Saturday, Feb 29 2020 | Time 15:22 Hrs(IST)
  • ಮಲೇಷಿಯಾದ ನೂತನ ಪ್ರಧಾನಮಂತ್ರಿಯಾಗಿ ಮುಹಿದ್ದೀನ್ ಯಾಸಿನ್ ನೇಮಕ
  • ಭಾರತದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಟೆನಿಸ್ ಸ್ಟಾರ್ ನೊವಾಕ್ ಜೊಕೊವಿಚ್
  • ದೇಶದ ಜನರಿಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ; ಪ್ರಧಾನಿ ಮೋದಿ
  • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
  • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
  • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
  • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
  • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
  • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
  • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
  • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
  • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
  • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
  • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
  • ಎರಡನೇ ಟೆಸ್ಟ್: ಭಾರತ 242ಕ್ಕೆ ಆಲೌಟ್ ; ನ್ಯೂಜಿಲೆಂಡ್‌ಗೆ ಮೊದಲ ದಿನದ ಗೌರವ
International Share

ಪೈಪ್‌ಲೈನ್ ಯೋಜನೆ ವಿರುದ್ಧ ಪ್ರತಿಭಟನೆ: ಕೆನಡಾದಲ್ಲಿ ರೈಲು ಸೇವೆ ಸ್ಥಗಿತ

ಒಟ್ಟಾವಾ, ಫೆಬ್ರವರಿ 14 (ಯುಎನ್‌ಐ) ಪೈಪ್‌ಲೈನ್ ಯೋಜನೆ ವಿರುದ್ಧ ಪ್ರತಿಭಟನೆ ಪರಿಣಾಮವಾಗಿ ಕೆನಡಾದಾದ್ಯಂತ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ.
ಪ್ರತಿಭಟನೆ ಪರಿಣಾಮವಾಗಿ ಎಲ್ಲಾ ರೈಲು ಸೇವೆಯನ್ನು ತಕ್ಷಣವೇ ರದ್ದುಗೊಳಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಸಿಎನ್ ರೈಲು ಕಂಪನಿ ತಿಳಿಸಿದೆ.

ಈ ದುರದೃಷ್ಟಕರ ಪರಿಸ್ಥಿತಿಯಿಂದ ಪ್ರಯಾಣಿಕರ ಮೇಲೆ ಬೀರುವ ಪರಿಣಾಮವನ್ನು ನಾವು ಅರ್ಥಮಾಡಿಕೊಂಡಿದ್ದೇವೆ ಇದಕ್ಕಾಗಿ ಅವರಿಗೆ ಆಗುತ್ತಿರುವ ಅನಾನುಕೂಲಕ್ಕೆ ವಿಷಾದಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಒಂಟಾರಿಯೊ ಪ್ರಾಂತ್ಯದ ಬೆಲ್ಲೆವಿಲ್ಲೆ ಬಳಿ ಸ್ಥಳೀಯ ಪ್ರತಿಭಟನಾಕಾರರು ತಮ್ಮ ದಿಗ್ಬಂಧನವನ್ನು ಕೈ ಬಿಡಲು ನಿರಾಕರಿಸಿದ್ದರಿಂದ ದೇಶದ ಅತಿದೊಡ್ಡ ರೈಲ್ವೆ ಸಿಎನ್ ರೈಲು ಸೇವೆಯನ್ನು ಸ್ಥಗಿತಗೊಳಿಸುತ್ತಿದೆ ಎಂದೂ ಪ್ರಕಟಣೆ ಹೇಳಿದೆ.
ಟೊರೊಂಟೊ-ಮಾಂಟ್ರಿಯಲ್ ಮತ್ತು ಒಟ್ಟಾವಾ-ಟೊರೊಂಟೊ ನಡುವಿನ ಕಾರ್ಯನಿರತ ಕಾರಿಡಾರ್ ಸೇರಿದಂತೆ ದೇಶಾದ್ಯಂತ ರೈಲು ಸಂಚಾರವನ್ನು ಪ್ರತಿಭಟನಾಕಾರರು ನಿರ್ಬಂಧಿಸಿದ್ದಾರೆ.
ಯುಎನ್ಐ ಕೆಎಸ್ ಆರ್ 0928