Wednesday, Feb 26 2020 | Time 12:30 Hrs(IST)
 • ಗಲಭೆ ಕೋರರನ್ನು ಮಟ್ಟ ಹಾಕಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಖಡಕ್ ಎಚ್ಚರಿಕೆ
 • ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 20ಕ್ಕೆ ಏರಿದೆ
 • ಕಾಶ್ಮೀರದ ಬುದ್ಗಾಮ್‌ನಲ್ಲಿ ಎನ್‌ಐಎ ದಾಳಿ
 • ದೆಹಲಿ ಹಿಂಸಾಚಾರ: ಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
 • ಕಾರ್ಮಿಕನ ಬರ್ಬರ ಹತ್ಯೆ
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
business economy Share

ವಾಹನ ವಲಯದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತದೆ: ನಿರ್ಮಲಾ ಸೀತಾರಾಮನ್‌

ವಾಹನ ವಲಯದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತದೆ: ನಿರ್ಮಲಾ ಸೀತಾರಾಮನ್‌
ವಾಹನ ವಲಯದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತದೆ: ನಿರ್ಮಲಾ ಸೀತಾರಾಮನ್‌

ಚೆನ್ನೈ, ಸೆಪ್ಟೆಂಬರ್ 10 (ಯುಎನ್‌ಐ) ಮಾರಾಟ ಕುಸಿತದಿಂದ ಸಂಕಷ್ಟದಲ್ಲಿರುವ ವಾಹನ ಕ್ಷೇತ್ರದ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರದ 100 ದಿನಗಳ ದಿಟ್ಟ ಹೆಜ್ಜೆ ಮತ್ತು ನಿರ್ಣಾಯಕ ಕ್ರಮಗಳ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದರ ಬಗ್ಗೆ ಸರ್ಕಾರ ಪ್ರಜ್ಞೆ ಹೊಂದಿದ್ದು, ವಾಹನ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸುತ್ತದೆ ಎಂದರು.

ನಾವು ಪ್ರತಿಕ್ರಿಯಿಸಬೇಕಾಗಿದೆ ಎಂದು ನಮಗೆ ತಿಳಿದಿದೆ ಮತ್ತು ಹಣಕಾಸು ಸಚಿವಾಲಯವು ಈಗಾಗಲೇ ವಾಹನ ತಯಾರಕರ ಕೆಲವು ಸಲಹೆಗಳನ್ನು ಪರಿಗಣಿಸಿದೆ ಎಂದು ತಿಳಿಸಿದರು.

ವಾಹನ ವಲಯವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳನ್ನು ಪಟ್ಟಿ ಮಾಡಿದ ಅವರು, ಈ ವಲಯವು ಹಲವಾರು ವರ್ಷಗಳ ಕಾಲ ಮಾರಾಟ ಪ್ರಗತಿ ಸಾಧಿಸಿತ್ತು ಎಂದರು.

ಜಿಎಸ್‌ಟಿಯನ್ನು ಕಡಿಮೆ ಮಾಡುವ ವಾಹನ ವಲಯದ ಬೇಡಿಕೆಯನ್ನು ಜಿಎಸ್‌ಟಿ ಕೌನ್ಸಿಲ್ ಪರಿಶೀಲಿಸುತ್ತಿದ್ದು, ಶೀಘ್ರದಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತದೆ ಎಂದರು.

ಆರ್ಥಿಕತೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬಳಕೆಯನ್ನು ಹೆಚ್ಚಿಸಲು ಮತ್ತು ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿಯನ್ನು ಸುಧಾರಿಸಲು ಸರ್ಕಾರವು ಮೂಲಸೌಕರ್ಯ ವೆಚ್ಚವನ್ನು ಹೆಚ್ಚಿಸಲಿದೆ ಎಂದು ಹೇಳಿದರು.

ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ ಐದಕ್ಕೆ ಇಳಿದಿರುವುದಕ್ಕೆ ಪ್ರತಿಕ್ರಿಯಿಸಿ, ಈ ಹಿಂದೆ ಇಂತಹ ಕುಸಿತಗಳು ಮತ್ತು ಏರಿಕೆಗಳು ಸಂಭವಿಸಿವೆ ಎಂದು ಸಮಜಾಯಿಷಿ ನೀಡಿದರು.

ಜಿಡಿಪಿ ಕೆಲವೊಮ್ಮೆ ಹೆಚ್ಚಾಗುತ್ತದೆ ಮತ್ತು ಕೆಲವೊಮ್ಮೆ ಕಡಿಮೆಯಾಗುತ್ತದೆ ಮತ್ತು ಅದನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.

ಮುಂದಿನ ತ್ರೈಮಾಸಿಕದಲ್ಲಿ ಜಿಡಿಪಿ ಹೇಗೆ ಏರಿಕೆಯಾಗಬಹುದು ಎಂಬುದರ ಬಗ್ಗೆ ನಮಗೆ ಸಂಪೂರ್ಣ ಗಮನವಿದೆ. ಜಿಡಿಪಿಯಲ್ಲಿನ ಕುಸಿತವು ಬೆಳವಣಿಗೆಯ ಭಾಗವಾಗಿದೆ. ನಾವು ಸಾಧ್ಯವಾದಷ್ಟು ಮೂಲಸೌಕರ್ಯ ವೆಚ್ಚವನ್ನು ಹೆಚ್ಚಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದರು.

ಸರ್ಕಾರವು ರಚಿಸಿದ ಸಮಿತಿಯು ಹಣ ಮತ್ತು ತ್ವರಿತಗೊಳಿಸಬೇಕಾದ ಮೂಲಸೌಕರ್ಯ ಯೋಜನೆಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದ ನಿರ್ಮಲಾ ಸೀತಾರಾಮನ್‌, ಸಮಿತಿ ತನ್ನ ವರದಿಯನ್ನು ಸಲ್ಲಿಸಿದ ನಂತರ ಸರ್ಕಾರವು ಯೋಜನೆಗಳಿಗೆ ಧನಸಹಾಯವನ್ನು ಪ್ರಾರಂಭಿಸುತ್ತದೆ ಎಂದರು.

ಮೂಲಸೌಕರ್ಯ ಯೋಜನೆಗಳಿಗೆ 100 ಲಕ್ಷ ಕೋಟಿ ರೂ.ಗಳ ವೆಚ್ಚವನ್ನು ಸರ್ಕಾರ ಘೋಷಿಸಿದೆ. ಜಿಎಸ್ಟಿ ಆಡಳಿತದಲ್ಲಿ ಸ್ವಯಂಚಾಲಿತ ಇನ್ಪುಟ್ ಕ್ರೆಡಿಟ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದರು.

ಬ್ಯಾಂಕುಗಳನ್ನು ವಿಲೀನಗೊಳಿಸುವ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿ, ಉಳಿತಾಯದ ರೂಪದಲ್ಲಿ ಹಣವನ್ನು ಪಡೆಯುವ ಬ್ಯಾಂಕುಗಳಿವೆ. ಕೆಲ ಬ್ಯಾಂಕುಗಳು ಸಾಲಕ್ಕೆ ಹೆಚ್ಚಿನ ಬೇಡಿಕೆಯನ್ನು ಹೊಂದಿವೆ. ಆದರೆ ಅವುಗಳ ಉಳಿತಾಯ ಕಡಿಮೆ ಇತ್ತು. ಅದನ್ನು ಸರಿದೂಗಿಸಲು ವಿಲೀನ ಸಹಕಾರಿ ಎಂದರು.

ಯುಎನ್‌ಐ ಕೆಎಸ್‌ವಿ ಎಸ್‌ಎಚ್‌ 1745

More News

ಕೌಶಲ ತರಬೇತಿ ಜೊತೆಗೆ ಇಂಜಿನಿಯರ್ ಗಳಿಗೆ ಕೆಲಸ

25 Feb 2020 | 11:55 AM

 Sharesee more..

ಹೆಚ್ಚಿದ ಚಿನ್ನದ ದರ

23 Feb 2020 | 10:13 PM

 Sharesee more..
ಪೆಟ್ರೋಲ್ ದರ ಏರಿಕೆ

ಪೆಟ್ರೋಲ್ ದರ ಏರಿಕೆ

23 Feb 2020 | 8:29 PM

ನವದೆಹಲಿ, ಫೆ 23 (ಯುಎನ್ಐ) ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲ ದರ 3,860 ರೂ ಇದ್ದು ದೇಶದಲ್ಲಿ ಹಲವು ದಿನಗಳಿಂದ ಇಳಿಕೆ ಕಂಡಿದ್ದ ಪೆಟ್ರೋಲ್‌ ದರ ಭಾನುವಾರ ಕೊಂಚ ಏರಿಕೆಯಾಗಿದೆ.

 Sharesee more..