Sunday, Apr 5 2020 | Time 14:26 Hrs(IST)
 • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
 • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
 • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
 • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
 • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
 • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
 • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
 • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
 • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
 • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
 • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
 • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
 • ಬಾಬು ಜಗಜೀವನ್‌ ರಾಮ್‌ ಜಯಂತಿ: ಪ್ರಧಾನಿ ಗೌರವ ಸಲ್ಲಿಕೆ
 • ಕೋವಿಡ್‌-19: ಸೋಂಕು ಪ್ರಕರಣಗಳ ಸಂಖ್ಯೆ 3374ಕ್ಕೇರಿಕೆ: 77 ಸಾವು, 266 ಮಂದಿ ಗುಣಮುಖ
 • ಬಾಬು ಜಗಜೀವನ್‌ ರಾಮ್‌ ಜಯಂತಿ: ಗಣ್ಯರಿಂದ ಗೌರವ ಸಲ್ಲಿಕೆ
Entertainment Share

ಕೊರೋನಾ ವಿರುದ್ಧದ ಹೋರಾಟಕ್ಕೆ ಸಿಲಿಬ್ರಿಟಿಗಳನ್ನು ಬಳಸಿಕೊಳ್ಳಿ: ಗೋದ್ರಾ ಚಿತ್ರತಂಡ ಮನವಿ

ಕೊರೋನಾ ವಿರುದ್ಧದ ಹೋರಾಟಕ್ಕೆ ಸಿಲಿಬ್ರಿಟಿಗಳನ್ನು ಬಳಸಿಕೊಳ್ಳಿ: ಗೋದ್ರಾ ಚಿತ್ರತಂಡ ಮನವಿ
ಕೊರೋನಾ ವಿರುದ್ಧದ ಹೋರಾಟಕ್ಕೆ ಸಿಲಿಬ್ರಿಟಿಗಳನ್ನು ಬಳಸಿಕೊಳ್ಳಿ: ಗೋದ್ರಾ ಚಿತ್ರತಂಡ ಮನವಿ

ಬೆಂಗಳೂರು, ಮಾ 23 (ಯುಎನ್‍ಐ) ಇಡೀ ಜಗತ್ತನ್ನೇ ತಲ್ಲಣಕ್ಕೀಡು ಮಾಡಿರುವ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಭಾರತವೂ ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಆದರೂ ವೈರಸ್ ಹರಡುವುದನ್ನು ತಡೆಗಟ್ಟಲು ಹರ ಸಾಹಸ ಪಡುವಂತಾಗಿದೆ.ಇದೇವೇಳೆ ಆರೋಗ್ಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಮಸ್ತ ಸಿಬ್ಬಂದಿ, ಪೊಲೀಸ್, ಪೌರ ಕಾರ್ಮಿಕರು, ವೈದ್ಯರು, ಶುಶ್ರೂಷಕರು ಸೇರಿದಂತೆ ಕೊರೋನ್ ತಡೆಗಟ್ಟುವಲ್ಲಿ ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿರುವ ಗೋದ್ರಾ ಚಿತ್ರ ತಂಡ, ಸೋಂಕು ವಿರುದ್ಧ ಜಾಗೃತಿ ಮೂಡಿಸಲು ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳನ್ನು ಬಳಸಿಕೊಳ್ಳುವಂತೆ ಒತ್ತಾಯಿಸಿದೆ.ಸೋಂಕಿನ ನಿಯಂತ್ರಣದ ಕುರಿತು ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಕೆಲ ಅನುಮಾನಗಳ ಕಾರಣದಿಂದಾಗಿ ವೈರಸ್ ಹರಡುವಂತಾಗಿದೆ.

ವಿದೇಶದಿಂದ ಬರುವ ಕೆಲವರು ತಪಾಸಣೆಗೆ ಒಳಗಾಗದೇ ಇರುವಂತಹ ಉದಾಹರಣೆಗಳು ನಮ್ಮುಂದಿವೆ. ಅದಕ್ಕೆ ಕಾರಣ ಭಯ. ತಪಾಸಣೆಗೆ ಒಳಪಟ್ಟರೆ, ತಮ್ಮಲ್ಲಿ ಕೊರೋನಾ ವೈರಸ್ ಇದೆ ಎಂದು ಸಾಬೀತಾದರೆ, ಅವರ ಚಿಕಿತ್ಸೆ ಕುರಿತು ಜಾಗೃತಿ ಇಲ್ಲದೇ ಇರುವುದು ಅವರ ಆತಂಕಕ್ಕೆ ಕಾರಣವಾಗಿದೆ.

ತಪಾಸಣೆ ಸ್ಥಳ, ಚಿಕಿತ್ಸಾ ವಿವರ, ಕುಟುಂಬದ ಸದಸ್ಯರನ್ನು ಭೇಟಿ ಆಗಲು ಬಿಡದೇ ಇರುವುದು, ಹೀಗೆ ನಾನಾ ಕಾರಣಗಳಿಂದಾಗಿ ತಪಾಸಣೆಗೆ ಒಳಗಾಗದೇ ಹೊರಗೆ ಓಡಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರಕಾರ ಕಟ್ಟು ನಿಟ್ಟಿನ ಜಾಗೃತಿ ಮಾಡಬೇಕಿದೆ.

ಈಗಾಗಲೇ ಸಿನಿಮಾ ತಾರೆಯರು, ಕ್ರೀಡಾಪಟುಗಳು, ಗಣ್ಯರು ಈ ಕೆಲಸಗಳಲ್ಲಿ ನಿರತರಾಗಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಬೇಕಿದೆ. ಯಾವುದನ್ನು ಪ್ರಚಾರ ಮಾಡಬೇಕು, ಯಾವುದು ಸುಳ್ಳು ಎನ್ನುವ ಕುರಿತು ಸರಕಾರ ಮತ್ತು ಆರೋಗ್ಯ ಇಲಾಖೆ ಕಾಲ ಕಾಲಕ್ಕೆ ಮಾಹಿತಿಯನ್ನು ಹಂಚಿಕೊಳ್ಳಬೇಕಿದೆ. ಅದು ಸೆಲೆಬ್ರಿಟಿಗೂ ತಲುಪಿದರೆ, ಅವರು ಅದನ್ನು ತಮ್ಮ ಸಾಮಾಜಿಕ ತಾಣಗಳಲ್ಲಿ ಹಂಚಿಕೊಳ್ಳಲು ಅನುಕೂಲ ಆಗುತ್ತವೆ. ಟಾಪ್ ಸಿಲೆಬ್ರಿಟಿಗಳನ್ನು ಆಯ್ಕೆ ಮಾಡಿಕೊಂಡು ದಿನವೂ ಸರಕಾರ ಅವರಿಂದ ಜಾಗೃತಿ ಕೆಲಸ ಮಾಡಲು ಗೋದ್ರಾ ಸಿನಿಮಾ ಟೀಮ್ ವಿನಂತಿಸಿದೆ.

ಯುಎನ್‍ಐ ಎಸ್‍ಎ ವಿಎನ್ 1645