Tuesday, Jan 21 2020 | Time 21:58 Hrs(IST)
 • ಅಂಧರ ಕ್ರಿಕೆಟ್: ಆಂಧ್ರ ಪ್ರದೇಶ ತಂಡಕ್ಕೆೆ ಟಿ-20 ಮುಕುಟ
 • ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಯಡಿಯೂರಪ್ಪ ಮನವಿ
 • ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಿಂದ ಇಶಾಂತ್ ಶರ್ಮಾ ಔಟ್
 • ನಾರಾಯಣ ಹೆಲ್ತ್ ಸಿಟಿಯಿಂದ ನಾಲ್ಕು ವರ್ಷದ ಮಗುವಿಗೆ ಹೃದಯ ಕಸಿ: ಮಹತ್ವದ ಸಾಧನೆ
 • ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ
 • ಅಮರಾವತಿ ಆಂಧ್ರ ರಾಜಧಾನಿಯಾಗಿ ಮುಂದುವರಿಯಲಿದೆ; ಪವನ್ ಕಲ್ಯಾಣ್
 • ಮನೆ ಮನೆಗೆ ಸಿಎಎ ವಿರುದ್ಧ ಅಭಿಯಾನ ಕೊಂಡೊಯ್ಯಲು ಜೆಡಿಎಸ್ ಸಿದ್ಧತೆ
 • ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ನೋಂದಣಿ ಇಳಿಮುಖ: ಮುಖ್ಯಚುನಾವಣಾಧಿಕಾರಿ ಬೇಸರ!
 • ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ
 • ಮೆಂಟನ್ ಕಪ್ ಶೂಟಿಂಗ್ : ಅಪೂರ್ವಿ, ದಿವ್ಯಾಂಶ್ ಗೆ ಚಿನ್ನದ ಪದಕ
 • ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!
 • ಮಂಗಳೂರು ವಿಮಾನ ನಿಲ್ದಾಣದ್ದು ಬಾಂಬ್ ಪತ್ತೆ ಪ್ರಕರಣವಲ್ಲ, ಅಣಕು ಪ್ರದರ್ಶನ, ಹುಡುಗಾಟ: ಕುಮಾರ ಸ್ವಾಮಿ ಲೇವಡಿ
 • ಎಸ್ ಬಿಐನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಚಲ್ಲ ಶ್ರೀನಿವಾಸುಲು ಶೆಟ್ಟಿ ಅಧಿಕಾರ ಸ್ವೀಕಾರ
 • ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಜೆಇಎಂ ಉಗ್ರರು ಹತ
 • ವಿಶ್ವಕಪ್: ಕಿರಿಯರಿಗೆ ಸುಲಭ ತುತ್ತಾದ ಜಪಾನ್
National Share

ಜಮ್ಮು ಕಾಶ್ಮೀರ : ಸ್ವಾತಂತ್ರ್ಯೋತ್ಸವದ ಭರ್ಜರಿ ತಾಲೀಮು

ನವದೆಹಲಿ, ಆ 13 (ಯುಎನ್ಐ) ಈ ಬಾರಿಯ ಸ್ವಾತಂತ್ರ್ಯೋತ್ಸವದ ಕೇಂದ್ರ ಬಿಂದುವಾಗಿರುವ ಜಮ್ಮು ಕಾಶ್ಮೀರದ ವಿವಿಧೆಡೆ ಭರ್ಜಿರಿ ತಾಲೀಮು ನಡೆಸಲಾಗುತ್ತಿದೆ
ಕೇಂದ್ರ ಸರ್ಕಾರವು 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆಯುತ್ತಿರುವ ಮೊದಲ ಸ್ವಾತಂತ್ರ್ಯೋತ್ಸವ ಇದಾಗಿದ್ದು, ತ್ರಿವರ್ಣ ಧ್ವಜ ಹಾರಾಟ, ರಾಷ್ಟ್ರಗೀತೆ, ದೇಶಭಕ್ತಿ ಸಾರುವ ವಿವಿಧ ಕಾರ್ಯಕ್ರಮಗಳು ನಡೆಯಲಿವೆ
ಶ್ರೀನಗರದ ಎಸ್‌ಕೆ ಕ್ರೀಡಾಂಗಣದಲ್ಲಿ ನಡೆದ ತಾಲೀಮಿನಲ್ಲಿ ಕಾಶ್ಮೀರದ ವಿಭಾಗೀಯ ಆಯುಕ್ತ, ಬಶೀರ್ ಅಹ್ಮದ್ ಸಿದ್ಧತೆಗಳ ಪರಿಶೀಲನೆ ನಡೆಸಿದರು
ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ), ಸಶಸ್ತ್ರ ಸೀಮಾ ಬಾಲ್ (ಎಸ್‌ಎಸ್‌ಬಿ), ಜಮ್ಮು ಮತ್ತು ಕಾಶ್ಮೀರ ಸಶಸ್ತ್ರ ಪೊಲೀಸ್ (ಜೆಕೆಎಪಿ), ಮೀಸಲು ಪೊಲೀಸ್ ಪಡೆ, ಮಹಿಳಾ ಪೊಲೀಸ್, ಕಾರ್ಯನಿರ್ವಾಹಕ ಪೊಲೀಸ್, ಎಸ್‌ಡಿಆರ್ ಎಫ್ ಮತ್ತು ತುರ್ತು ಸೇವೆಗಳು. ಅರಣ್ಯ ಸಂರಕ್ಷಣಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ತಂಡದ ತುಕಡಿಗಳು ತಾಲೀಮಿನಲ್ಲಿ ಭಾಗವಹಿಸಿದ್ದವು
ಕಲಾ ಸಂಸ್ಕೃತಿ ಮತ್ತು ಭಾಷೆಗಳ ಅಕಾಡೆಮಿ ಇಲಾಖೆ, ಪೊಲೀಸ್, ಸಿಆರ್‌ಪಿಎಫ್ ಮತ್ತು ಬಿಎಸ್‌ಎಫ್ ಈ ಸಂದರ್ಭದಲ್ಲಿ ಕಾಶ್ಮೀರಿ, ಉರ್ದು, ಡೋಗ್ರಿ, ಲಡಾಖಿ ಮತ್ತು ಪಂಜಾಬಿ ಭಾಷೆಗಳಲ್ಲಿ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದವು.
ಯುಎನ್‍ಐ ಎಸ್ ಎ ಎಸ್‍ಎಚ್ 1932
More News
ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ

ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ

21 Jan 2020 | 6:39 PM

ತಿರುವನಂತಪುರಂ, ಜ 21(ಯುಎನ್‍ಐ)- ನೇಪಾಳಕ್ಕೆ ಪ್ರವಾಸಕ್ಕಾಗಿ ತೆರಳಿದ್ದ ಎಂಟು ಕೇರಳಿಗರು ಮಂಗಳವಾರ ಉಸಿರುಗಟ್ಟಿ ಸತ್ತಿರುವ ಘಟನೆ ಕುರಿತಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದು:ಖ ವ್ಯಕ್ತಪಡಿಸಿದ್ದಾರೆ.

 Sharesee more..
ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಜೆಇಎಂ ಉಗ್ರರು ಹತ

ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಜೆಇಎಂ ಉಗ್ರರು ಹತ

21 Jan 2020 | 6:09 PM

ಶ್ರೀನಗರ, ಜ 21(ಯುಎನ್‍ಐ)- ದಕ್ಷಿಣ ಕಾಶ್ಮೀರ ಜಿಲ್ಲೆ ಪುಲ್ವಾಮದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಭಯೋತ್ಪಾಕರು ಹತರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

 Sharesee more..