Tuesday, Jan 21 2020 | Time 22:06 Hrs(IST)
 • ಸಿದ್ದರಾಮಯ್ಯ ವಿರುದ್ಧ ಪ್ರತಿಭಟಿಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್
 • ಅಂಧರ ಕ್ರಿಕೆಟ್: ಆಂಧ್ರ ಪ್ರದೇಶ ತಂಡಕ್ಕೆೆ ಟಿ-20 ಮುಕುಟ
 • ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಯಡಿಯೂರಪ್ಪ ಮನವಿ
 • ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಿಂದ ಇಶಾಂತ್ ಶರ್ಮಾ ಔಟ್
 • ನಾರಾಯಣ ಹೆಲ್ತ್ ಸಿಟಿಯಿಂದ ನಾಲ್ಕು ವರ್ಷದ ಮಗುವಿಗೆ ಹೃದಯ ಕಸಿ: ಮಹತ್ವದ ಸಾಧನೆ
 • ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ
 • ಅಮರಾವತಿ ಆಂಧ್ರ ರಾಜಧಾನಿಯಾಗಿ ಮುಂದುವರಿಯಲಿದೆ; ಪವನ್ ಕಲ್ಯಾಣ್
 • ಮನೆ ಮನೆಗೆ ಸಿಎಎ ವಿರುದ್ಧ ಅಭಿಯಾನ ಕೊಂಡೊಯ್ಯಲು ಜೆಡಿಎಸ್ ಸಿದ್ಧತೆ
 • ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ನೋಂದಣಿ ಇಳಿಮುಖ: ಮುಖ್ಯಚುನಾವಣಾಧಿಕಾರಿ ಬೇಸರ!
 • ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ
 • ಮೆಂಟನ್ ಕಪ್ ಶೂಟಿಂಗ್ : ಅಪೂರ್ವಿ, ದಿವ್ಯಾಂಶ್ ಗೆ ಚಿನ್ನದ ಪದಕ
 • ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!
 • ಮಂಗಳೂರು ವಿಮಾನ ನಿಲ್ದಾಣದ್ದು ಬಾಂಬ್ ಪತ್ತೆ ಪ್ರಕರಣವಲ್ಲ, ಅಣಕು ಪ್ರದರ್ಶನ, ಹುಡುಗಾಟ: ಕುಮಾರ ಸ್ವಾಮಿ ಲೇವಡಿ
 • ಎಸ್ ಬಿಐನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಚಲ್ಲ ಶ್ರೀನಿವಾಸುಲು ಶೆಟ್ಟಿ ಅಧಿಕಾರ ಸ್ವೀಕಾರ
 • ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಜೆಇಎಂ ಉಗ್ರರು ಹತ
International Share

ಜಪಾನ್ ಗೆ ಅಪ್ಪಳಿಸಲಿದೆ ಕ್ರೋಸಾ ಚಂಡಮಾರುತ!

ಟೊಕಿಯೋ, ಆಗಸ್ಟ್ 13 (ಯುಎನ್ಐ) ಕ್ರೋಸಾ ಎಂಬ ಪ್ರಬಲ ಚಂಡಮಾರುತವು ಜಪಾನ್ ಕಡೆಗೆ ಸಾಗುತ್ತಿದ್ದು, ಶೀಘ್ರದಲ್ಲಿಯೇ ಪಶ್ಚಿಮ ಜಪಾನ್ ತೀರವನ್ನು ಅಪ್ಪಳಿಸುವ ಸಾಧ್ಯತೆ ಇದೆ ಎಂದು
ಅಲ್ಲಿನ ಹವಾಮಾನ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ.
ಬೇಸಿಗೆ ರಜಾದಿನಗಳನ್ನು ಮುಗಿಸಿ ಪ್ರವಾಸಿಗರು ಮರಳುವ ಸಮಯದಲ್ಲಿ ಕ್ರೋಸಾ ಚಂಡಮಾರುತ ಅಪ್ಪಳಿಸಲಿದ್ದು, ಅಗತ್ಯ ಮುನ್ನೇಚ್ಚರಿಕೆ ತೆಗೆದುಕೊಳ್ಳುವಂತೆ ಇಲಾಖೆ ಸೂಚಿಸಿದೆ.
ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಶಿಂಕಾಸೆನ್ ಬುಲೆಟ್ ರೈಲು ಸೇವೆಯನ್ನು ಗುರುವಾರ ಸಂಪೂರ್ಣವಾಗಿ ಸ್ಥಗಿತಗೊಳಿಸಬಹುದು ಎಂದು ಪಶ್ಚಿಮ ಜಪಾನ್ ರೈಲ್ವೆ ನಿಗಮ ತಿಳಿಸಿದೆ.
ಹವಾಮಾನ ವಿಭಾಗದ ಅನುಸಾರ, ಪ್ರಸ್ತುತ 10 ನೇ ಚಂಡಮಾರುತವು ದಕ್ಷಿಣ-ಪಶ್ಚಿಮ ತಾಂಗೇಶಿಮಾ ದ್ವೀಪದಿಂದ ಸುಮಾರು 500 ಕಿಲೋಮೀಟರ್ ದೂರದಲ್ಲಿದ್ದು, ಬುಧವಾರ ಮತ್ತು ಗುರುವಾರ ರಾಜ್ಯದ ಪಶ್ಚಿಮ ಪ್ರದೇಶಗಳಲ್ಲಿ ಹಾದುಹೋಗುವ ನಿರೀಕ್ಷೆ ಇದೆ.
ಸುದ್ದಿ ಸಂಸ್ಥೆ ವರದಿಯ ಪ್ರಕಾರ, ಚಂಡಮಾರುತದ ಪರಿಣಾಮ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜಪಾನ್‌ನ ಪಶ್ಚಿಮ ಮತ್ತು ಪೂರ್ವ ಪ್ರದೇಶಗಳಲ್ಲಿ ಭೂಕುಸಿತ, ಪ್ರವಾಹ ಮತ್ತು ನದಿಗಳ ನೀರಿನ ಮಟ್ಟ ಹೆಚ್ಚಾಗಬಹುದೆಂದು ಶಂಕಿಸಲಾಗಿದೆ.
ಸ್ಥಳೀಯ ಸರ್ಕಾರಿ ಅಧಿಕಾರಿಗಳ ಸಹಕಾರದೊಂದಿಗೆ ಸಚಿವಾಲಯಗಳ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ವಿಪತ್ತು ನಿರ್ವಹಣಾ ಇಲಾಖೆಯ ಸಚಿವ ಜುನೋ ಯಾಮಾಮೋಟೊ ಸೂಚಿಸಿದ್ದಾರೆ.
ಯುಎನ್ಐ ಪಿಕೆ ಎಸ್ಎಚ್ 1920