Sunday, Apr 5 2020 | Time 15:42 Hrs(IST)
  • ಮಾಜಿ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
  • ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
  • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
  • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
  • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
  • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
  • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
  • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
  • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
  • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
  • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
  • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
  • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
  • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
  • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
Sports Share

ಕೊರೊನಾ ಪೀಡಿತರಿಗೆ ಫೆಡರರ್ 1 ಮಿಲಿಯನ್ ಸ್ವಿಸ್ ಫ್ರಾಂಕ್‌ ಸಹಾಯ

ನವದೆಹಲಿ, ಮಾ.25 (ಯುಎನ್ಐ) ಟೆನಿಸ್ ಸ್ಟಾರ್ ಆಟಗಾರ ರೋಜರ್ ಫೆಡರರ್ ಸ್ವಿಟ್ಜರ್ಲೆಂಡ್‌ನಲ್ಲಿ ಕರೋನಾ ವೈರಸ್ ವಿರುದ್ಧ ಹೋರಾಡಲು 10 ಲಕ್ಷ ಸ್ವಿಸ್ ಫ್ರಾಂಕ್‌ಗಳಿಗೆ (ಸುಮಾರು ರೂ 7.8 ಕೋಟಿ) ಸಹಾಯ ಮಾಡಿದ್ದಾರೆ.

ಫೆಡರರ್ ಮತ್ತು ಅವರ ಪತ್ನಿ ಮಿರ್ಕಾ ಸ್ವಿಟ್ಜರ್ಲೆಂಡ್‌ನ ಕರೋನಾ ಸಂತ್ರಸ್ತರ ಕುಟುಂಬಗಳಿಗೆ ಸಹಾಯ ಮಾಡಲು 1 ಮಿಲಿಯನ್ ಸ್ವಿಸ್ ಫ್ರಾಂಕ್‌ಗಳ ಅನುದಾನವನ್ನು ಘೋಷಿಸಿದ್ದಾರೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ 9900 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, 122 ಜನರು ಸಾವನ್ನಪ್ಪಿದ್ದಾರೆ.

ಕೊರೊನದ ವಿರುದ್ಧ ಹೋರಾಡುವ ಕ್ಲಿನಿಕ್ ಮತ್ತು ವೈದ್ಯಕೀಯ ಕೇಂದ್ರಗಳಿಗೆ ಸಹಾಯ ಮಾಡಲು ಬಾರ್ಸಿಲೋನಾ ಫಾರ್ವರ್ಡ್ ಲಿಯೋನಲ್ ಮಾಸ್ಸಿ ಮತ್ತು ಮ್ಯಾಂಚೆಸ್ಟರ್ ಸಿಟಿ ಮ್ಯಾನೇಜರ್ ಪೆಪ್ ಗಾರ್ಡಿಯಲ್ಲೊ 1 ಮಿಲಿಯನ್ ಯುರೋಗಳನ್ನು ನೀಡಿದ್ದಾರೆ. ಪೋರ್ಚುಗಲ್ ಮತ್ತು ಜುವೆಂಟಸ್ ಫಾರ್ವರ್ಡ್ ಕ್ರಿಸ್ಟಿಯಾನೊ ರೊನಾಲ್ಡೊ ಪೋರ್ಚುಗಲ್‌ನ ಆಸ್ಪತ್ರೆಗಳಿಗೆ ಅಗತ್ಯ ವಸ್ತುಗಳನ್ನು ತಲುಪಿಸಿದ್ದಾರೆ.

ಯುಎನ್ಐ ವಿಎನ್ಎಲ್ 2206