Tuesday, Jan 21 2020 | Time 22:47 Hrs(IST)
 • ಸೌಹಾರ್ದತೆಯನ್ನು ಕೆಡಿಸುವ ರೇಣುಕಾಚಾರ್ಯ ಹೇಳಿಕೆ: ಎಸ್‍ಡಿಪಿಐ
 • ವುಹಾನ್‌ ವೈರಸ್‌: ಏಳು ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ
 • ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
 • ಸಿದ್ದರಾಮಯ್ಯ ವಿರುದ್ಧ ಪ್ರತಿಭಟಿಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್
 • ಅಂಧರ ಕ್ರಿಕೆಟ್: ಆಂಧ್ರ ಪ್ರದೇಶ ತಂಡಕ್ಕೆೆ ಟಿ-20 ಮುಕುಟ
 • ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಯಡಿಯೂರಪ್ಪ ಮನವಿ
 • ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಿಂದ ಇಶಾಂತ್ ಶರ್ಮಾ ಔಟ್
 • ನಾರಾಯಣ ಹೆಲ್ತ್ ಸಿಟಿಯಿಂದ ನಾಲ್ಕು ವರ್ಷದ ಮಗುವಿಗೆ ಹೃದಯ ಕಸಿ: ಮಹತ್ವದ ಸಾಧನೆ
 • ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ
 • ಅಮರಾವತಿ ಆಂಧ್ರ ರಾಜಧಾನಿಯಾಗಿ ಮುಂದುವರಿಯಲಿದೆ; ಪವನ್ ಕಲ್ಯಾಣ್
 • ಮನೆ ಮನೆಗೆ ಸಿಎಎ ವಿರುದ್ಧ ಅಭಿಯಾನ ಕೊಂಡೊಯ್ಯಲು ಜೆಡಿಎಸ್ ಸಿದ್ಧತೆ
 • ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ನೋಂದಣಿ ಇಳಿಮುಖ: ಮುಖ್ಯಚುನಾವಣಾಧಿಕಾರಿ ಬೇಸರ!
 • ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ
 • ಮೆಂಟನ್ ಕಪ್ ಶೂಟಿಂಗ್ : ಅಪೂರ್ವಿ, ದಿವ್ಯಾಂಶ್ ಗೆ ಚಿನ್ನದ ಪದಕ
 • ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!
Health -Lifestyle Share

ದಿವ್ಯಾಂಗರಿಗಾಗಿ ಮೊಬಿಲಿಟಿ ಇಂಡಿಯಾದಿಂದ ‘2030ಕ್ಕೆ ಎಲ್ಲರಿಗೂ ತಂತ್ರಜ್ಞಾನ’ ರಾಷ್ಟ್ರೀಯ ಸಮ್ಮೇಳನ

ದಿವ್ಯಾಂಗರಿಗಾಗಿ ಮೊಬಿಲಿಟಿ ಇಂಡಿಯಾದಿಂದ ‘2030ಕ್ಕೆ ಎಲ್ಲರಿಗೂ ತಂತ್ರಜ್ಞಾನ’ ರಾಷ್ಟ್ರೀಯ ಸಮ್ಮೇಳನ
ದಿವ್ಯಾಂಗರಿಗಾಗಿ ಮೊಬಿಲಿಟಿ ಇಂಡಿಯಾದಿಂದ ‘2030ಕ್ಕೆ ಎಲ್ಲರಿಗೂ ತಂತ್ರಜ್ಞಾನ’ ರಾಷ್ಟ್ರೀಯ ಸಮ್ಮೇಳನ

ಬೆಂಗಳೂರು, ಜುಲೈ 30 (ಯುಎನ್ಐ) ಮೊಬಿಲಿಟಿ ಇಂಡಿಯಾ ಸಂಸ್ಥೆ, ನಗರದ ನಿಮ್ಹಾನ್ಸ್ ಸಮಾವೇಶ ಸಭಾಂಗಣದಲ್ಲಿ ಆಗಸ್ಟ್ 2 ಮತ್ತು 3 ರಂದು “2030ಕ್ಕೆ ಎಲ್ಲರಿಗೂ ತಂತ್ರಜ್ಞಾನ” ವಿಷಯ ಕುರಿತ ರಾಷ್ಟ್ರೀಯ ಸಮ್ಮೇಳನ ಯೋಜಿಸಿದೆ.ಈ ಎರಡು ದಿನಗಳ ಕಾರ್ಯಕ್ರಮದಲ್ಲಿ, ಅಂಗವಿಕಲರಿಗೆ ಅನುಕೂಲವಾಗುವಂತಹ ವ್ಯವಸ್ಥೆಗಳು ಮತ್ತು ಸೇವೆಗಳನ್ನು ಒಳಗೊಂಡಂತೆ ಸಹಾಯಕ ಉತ್ಪನ್ನಗಳು ಹಾಗೂ ಇದಕ್ಕೆ ಸಂಬಂಧಿಸಿದ ಸಹಾಯಕ ತಂತ್ರಜ್ಞಾನದ ಕೌಶಲ್ಯಗಳನ್ನು ಸಮ್ಮೇಳನದಲ್ಲಿ ಚರ್ಚಿಸಲಾಗುತ್ತದೆ.ಸಹಾಯಕ ಉತ್ಪನ್ನಗಳು ತನ್ನ ಕೆಲಸಗಳನ್ನು ಸ್ವತಂತ್ರವಾಗಿ ತಾನೇ ನಿರ್ವಹಿಸಲು ಸಹಕಾರಿಯಾಗಿವೆ. ಅವುಗಳಿಗೆ ಉದಾಹರಣೆ ಎಂದರೆ ಗಾಲಿ ಕುರ್ಚಿಗಳು, ಚಲನಶೀಲತೆಯ ಸಾಧನಗಳು, ಶ್ರವಣ ಸಾಧನ, ಪ್ರಾಸ್ಥೆಟಿಕ್ ಮತ್ತು ಆರ್ಥೋಟಿಕ್ ಸಾಧನಗಳು ಮತ್ತು ಸಂವಹನ ಸಾಧನಗಳನ್ನು ಒಳಗೊಂಡಿವೆ.ಈ ಎಲ್ಲಾ ಸಹಾಯಕ ತಂತ್ರಜ್ಞಾನದ ವಲಯದ ವೃದ್ಧಿ, ತಂತ್ರಜ್ಞಾನದ ಗುಣಮಟ್ಟ ಸುಧಾರಣೆ ಮತ್ತು ಇದನ್ನು ಎಲ್ಲರಿಗೂ ತಲುಪುವಂತೆ ಮಾಡುವುದು ಸಮ್ಮೇಳನದ ಮೂಲ ಉದ್ದೇಶವಾಗಿದೆ.ಸಮ್ಮೇಳನದಲ್ಲಿ ಭಾರತ ಮತ್ತು ಇತರ ದೇಶಗಳಿಂದ 300ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಅವರಲ್ಲಿ ನೀತಿ ನಿರೂಪಕರು, ಸರ್ಕಾರಿ ಅಧಿಕಾರಿಗಳು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳ ಸಂಸ್ಥೆಗಳು ಮತ್ತು ಏಜೆನ್ಸಿಗಳು, ಸಹಾಯಕ ತಂತ್ರಜ್ಞಾನ ಸಂಘಗಳು, ಅಕಾಡೆಮಿಗಳು, ವಿಶ್ವವಿದ್ಯಾಲಗಳು, ಸಂಶೋಧಕರು, ಆರೋಗ್ಯ ಸಿಬ್ಬಂದಿ, ಪುನರ್ವಸತಿ ತಜ್ಞರು, ವಿನ್ಯಾಸ ಇಂಜಿನಿಯರ್ ಗಳು, ಕಾರ್ಪೋರೇಟರ್ ಗಳು, ವಾಸ್ತುಶಿಲ್ಪಿಗಳು, ನಾಗರಿಕ ಸಮಾಜದ ಸಂಸ್ಥೆಗಳು, ವಿಕಲಚೇತನರು, ವಯಸ್ಸಾದವರು, ಸಹಾಯಕ ತಂತ್ರಜ್ಞಾನ ಬಳಕೆದಾರರು ಮತ್ತು ಅವರ ಕುಟುಂಬಗಳು, ಆರೈಕೆ ನೀಡುವವರು ಮತ್ತು ಸಹಾಯಕ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾಗಿಯಾಗಿರುವ ಇತರೆ ಪಾಲುದಾರರು ಭಾಗಿಯಾಗಲಿದ್ದಾರೆ.ಯುಎನ್ಐ ಡಿಸಿ ಎಎಸ್ 1953

More News
ವಾಗ್ಮೀ, ಕವಿ, ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ, ಪ್ರಧಾನಿಯಾಗಿ ಹತ್ತು ಹಲವು ಆಯಾಮಗಳಲ್ಲಿ ಅಟಲ್ ಬಿಹಾರಿ ವಾಜಪೇಯಿ

ವಾಗ್ಮೀ, ಕವಿ, ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ, ಪ್ರಧಾನಿಯಾಗಿ ಹತ್ತು ಹಲವು ಆಯಾಮಗಳಲ್ಲಿ ಅಟಲ್ ಬಿಹಾರಿ ವಾಜಪೇಯಿ

25 Dec 2019 | 4:06 PM

ನವದೆಹಲಿ, ಡಿ 25 [ಯುಎನ್ಐ] ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಬದುಕು, ಬರಹ, ರಾಜಕೀಯ ಜೀವನ ಕುರಿತು ಕೇಂದ್ರ ಸಮಾಚಾರ ಮತ್ತು ಪ್ರಸಾರ ಸಚಿವರಾಗಿದ್ದ ಸಂದರ್ಭದಲ್ಲಿ ಈಗಿನ ಉಪ ರಾಷ್ಟ್ರಪತಿ ಎಂ.

 Sharesee more..