Tuesday, Jun 25 2019 | Time 13:32 Hrs(IST)
  • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
  • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
  • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
  • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
  • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
  • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
  • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
  • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
  • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
  • ಮದಲ್ ಲಾಲ್ ಸೈನಿಗೆ ಶ್ರದ್ಧಾಂಜಲಿ: ರಾಜ್ಯಸಭಾ ಕಲಾಪ ಮುಂದೂಡಿಕೆ
  • ಪಾಕಿಸ್ತಾನಕ್ಕೆ ಉಪಯುಕ್ತ ಸಲಹೆ ನೀಡಿದ ವಾಸೀಮ್‌ ಅಕ್ರಂ
  • ಕ್ವಾರ್ಟರ್‌ ಫೈನಲ್‌ ಅರ್ಹತೆ ಪಡೆಯುವಲ್ಲಿ ಜಪಾನ್‌, ಈಕ್ವೆಡಾರ್‌ ವಿಫಲ
  • ಶ್ರೀನಗರದ ಹಿರಿಯ ಪತ್ರಕರ್ತ ಬಂಧನ
  • ಕಂದಕಕ್ಕೆ ಉರುಳಿದ ಬಸ್: ಐವರು ಸಾವು, 40 ಮಂದಿಗೆ ಗಾಯ
  • ಭಾರತದ 1983ರ ಚೊಚ್ಚಲ ವಿಶ್ವಕಪ್‌ಗೆ 36ರ ವರ್ಷಗಳ ಸಂಭ್ರಮ
business economy Share

ಮೋದಿಗೆ ಫಿಕ್ಕಿ, ಸಿಐಐ ಅಭಿನಂದನೆ

ನವದೆಹಲಿ, ಮೇ 23(ಯುಎನ್‌ಐ) ಕೈಗಾರಿಕಾ ಕ್ಷೇತ್ರದ ನಿಯಂತ್ರಕರುಗಳಾದ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆ ಮಂಡಳಿ(ಫಿಕ್ಕಿ) ಮತ್ತು ಭಾರತೀಯ ಕೈಗಾರಿಕೆ ಒಕ್ಕೂಟ(ಸಿಸಿಐ) 2019ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಜಯ ಗಳಿಸಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕೇಂದ್ರದಲ್ಲಿನ ನಿರಂತರ ಮತ್ತು ಸ್ಥಿರ ಸರ್ಕಾರ ಅಭಿವೃದ್ಧಿಗೆ ಸಹಕಾರಿ. ಜಿಎಸ್‌ಟಿ, ಐಬಿಡಿ ಮತ್ತು ರೆರಾದಂತಹ ನೀತಿಗಳ ಅನುಷ್ಠಾನದ ಜೊತೆಗೆ ಸಂಕೀರ್ಣ ಕ್ಷೇತ್ರಗಳಾದ ಭೂಮಿ, ಕಾರ್ಮಿಕ ಕಾನೂನಿನಂತಹ ವಲಯಗಳ ಮೇಲಿನ ನೀತಿಯನ್ನು ಮರುನಿರ್ಮಾಣಗೊಳಿಸಲು ಪೂರಕವಾಗಲಿದೆ ಎಂದು ಫಿಕ್ಕಿ ಅಧ್ಯಕ್ಷ ಸಂದೀಪ್‌ ಸೊಮನಿ ಹೇಳಿದ್ದಾರೆ.
ಹೂಡಿಕೆಯನ್ನು ಮರಳಿ ಮೊದಲಿನ ಸ್ಥಿತಿಗೆ ತರುವ ಅಗತ್ಯವಿದೆ. ಜಿಡಿಪಿ ಬೆಳವಣಿಗೆಯನ್ನು ಈಗಿನ ಶೇ.7ರಿಂದ ವೃದ್ಧಿಸಬೇಕಿದೆ. ಇದು ಹೆಚ್ಚು ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದರು.
ಇನ್ನೊಂದೆಡೆ ಸಿಐಐ ಕೂಡ ಪ್ರಧಾನಿ ಅವರಿಗೆ ಅಭಿನಂದನೆ ಸಲ್ಲಿಸಿದೆ. ಕಳೆದ 5 ವರ್ಷಗಳಲ್ಲಿ ಮೋದಿ ನೇತೃತ್ವದಲ್ಲಿ ಭಾರತದ ಉದ್ಯಮ ಜಾಗತಿಕವಾಗಿ ಉತ್ಕೃಷ್ಟ ಎತ್ತರ ತಲುಪಿತ್ತು ಎಂದು ಸಿಐಐ ಡಿಜಿ ಚಂದ್ರಜಿತ್‌ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.
ಯುಎನ್‌ಐ ಕೆಎಸ್‌ವಿ ವಿಎನ್‌ಎಲ್‌ 1910
More News