Sunday, May 31 2020 | Time 19:27 Hrs(IST)
 • ದಕ್ಷಿಣ ಕನ್ನಡದಲ್ಲಿ ಕಂಡುಬಂದ ಮಿಡತೆ ಲೋಕಸ್ಟ್ ಮಿಡತೆಯಲ್ಲ: ಕೃಷಿ ಇಲಾಖೆ ಸ್ಪಷ್ಟನೆ
 • ಮದುವೆಗೂ ಮುನ್ನವೇ ತಂದೆಯಾಗುವ ನಿರೀಕ್ಷೆಯಲ್ಲಿ ಹಾರ್ದಿಕ್ ಪಾಂಡ್ಯ‌
 • ಜೂನ್ 3ರ ವೇಳೆಗೆ ಗುಜರಾತ್,ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಬೀಸುವ ಸಾಧ್ಯತೆ:ಹವಾಮಾನ ಇಲಾಖೆ ಎಚ್ಚರಿಕೆ
 • 3 ಬಾರಿ ಒಲಿಂಪಿಕ್ ಚಾಂಪಿಯನ್ ಬಾಬಿ ನಿಧನ
 • ಇಂದಿನಿಂದ ಲಂಕಾ ಕ್ರಿಕೆಟಿಗರ ಅಭ್ಯಾಸ ಶುರು
 • ಅಮೇರಿಕಾ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಸಮಸ್ಯೆ ಪರಿಹರಿಸುವಂತೆ ಸಿದ್ದರಾಮಯ್ಯ ಒತ್ತಾಯ
 • ರಾಜ್ಯದಲ್ಲಿ ಒಂದೇ ದಿನ 299 ಕೊರೋನಾ ಸೋಂಕಿತರು ಪತ್ತೆ, ಒಟ್ಟು ಸಂಖ್ಯೆ 3221ಕ್ಕೇರಿಕೆ
 • ತಮ್ಮ ವಿಶ್ವ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಇಬ್ಬರು ಭಾರತೀಯರನ್ನು ಹೆಸರಿಸಿದ ಅಂಪೈರ್ ಇಯಾನ್
 • ರಾಜ್ಯ ಸರ್ಕಾರದ ಲಾಕ್‌ ಡೌನ್‌ 5 0 ಹೊಸ ಮಾರ್ಗಸೂಚಿ ಪ್ರಕಟ; ಮೂರು ಹಂತಗಳಲ್ಲಿ ನಿರ್ಬಂಧ ಸಡಿಲಿಕೆ
 • ತೆಲಂಗಾಣದಲ್ಲಿ ಜೂನ್ 30 ರವರೆಗೆ ಲಾಕ್‌ಡೌನ್ ವಿಸ್ತರಣೆ
 • 2007ರ ವಿಶ್ವಕಪ್‌ ವೈಫಲ್ಯದ ಬಳಿಕ ಆತ್ಮವಿಶ್ವಾಸ ಮೂಡಿಸಿದ್ದು ದ್ರಾವಿಡ್: ಇರ್ಫಾನ್
 • ಕೇಂದ್ರದಿಂದ 5 ಸಾವಿರ ಕೋಟಿ ರೂ ನೆರವಿನ ಬೇಡಿಕೆಯಿಟ್ಟ ದೆಹಲಿ
 • ಮುಂಬೈನಲ್ಲಿ ಸಿಲುಕಿದ್ದ ಇನ್ನೂ 180 ವಲಸಿಗರು ವಿಶೇಷ ವಿಮಾನದ ಮೂಲಕ ರಾಂಚಿಗೆ ಆಗಮನ
 • ಬಾಂಗ್ಲಾದೇಶದಲ್ಲಿ ಒಂದೇ ದಿನ ಅತಿಹೆಚ್ಚು 40 ಕೊರೊನವೈರಸ್ ಸೋಂಕಿತರು ಸಾವು
 • ತಳಮಟ್ಟದವರಿಗಾಗಿ ಆನ್ ಲೈನ್ ಕೋಚಿಂಗ್ ತರಬೇತಿ ಖೇಲೋ ಇಂಡಿಯಾ ಇ ಪ್ರತಿಷ್ಠಾನ ಆರಂಭಿಸಲಿರುವ ಸಾಯ್
International Share

ನ್ಯೂಜಿಲೆಂಡ್ ದಕ್ಷಿಣ ದ್ವೀಪದಲ್ಲಿ ಕಾಡ್ಗಿಚ್ಚು

ವೆಲ್ಲಿಂಗ್ ಟನ್, ನ 8 (ಯುಎನ್ಐ) ನ್ಯೂಜಿಲೆಂಡ್ ನ ದಕ್ಷಿಣ ದ್ವೀಪದ ಡುನೇಡಿನ್ ಉತ್ತರದಲ್ಲಿರುವ ಪೈನ್ ಮರಗಳಿಗೆ ಬೆಂಕಿ ತಗುಲಿದ್ದು, ಭಾರಿ ಕಾಡ್ಗಿಚ್ಚಾಗಿ ಪರಿಣಮಿಸಿದೆ.

ಸ್ಥಳೀಯ ನಾಗರಿಕ ರಕ್ಷಣಾ ಇಲಾಖೆ ಈ ಸಂಬಂಧ ಮಾಹಿತಿ ನೀಡಿದ್ದು, ಸುಮಾರು 10 ಹೆಕ್ಟೇರ್ ಅರಣ್ಯಕ್ಕೆ ಬೆಂಕಿ ತಗುಲಿದೆ ಎನ್ನಲಾಗಿದೆ. ಅರಣ್ಯದ ಸುತ್ತಮುತ್ತ ವಾಸಿಸುವ ಜನರಿಗೆ ಆ ಸ್ಥಳದಿಂದ ದೂರಕ್ಕೆ ವಲಸೆ ಹೋಗುವಂತೆ ಸೂಚಿಸಲಾಗಿದೆ.

ಕಾಡ್ಗಿಚ್ಚಿನಿಂದ ಉಂಟಾಗಿರುವ ಸಾವು ನೋವಿನ ಕುರಿತು ಇನ್ನೂ ವರದಿಯಾಗಿಲ್ಲ. ಎರಡು ಹೆಲಿಕಾಪ್ಟರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

2018ರ ಫೆಬ್ರವರಿಯಲ್ಲಿ ಇಲ್ಲಿನ ಡುನೆಡಿನ್ ಕೈಗಾರಿಕ ಉಪವಲಯದ 20 ಹೆಕ್ಟೇರ್ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಕನಿಷ್ಠ 100 ಮನೆಗಳನ್ನು ತೆರವುಗೊಳಿಸಲಾಗಿತ್ತು ಮತ್ತು ಮೂರು ಕೈಗಾರಿಕಾ ಕಟ್ಟಡಗಳು ನೆಲಸಮವೊಂಡಿದ್ದವು.

ನ್ಯೂಜಿಲೆಂಡ್ ನಲ್ಲಿ ಅಕ್ಟೋಬರ್ ತಿಂಗಳಿಂದ ಬಿಸಿ ಹವೆ ಜಾಸ್ತಿಯಾಗವುದರಿಂದ ಕಾಡ್ಗಿಚ್ಚು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ.
ಯುಎನ್ಐ ಎಸ್ಎಚ್ 0935
More News
ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

31 May 2020 | 6:08 PM

ನವದೆಹಲಿ, ಮೇ 31 (ಯುಎನ್ಐ)- ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ವಿಶ್ವದಲ್ಲಿ 60 ಲಕ್ಷದಾಟಿದ್ದು, 3.64 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

 Sharesee more..
ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

31 May 2020 | 5:31 PM

ವಾಷಿಂಗ್ಟನ್ /ನವದೆಹಲಿ, ಮೇ 31 (ಯುಎನ್ಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನಡೆಯಬೇಕಿದ್ದ ಜಿ7 ಶೃಂಗ ಸಭೆಯನ್ನು ಮುಂದೂಡಿದ್ದು, ಅದನ್ನು 'ಔಟ್ ಡೇಟೆಟ್' ಎಂದು ಕರೆದಿದ್ದಾರೆ. ಜೊತೆಗೆ, ಜಿ 7 ತಂಡದಲ್ಲಿ ಭಾರತ, ಆಸ್ಟ್ರೇಲಿಯಾ, ರಷ್ಯಾ ಮತ್ತು ದಕ್ಷಿಣ ಕೊರಿಯಾವನ್ನು ಸೇರಿಸಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.

 Sharesee more..