು 1 ವರ್ಷದ ಮಾನ್ಯತೆಯನ್ನು ಒಳಗೊಂಡಿರುವ ಪ್ರಿಪೇಯ್ಡ್ ಯೋಜನೆಗಳು ಲಭ್ಯವಿದ್ದು, ಇದರೊಂದಿಗೆ ವಿಶೇಷ ಡೇಟಾ ಲಾಭಗಳು ದೊರೆಯಲಿದೆ.
ಕ್ರಿಕೆಟ್ ಸೀಸನ್‌ಗಾಗಿ ಜಿಯೋ ಅನೇಕ ಯೋಜನೆಗಳನ್ನು ಪ್ರಕಟಿಸಿದೆ. JIO CRICKET PLAN ಡೇಟಾ, ವಾಯ್ಸ್ ಮತ್ತು ಎಸ್‌ಎಂಎಸ್‌ ಲಾಭಗಳೊಂದಿಗೆ 399 ರೂ. ಮೌಲ್ಯದ 1 ವರ್ಷದ ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಚಂದಾದಾರಿಕೆಯನ್ನು ನೀಡಲಿದೆ.
ರೂ.401 ಪ್ಲಾನ್: ಈ ಪ್ಲಾನ್‌ ಅನ್ನು ರಿಚಾರ್ಜ್ ಮಾಡಿಸಿಕೊಂಡರೆ ಜಿಯೋ ಬಳಕೆದಾರರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರಿಕೆ ಒಂದು ವರ್ಷದ ವರೆಗೆ ಉಚಿತವಾಗಿ ದೊರೆಯಲಿದೆ ಮತ್ತು ಪ್ರತಿ ದಿನ 3GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ. ಇದು 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.
ರೂ.598 ಪ್ಲಾನ್: ಈ ಪ್ಲಾನ್‌ ಅನ್ನು ರಿಚಾರ್ಜ್ ಮಾಡಿಸಿಕೊಂಡರೆ ಜಿಯೋ ಬಳಕೆದಾರರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರಿಕೆ ಒಂದು ವರ್ಷದ ವರೆಗೆ ಉಚಿತವಾಗಿ ದೊರೆಯಲಿದೆ ಮತ್ತು ಪ್ರತಿ ದಿನ 2 GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ. ಇದು 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.
ರೂ. 777 ಪ್ಲ್ಯಾನ್; ರೂ.777ಕ್ಕೆ ರಿಚಾರ್ಜ್ ಮಾಡಿಸಿಕೊಳ್ಳುವ ಗ್ರಾಹಕರಿಗೆ ಜಿಯೋ ಹೆಚ್ಚಿನ ಲಾಭವನ್ನು ಮಾಡಿಕೊಡಲಿದೆ. ಜಿಯೋ ಈ ಪ್ಲಾನ್‌ ರಿಚಾರ್ಜ್ ಮಾಡಿಸುವವರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದದಾರಿಕೆಯನ್ನು ಒಂದು ವರ್ಷದ ವರೆಗೆ ನೀಡುವುದರೊಂದಿಗೆ ಪ್ರತಿ ದಿನ 1.5 GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ. ಇದು 84 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.
ರೂ.2599 ಪ್ಲಾನ್; ರೂ.2599 ರಿಚಾರ್ಜ್ ಮಾಡಿಸಿಕೊಂಡವರಿಗೆ ಜಿಯೋ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದದಾರಿಕೆಯನ್ನು ಒಂದು ವರ್ಷದ ವರೆಗೆ ನೀಡಲಿದೆ ಮತ್ತು ಒಂದು ವರ್ಷದ ಅವಧಿಗೆ ಪ್ರತಿ ದಿನ 2 GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ.
ರೂ. 499 ಡೇಟಾ ಆಡ್ ಆನ್ ಪ್ಲಾನ್; ಈ ಪ್ಲಾನ್‌ ಅನ್ನು ರಿಚಾರ್ಜ್ ಮಾಡಿಸಿಕೊಂಡರೆ ಜಿಯೋ ಬಳಕೆದಾರರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರಿಕೆ ಒಂದು ವರ್ಷದ ವರೆಗೆ ಉಚಿತವಾಗಿ ದೊರೆಯಲಿದೆ ಮತ್ತು ಪ್ರತಿ ದಿನ1.5 GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ. ಇದು 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಯುಎನ್ಐ ಎಎಚ್ 0941