Monday, Feb 24 2020 | Time 16:52 Hrs(IST)
 • 21 ನೇ ಶತಮಾನದಲ್ಲಿ ಭಾರತ-ಅಮೆರಿಕ ಸಂಬಂಧಗಳದ್ದು ಮಹತ್ವದ ಪಾತ್ರ-ಪ್ರಧಾನಿ ಮೋದಿ
 • ಮಹದಾಯಿ ತೀರ್ಪು: ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹೇರಲು ಎಚ್ ಕೆ ಪಾಟೀಲ್ ಸರ್ಕಾರಕ್ಕೆ ಒತ್ತಾಯ
 • ಟ್ರಂಪ್ ಭೇಟಿ ಹಿನ್ನೆಲೆ-ಕಾಶ್ಮೀರದಾದ್ಯಂತ ಭದ್ರತಾಪಡೆ ಹದ್ದಿನ ಕಣ್ಣು
 • ಕೆ2 ಸಮಸ್ಯೆಯಿಂದ ಶಿಕ್ಷಕರ ವೇತನ ವಿಳಂಬ: ರಮೇಶ್ ಬಾಬು ಆರೋಪ
 • ಭೂಗತ ಪಾತಕಿ ರವಿ ಪೂಜಾರಿಗೆ ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ
 • ಗೌತಮ್ ಸ್ಪಿನ್ ಮೋಡಿ : ಸತತ ಮೂರನೇ ಬಾರಿ ಸೆಮಿಫೈನಲ್ ತಲುಪಿದ ಕರ್ನಾಟಕ
 • ಮೂರು ಶತಕೋಟಿ ಡಾಲರ್ ರಕ್ಷಣಾ ಒಪ್ಪಂದಕ್ಕೆ ನಾಳೆ ಸಹಿ: ಟ್ರಂಪ್
 • ಬನ್ನೇರುಘಟ್ಟ ಉದ್ಯಾನದ ಪರಿಸರ ಸೂಕ್ಷ್ಮ ವಲಯ ಕುಗ್ಗಿಸುವ ಪ್ರಸ್ತಾವನೆಗೆ ಬೆಂಗಳೂರು ಪ್ರತಿಷ್ಠಾನ ವಿರೋಧ
 • ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧಿ ಅವರಿಗೆ ಟ್ರಂಪ್, ಮೆಲಾನಿಯಾ ಗೌರವ ನಮನ ಸಲ್ಲಿಕೆ
 • ‘ನಮಸ್ತೆ ಟ್ರಂಪ್’ ಕಾರ್ಯಕ್ರಮಕ್ಕೆ ನೂರು ಕೋಟಿ : ದೇಶಕ್ಕೆ ಲಾಭವಿಲ್ಲ -ರಾಜ್ಭರ್
 • ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಲು ಯುವಜನತೆಗೆ ಉಪರಾಷ್ಟ್ರಪತಿ ಕರೆ
 • ಡಿ ವೈ ಪಾಟೀಲ್ ಟಿ20 ಆಡಲು ಸಜ್ಜಾದ ಹಾರ್ದಿಕ್ ಪಾಂಡ್ಯ
 • ಕಾರನ್ನು ವಿದ್ಯುತ್ ಕಂಬಕ್ಕೆ ಗುದ್ದಿ, ಗ್ರಾಮಸ್ಥರ ಮೇಲೆ ಹಲ್ಲೆಗೆ ಮುಂದಾದ ಶಾಸಕರ ಮೊಮ್ಮಗ
 • ರಸ್ತೆ ಅಪಘಾತ: ಇಬ್ಬರು ಸಾವು
 • ವಿಚಾರಣೆಗೆ ಹಾಜರಾಗುವಂತೆ ವಾರಿಸ್ ಪಠಾಣ್ ಗೆ ನೋಟಿಸ್
International Share

ನಿಮ್ಮ ಹಣ ತೆಗೆದುಕೊಳ್ಳಿ ಬ್ಯಾಂಕುಗಳಿಗೆ ಉದ್ಯಮಿ ವಿಜಯ್ ಮಲ್ಯ ಅಲವತು

ನಿಮ್ಮ ಹಣ ತೆಗೆದುಕೊಳ್ಳಿ ಬ್ಯಾಂಕುಗಳಿಗೆ ಉದ್ಯಮಿ ವಿಜಯ್ ಮಲ್ಯ ಅಲವತು
ನಿಮ್ಮ ಹಣ ತೆಗೆದುಕೊಳ್ಳಿ ಬ್ಯಾಂಕುಗಳಿಗೆ ಉದ್ಯಮಿ ವಿಜಯ್ ಮಲ್ಯ ಅಲವತು

ಲಂಡನ್, ಫೆ 14 (ಯುಎನ್ಐ) ನನಗೆ ನಿಮ್ಮ ಹಣ ಬೇಡ ಸಾಲ ಕಟ್ಟದೆ ಮೊಸ ಮಾಡುವ ವ್ಯಕ್ತಿ ನಾನಲ್ಲ ಅದೂ ನನ್ನ ಜಾಯಮಾನವೂ ಅಲ್ಲ ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು , ಪ್ರಮಾದ ಎಸಗಿಲ್ಲ ಬ್ಯಾಂಕ್ಗಳೇ, ನಿಮಗೆ ಕೊಡಬೇಕಿರುವ, ಬಾಕಿ ಇರುವ, ನೀವು ನೀಡಿದ ಮೂಲ ಹಣವನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಬೆಂಗಳೂರು ಮೂಲದ ಅಬಕಾರಿ ಉದ್ಯಮಿ ವಿಜಯ್ ಮಲ್ಯ ಅಲವತು ಕೊಂಡಿದ್ದಾರೆ.

ಭಾರತಕ್ಕೆ ಗಡೀಪಾರು ಮಾಡುವ ಆದೇಶದ ವಿರುದ್ಧ ಬ್ರಿಟನ್ ಹೈಕೋರ್ಟ್ನಲ್ಲಿ ಸಲ್ಲಿಸಿದ ಮೇಲ್ಮನವಿಯ ಮೂರು ದಿನಗಳ ವಿಚಾರಣೆಯ ನಂತರ ಈ ಕೋರಿಕೆ ಮುಂದಿಟ್ಟಿದ್ದಾರೆ.

ಬ್ಯಾಂಕ್ ಗಳಿಂದ ಪಡೆದ 9ಸಾವಿರ ಕೋಟಿ ರೂಪಾಯಿ ವಾಪಾಸು ಮಾಡದೇ ವಂಚಿಸಿದ ಆರೋಪ ಎದುರಿಸುತ್ತಿರುವ ಕಿಂಗ್ಫಿಶರ್ಸ್ ಸಮೂಹದ ಮುಖ್ಯಸ್ಥ, "ಕಾನೂನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಒಂದೇ ಆಸ್ತಿಗಾಗಿ ಜಗಳವಾಡುತ್ತಿವೆ. ಆದರೆ ಈ ಪ್ರಕ್ರಿಯೆಯಲ್ಲಿ ನನ್ನನ್ನು ವಿವೇಚನಾಯುಕ್ತವಾಗಿ, ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದೂ ಮಲ್ಯ ಆಪಾದಿಸಿದ್ದಾರೆ.

ಬ್ಯಾಂಕುಗಳು ನೀಡಿದ ಸಾಲದ ಹಣವನ್ನು ವಾಪಾಸು ತೆಗೆದುಕೊಳ್ಳುವಂತೆ ನಾನು ಕೈಮುಗಿದು ಮನವಿ ಮಾಡುತ್ತೇನೆ ಎಂದು ಲಂಡನ್ನಲ್ಲಿರುವ ರಾಯಲ್ ಕೋರ್ಟ್ ಆಫ್ ಜೆಸ್ಟೀಸ್ನ ಹೊರಗೆ ಅವರು ಸ್ಪಷ್ಟಪಡಿಸಿದ್ದಾರೆ.

ನಾನು ಹಣ ಮರುಪಾವತಿ ಮಾಡಿಲ್ಲ ಎಂಬ ಬ್ಯಾಂಕ್ಗಳ ದೂರಿನ ಆಧಾರದಲ್ಲಿ ಜಾರಿ ನಿರ್ದೇಶನಾಲಯ ನನ್ನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಆದರೆ ಇಡಿ ಸ್ವಯಂಪ್ರೇರಿತವಾಗಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು , ಅಪರಾದ ಮಾಡಿಲ್ಲ ಎಂದೂ ಸಮರ್ಥಿಸಿಕೊಂಡಿದ್ದಾರೆ

ಯುಎನ್ಐ ಕೆಎಸ್ಆರ್ 1211