Saturday, Aug 15 2020 | Time 10:43 Hrs(IST)
  • ಭಾರತ - ಜರ್ಮನಿ ನಡುವೆ ಒಪ್ಪಂದ; ಬೆಂಗಳೂರಿಗೆ ವಿಮಾನ ಸೇವೆ ಪ್ರಾರಂಭಿಸಿದ ಲುಫ್ತಾನ್ಸಾ
  • ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿಯ ಹೊಸಪರ್ವವೇ ಆರಂಭ; ಸ್ವಾತಂತ್ರ್ಯ ದಿನದ ಸಂದೇಶದಲ್ಲಿ ಕೆ ಎಸ್ ಈಶ್ವರಪ್ಪ
  • ಭಾನುವಾರದಿಂದ ಮಾತಾ ವೈಷ್ಣೋ ದೇವಿ ಯಾತ್ರೆ ಆರಂಭ
  • ಭಾರತೀಯರು ಸ್ಥಳೀಯರ ಧ್ವನಿಯಾಗಬೇಕು- ಪ್ರಧಾನಿ ಪ್ರತಿಪಾದನೆ
  • ನಾಡಿನ ಜನತೆಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಕೋರಿದ ಮುಖ್ಯಮಂತ್ರಿ
  • ಆತ್ಮನಿರ್ಭರ ಭಾರತ, ಪ್ರತಿ ಭಾರತೀಯರ ದಿವ್ಯ ಮಂತ್ರ: ಪ್ರಧಾನಿ
  • ಅಧಿಕೃತ ನಿವಾಸದಲ್ಲೇ ಧ್ವಜಾರೋಹಣ ನೆರವೇರಿಸಿದ ರಾಜನಾಥ್ ಸಿಂಗ್
  • ಕರೋನ ಸಮರದಲ್ಲಿ ಗೆಲ್ಲುವುದೆ ನಮ್ಮ ಮುಖ್ಯ ಗುರಿ: ಮೋದಿ
  • ಡಿ ಜೆ ಹಳ್ಳಿ ಗಲಭೆ ಪ್ರಕರಣ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ಮಾಡಿ ರಾಜ್ಯ ಸರ್ಕಾರದ ಆದೇಶ
National Share

ನಿರ್ಭಯಾ ಪ್ರಕರಣದ ಆರೋಪಿಯ ಕ್ಷಮಾದಾನ ತಿರಸ್ಕರಿಸುವಂತೆ ಮಹಿಳಾ ಆಯೋಗ ಮನವಿ

ನವದೆಹಲಿ, ಡಿ 2 (ಯುಎನ್ಐ) ದೆಹಲಿಯ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಹೈದರಾಬಾದ್ ನ ಪಶು ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹಲ್ಲೆಯನ್ನು ಗಮನದಲ್ಲಿರಿಸಿಕೊಂಡು, ಕ್ಷಮಾದಾನದ ಅರ್ಜಿಯನ್ನು ವಜಾಗೊಳಿಸಬೇಕು. ದೇಶದಲ್ಲಿ ಯುವತಿಯರು ಮತ್ತು ಮಹಿಳೆಯರು ಮೇಲೆ ಅಮಾನವೀಯ ಕೃತ್ಯಗಳು ನಡೆಯುತ್ತಿರುವುದರಿಂದ ಆರೋಪಿಯ ಮೇಲೆ ಕರುಣೆ ತೋರಿಸಬಾರದು. ಕ್ಷಮಾದಾನ ತಿರಸ್ಕರಿಸುವುದರಿಂದ ಇತರರಿಗೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮನವಿ ಮಾಡಿದ್ದಾರೆ.

ಜೊತೆಗೆ, ಇಂತಹ ಗಂಭೀರ ಪ್ರಕರಣಗಳ ವಿಚಾರಣೆಗೆ ಕಾಲಮಿತಿ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಯುಎನ್ಐ ಎಸ್ಎಚ್ 2034