Saturday, Feb 29 2020 | Time 15:07 Hrs(IST)
 • ಭಾರತದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಟೆನಿಸ್ ಸ್ಟಾರ್ ನೊವಾಕ್ ಜೊಕೊವಿಚ್
 • ದೇಶದ ಜನರಿಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ; ಪ್ರಧಾನಿ ಮೋದಿ
 • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
 • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
 • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
 • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
 • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
 • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
 • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
 • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
 • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
 • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
 • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
 • ಎರಡನೇ ಟೆಸ್ಟ್: ಭಾರತ 242ಕ್ಕೆ ಆಲೌಟ್ ; ನ್ಯೂಜಿಲೆಂಡ್‌ಗೆ ಮೊದಲ ದಿನದ ಗೌರವ
 • ಪ್ರಧಾನಿ ಆಗಮನಕ್ಕೂ ಮುನ್ನ ಪ್ರಯಾಗ್ ರಾಜ್ ನಲ್ಲಿ ಮೂರು ಗಿನ್ನೆಸ್ ವಿಶ್ವ ದಾಖಲೆ ನಿರ್ಮಾಣ
Sports Share

ಬರೋಡ 296ಕ್ಕೆ ಆಲೌಟ್: ಗೆಲುವಿನ ಸನಿಹದಲ್ಲಿ ಕರ್ನಾಟಕ

ಬೆಂಗಳೂರು, ಫೆ 14 (ಯುಎನ್ಐ) ಪ್ರಸಿದ್ಧ ಕೃಷ್ಣ ಮಾರಕ ದಾಳಿಯ ನೆರವಿನಿಂದ ಕರ್ನಾಟಕ ತಂಡ 2019/20ನೇ ಸಾಲಿನ ರಣಜಿ ಟ್ರೋಫಿ ಎಲೈಟ್ ಎ ಮತ್ತು ಬಿ ಗುಂಪಿನ ಪಂದ್ಯದಲ್ಲಿ ಬರೋಡ ವಿರುದ್ಧ ಗೆಲುವಿನ ಸನಿಹದಲ್ಲಿದೆ.
ಇಲ್ಲಿನ, ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ವಿಕೆಟ್ ಕಳೆದುಕೊಂಡು 208 ರನ್‌ಗಳಿಂದ ಮೂರನೇ ದಿನದಾಟ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಬರೋಡ ತಂಡ 89.5 ಓವರ್‌ಗಳಿಗೆ 296 ರನ್‌ಗಳಿಗೆ ಆಲೌಟ್ ಆಯಿತು. ಆ ಮೂಲಕ ಕರ್ನಾಟಕಕ್ಕೆ 149 ರನ್ ಸಾಧಾರಣ ಗುರಿ ನೀಡಿತು. ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿದ ಕರ್ನಾಟಕ ತಂಡ ಮಧ್ಯಾಹ್ನದ ಭೋಜನ ವಿರಾಮದ ವೇಳೆಗೆ 6.2 ಓವರ್‌ಗಳಿಗೆ ಒಂದು ವಿಕೆಟ್ ನಷ್ಟಕ್ಕೆ 17 ರನ್ ಗಳಿಸಿದೆ.
ಮೊದಲ ಇನಿಂಗ್ಸ್‌ನಲ್ಲಿ ಕೇವಲ 85 ರನ್‌ಗಳಿಗೆ ಆಲೌಟ್ ಆಗಿದ್ದ ಬರೋಡ ತಂಡ ದ್ವಿತೀಯ ಇನಿಂಗ್ಸ್‌ನಲ್ಲಿ ಕರ್ನಾಟಕ ಬೌಲರ್‌ಗಳ ಸವಾಲನ್ನು ಮೀರಿ ನಿಂತಿತು. ಇದರ ಫಲವಾಗಿ ದ್ವಿತೀಯ ಇನಿಂಗ್ಸ್‌ನಲ್ಲಿ 296 ರನ್ ಗಳಿಸಲು ಸಾಧ್ಯವಾಯಿತು.
ಇಂದು ಮಧ್ಯಮ ಕ್ರಮಾಂಕದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ ಅಭಿಮನ್ಯು ರಜಪೂತ್ ಹಾಗೂ ಪಾರ್ಥ್ ಕೊಹ್ಲಿ ಜೋಡಿಯು ಮುರಿಯದ ಆರನೇ ವಿಕೆಟ್‌ಗೆ 52 ರನ್‌ಗಳ ಜತೆಯಾಟವಾಡಿತು.
ಮೂರನೇ ದಿನ ಬೆಳಗ್ಗೆ ಅತ್ಯುತ್ತಮ ಬ್ಯಾಟಿಂಗ್ ಮಾಡಿದ ಅಭಿಮನ್ಯು ರಜಪೂತ್ 72 ಎಸೆತಗಳಲ್ಲಿ ಎಂಟು ಬೌಂಡರಿಯೊಂದಿಗೆ 52 ರನ್ ಗಳಿಸಿದರು. ಮತ್ತೊಂದು ತುದಿಯಲ್ಲಿ ಇವರಿಗೆ ಹೆಗಲು ನೀಡಿದ್ದ ಪಾರ್ಥ್ ಕೊಹ್ಲಿ 88 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ ಮೂರು ಬೌಂಡರಿಯೊಂದಿಗೆ 42 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನುಳಿದಂತೆ ಕೊನೆಯಲ್ಲಿ ವಿರಾಜ್ ಭೋಸಲೆ 16 ರನ್ ಗಳಿಸಿ ತಂಡಕ್ಕೆ ಅಲ್ಪ ಕಾಣಿಕೆ ನೀಡಿದರು.
ಕರ್ನಾಟಕದ ಪರ ಮಿಂಚಿನ ದಾಳಿ ನಡೆಸಿದ ಪ್ರಸಿದ್ಧ ಕೃಷ್ಣ ನಾಲ್ಕು ವಿಕೆಟ್ ಕಿತ್ತು ಬರೋಡ ಪತನಕ್ಕೆ ಪ್ರಮುಖ ಕಾರಣರಾದರು. ಇವರಿಗೆ ಸಾಥ್ ನೀಡಿದ ರೋನಿತ್ ಮೋರೆ ಮೂರು ವಿಕೆಟ್ ಬಗೆದರೆ, ಕೆ.ಗೌತಮ್ ಎರಡು ವಿಕೆಟ್ ಪಡೆದರು.
ಬಹುಬೇಗ ವಿಕೆಟ್ ಕೊಟ್ಟ ಪಡಿಕ್ಕಲ್: ಬರೋಡ ನೀಡಿದ ಸಾಧಾರಣ ಗುರಿ ನೀಡಿ ಬೆನ್ನತ್ತಿದ ಕರ್ನಾಟಕ ತಂಡದ ಮೊದಲನೇ ವಿಕೆಟ್ ಬೇಗ ಪತನವಾಯಿತು. ತಂಡದ ಭರವಸೆ ಆಟಗಾರರಾಗಿ ಗುರುತಿಸಿಕೊಂಡಿರುವ ದೇವದತ್ತ ಪಡಿಕ್ಕಲ್ ಒಂದು ಸಿಕ್ಸರ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಭಾರ್ಗವ್ ಭಟ್ ಅವರ ಎಸೆತದಲ್ಲಿ ಕ್ಯಾಚಿತ್ತರು. ಸದ್ಯ ಕ್ರೀಸ್‌ನಲ್ಲಿ ನಾಯಕ ಕರುಣ್ ನಾಯರ್ (0) ಹಾಗೂ ರವಿಕುಮಾರ್ ಸಮರ್ಥ್ (7) ಬ್ಯಾಟಿಂಗ್ ಮುಂದುವರಿಸಿದ್ದಾರೆ. ಕರ್ನಾಟಕಕ್ಕೆ ಗೆಲುವಿನ ನಗೆ ಬೀರಲು 132 ರನ್ ಅಗತ್ಯವಿದೆ.
ಸಂಕ್ಷಿಪ್ತ ಸ್ಕೋರ್
ಬರೋಡ
ಪ್ರಥಮ ಇನಿಂಗ್ಸ್: 85
ದ್ವಿತೀಯ ಇನಿಂಗ್ಸ್: 89.5 ಓವರ್‌ಗಳಿಗೆ 296/10 (ಅಹ್ಮದ್ನೂರ್ 90, ದೀಪಕ್ ಹೂಡ 50, ಅಭಿಮನ್ಯು ರಜಪೂತ್ 52, ಪಾರ್ಥ್ ಕೊಹ್ಲಿ 42; ಪ್ರಸಿದ್ಧ ಕೃಷ್ಣ 45 ಕ್ಕೆ 4, ರೋನಿತ್ ಮೋರೆ 68 ಕ್ಕೆ 3, ಕೆ.ಗೌತಮ್ 99 ಕ್ಕೆ 2)
ಕರ್ನಾಟಕ
ಪ್ರಥಮ ಇನಿಂಗ್ಸ್: 233/10
ದ್ವಿತೀಯ ಇನಿಂಗ್ಸ್: 6.2 ಓವರ್‌ಗಳಿಗೆ 17/1 (ರವಿ ಕುಮಾರ್ ಸಮರ್ಥ್ ಔಟಾಗದೆ 7;ಭಾರ್ಗವ್ ಭಟ್ 6 ಕ್ಕೆ 1)
ಯುಎನ್ಐ ಆರ್‌ಕೆ 1309