Wednesday, Feb 26 2020 | Time 13:02 Hrs(IST)
 • ದೆಹಲಿಯ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಇಂದು ಅಜಿತ್ ದೋವಲ್ ಭೇಟಿ
 • ಎಲಿವೇಟೆಡ್ ಕಾರಿಡಾರ್ ಎಂಬ ಖಜಾನೆ ಕದಿಯುವ ಗುಮ್ಮ; ಆಮ್ ಆದ್ಮಿ ಪಕ್ಷದ ಪ್ರತಿಭಟನೆ
 • ದೆಹಲಿ ಹಿಂಸಾಚಾರ; ಮೃತರ ಸಂಖ್ಯೆ 20ಕ್ಕೇರಿಕೆ, ಸೇನೆ ನಿಯೋಜನೆಗೆ ಕೇಜ್ರೀವಾಲ್ ಮನವಿ
 • ಗಲಭೆ ಕೋರರನ್ನು ಮಟ್ಟ ಹಾಕಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಖಡಕ್ ಎಚ್ಚರಿಕೆ
 • ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 20ಕ್ಕೆ ಏರಿದೆ
 • ಕಾಶ್ಮೀರದ ಬುದ್ಗಾಮ್‌ನಲ್ಲಿ ಎನ್‌ಐಎ ದಾಳಿ
 • ದೆಹಲಿ ಹಿಂಸಾಚಾರ: ಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
 • ಕಾರ್ಮಿಕನ ಬರ್ಬರ ಹತ್ಯೆ
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
National Share

ಎಸ್‌ಪಿಎಸ್ ಸ್ಟೀಲ್ ರೋಲಿಂಗ್ ಮಿಲ್ಸ್ ಲಿಮಿಟೆಡ್ ಆಸ್ತಿ ಜಾರಿ ನಿರ್ದೇಶನಾಲಯದಿಂದ ಮುಟ್ಟುಗೋಲು

ನವದೆಹಲಿ, ಸೆ 10 (ಯುಎನ್ಐ) ಎಸ್‌ಪಿಎಸ್ ಸ್ಟೀಲ್ ರೋಲಿಂಗ್ ಮಿಲ್ಸ್ ಲಿಮಿಟೆಡ್ ಹಾಗೂ ಇತರರಿಗೆ ಸೇರಿದ 92 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಬ್ಯಾಂಕ್ ವಂಚನೆ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಎಸ್.ಪಿಎಸ್. ಸ್ಟೀಲ್ ರೋಲಿಂಗ್ ಮಿಲ್ಸ್ ಲಿಮಿಟೆಡ್, ಕಂಪೆನಿಯ ಮಾಲೀಕರು ಮತ್ತು ಇನ್ನಿತರರು ಕೊಲ್ಕತಾದಲ್ಲಿರುವ ಅಲಹಾಬಾದ್ ಬ್ಯಾಂಕ್ ನೇತೃತ್ವದ 8 ಬ್ಯಾಂಕುಗಳ ಒಕ್ಕೂಟಕ್ಕೆ ಸುಮಾರು 550 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ ಎಂದು ಸಿಬಿಐ ದಾಖಲಿಸಿಕೊಂಡಿದ್ದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿತ್ತು.ಪಂಚತಾರಾ ಹೋಟೆಲ್ ಮಾಲೀಕರಿಗೆ ಸೇರಿದ ಷೇರುಗಳು, 3 ಐಷಾರಾಮಿ ಅಪಾರ್ಟ್‌ಮೆಂಟ್‌ಗಳು, ಕಚೇರಿ ಕಟ್ಟಡಗಳು ಹಾಗೂ 33 ಗುಂಟೆ ಭೂಮಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಸೇರಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ.


ಯುಎನ್ಐ ಜಿಎಸ್ಆರ್ 2240