InternationalPosted at: Feb 23 2021 1:05PM Shareಕಾಂಗೋದಲ್ಲಿ ಇಟಲಿ ರಾಯಬಾರಿ ದಾರುಣ ಹತ್ಯೆಬ್ರಾಜವಿಲ್ಲೆ, ಫೆ 23(ಯುಎನ್ಐ)- ಕಾಂಗೋದಲ್ಲಿ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸುತ್ತಿದ್ದ ಇಟಲಿ ರಾಯಭಾರಿಯನ್ನು ದಾರುಣವಾಗಿ ಹತ್ಯೆ ಮಾಡಲಾಗಿದೆ. ಗೋಮಾ ಪಟ್ಟಣದಲ್ಲಿ ವಿಶ್ವ ಸಂಸ್ಥೆಯ ಬೆಂಗಾವಲಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಾಯಭಾರಿ ಲೂಕಾ ಅಟಾನ್ಸಿಯಾ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಲೂಕಾ ಅವರೊಂದಿಗೆ ಇತರ ಇಬ್ಬರು ಮೃತಪಟ್ಟಿದ್ದಾರೆ. ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಾಯಾಳುಗಳು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಮೃದ್ಧ ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದಿರುವ ಕಾಂಗೋ ಪ್ರಸ್ತುತ ಅಂತರ್ಯುದ್ಧದಲ್ಲಿ ನಲುಗುತ್ತಿದೆ. ಶಾಂತಿ ಸ್ಥಾಪಿಸಲು ವಿಶ್ವಸಂಸ್ಥೆ ಶ್ರಮಿಸುತ್ತಿದೆ. ಆದರೆ ಇದನ್ನು ಸಹಿಸದ ಬಂಡಾಯ ಗುಂಪುಗಳು ಪ್ರಮುಖ ವ್ಯಕ್ತಿಗಳ ಮೇಲೆ ದಾಳಿ ನಡೆಸುತ್ತಿವೆ.ಈ ಹಿನ್ನೆಲೆಯಲ್ಲಿ ಇಟಾಲಿ ರಾಯಭಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಯುಎನ್ಐ ಕೆವಿಆರ್ 12 59