Tuesday, Sep 29 2020 | Time 13:43 Hrs(IST)
 • ಪಾಕ್ ರಡಾರ್ ನಲ್ಲಿ ಶ್ರೀನಗರ: ದಾರಿ ತಪ್ಪಿರುವ ಯುವಕರನ್ನು ವಾಪಸ್ ಕರೆ ತರಲು ಕ್ರಮ- ಡಿಜಿಪಿ ದಿಲ್‍ಬಾಗ್ ಸಿಂಗ್
 • ಗಾಂಜಾ ಮಾರಾಟ ಯತ್ನಿಸುತ್ತಿದ್ದವರ ಬಂಧನ
 • ಪೂಜಿಸುತ್ತಿದ್ದ ಕೃಷಿ ಉಪಕರಣಗಳಿಗೆ ಬೆಂಕಿ ಹಚ್ಚುವುದು ರೈತರನ್ನು ಅವಮಾನಿಸಿದಂತೆ: ಮೋದಿ
 • ಬಾಬ್ರಿ ಮಸೀದಿ ದ್ವಂಸ ಪ್ರಕರಣ: ನಾಳೆ ಅಂತಿಮ ತೀರ್ಪು, ಭದ್ರತೆ ಬಿಗಿ ಗೊಳಿಸಲು ರಾಜ್ಯಗಳಿಗೆ ಕೇಂದ್ರ ಆದೇಶ
 • ಮೂವರು ದರೋಡೆಕೋರರು ಬಂಧನ
 • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
 • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
 • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
 • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
 • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
 • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
 • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
 • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
 • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
 • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
National Share

ಕೊವಿಡ್‍: ಭಾರತದಲ್ಲಿ 50 ಲಕ್ಷ ದಾಟಿದ ಪ್ರಕರಣಗಳ ಸಂಖ್ಯೆ

ಕೊವಿಡ್‍: ಭಾರತದಲ್ಲಿ 50 ಲಕ್ಷ ದಾಟಿದ ಪ್ರಕರಣಗಳ ಸಂಖ್ಯೆ
ಕೊವಿಡ್‍: ಭಾರತದಲ್ಲಿ 50 ಲಕ್ಷ ದಾಟಿದ ಪ್ರಕರಣಗಳ ಸಂಖ್ಯೆ

ನವದೆಹಲಿ, ಸೆ 16 (ಯುಎನ್‌ಐ) ಕಳೆದ 24 ಗಂಟೆಗಳಲ್ಲಿ 90 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುವುದರೊಂದಿಗೆ ಭಾರತದಲ್ಲಿ ಕೊವಿಡ್‍ ಪ್ರಕರಣಗಳ ಒಟ್ಟು ಸಂಖ್ಯೆ 50 ಲಕ್ಷ ದಾಟಿದೆ ಎಂದು ಆರೋಗ್ಯ ಸಚಿವಾಲಯದ ನವೀಕೃತ ಮಾಹಿತಿ ತಿಳಿಸಿದೆ.

ಕಳೆದ ಒಂದು ದಿನದಲ್ಲಿ ದೇಶದಲ್ಲಿ 90,123 ಹೊಸ ಪ್ರಕರಣಗಳು ಮತ್ತು 1,290 ಸಾವುಗಳು ವರದಿಯಾಗಿವೆ. ಹೊಸ ಪ್ರಕರಣಗಳು ಸೇರಿ ಸದ್ಯ ಒಟ್ಟು ಪ್ರಕರಣಗಳ ಸಂಖ್ಯೆ 50,20,360 ರಷ್ಟಿದ್ದರೆ, ಸಾವಿನ ಸಂಖ್ಯೆ 82,066 ಕ್ಕೆ ಏರಿದೆ. ಸಾವಿನ ಪ್ರಮಾಣ ಸದ್ಯ, ಶೇ 1.63 ರಷ್ಟಿದೆ.

ಚೇತರಿಕೆಗೆ ಸಂಬಂಧಿಸಿದಂತೆ ಕಳೆದೊಂದು ದಿನದಲ್ಲಿ 82,961 ಸೋಂಕಿತರು ಗುಣಮುಖರಾಗುವುದರೊಂದಿಗೆ ಚೇತರಿಕೆ ಕಂಡ ಪ್ರಕರಣಗಳ ಒಟ್ಟು ಸಂಖ್ಯೆ 39,42,360 ಕ್ಕೆ ಮತ್ತು ಚೇತರಿಕೆ ಪ್ರಮಾಣ ಶೇ 78.53 ಕ್ಕೆ ಏರಿದೆ.

ಸದ್ಯ, ದೇಶದಲ್ಲಿ 99,59,33 ಸಕ್ರಿಯ ಪ್ರಕರಣಗಳಿವೆ. ಇವು ಇದುವರೆಗೆ ವರದಿಯಾದ ಒಟ್ಟು ಪ್ರಕರಣಗಳ ಪೈಕಿ ಶೇ 19.84ರಷ್ಟಿವೆ.

ಮಹಾರಾಷ್ಟ್ರ ಅತಿ ಹೆಚ್ಚು ಬಾಧಿತ ರಾಜ್ಯವಾಗಿ ಮುಂದುವರೆದಿದ್ದು, ನಂತರ ಸ್ಥಾನಗಳಲ್ಲಿ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಿವೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿಯಂತೆ, ಕಳೆದ 24 ಗಂಟೆಗಳಲ್ಲಿ 11,16,842 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಸಾಂಕ್ರಾಮಿಕ ರೋಗ ಉಲ್ಬಣಗೊಂಡಾಗಿನಿಂದ ಮಂಗಳವಾರದವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳ ಸಂಖ್ಯೆ 5,94,29,115 ಕ್ಕೆ ಏರಿದೆ.

ಜಾಗತಿಕವಾಗಿ ಅಮೆರಿಕ ಹೆಚ್ಚು ಸೋಂಕಿ ಬಾಧಿತ ರಾಷ್ಟ್ರವಾಗಿ ಉಳಿದಿದ್ದು, ನಂತರದ ಸ್ಥಾನಗಳಲ್ಲಿ ಭಾರತ ಮತ್ತು ಬ್ರೆಜಿಲ್ ಇವೆ.

ಯುಎನ್ಐ ಎಸ್ಎಲ್ಎಸ್ 1057