Monday, Sep 16 2019 | Time 19:36 Hrs(IST)
 • ಮತದಾರ ಪಟ್ಟಿ ಪರಿಷ್ಕರಣಾ ಆಂದೋಲನ; ಸೇರ್ಪಡೆ, ತಿದ್ದುಪಡಿಗೆ ಅವಕಾಶ- ಅನಿಲ್ ಕುಮಾರ್
 • ಭಾಷೆ, ಸಂಸ್ಕೃತಿ ಹೆಸರಲ್ಲಿ ಸಂಘರ್ಷ ಸೃಷ್ಟಿಸುವುದು ಬಿಜೆಪಿ ಕೆಲಸ : ದಿನೇಶ್ ಗುಂಡೂರಾವ್
 • ಕಾಂಗ್ರೆಸ್ ಪಕ್ಷ ಮುಳಗುತ್ತಿರುವ ಹಡಗು: ಎಂ ಪಿ ರೇಣುಕಾಚಾರ್ಯ ಲೇವಡಿ
 • ಆಪ್‍ನಿಂದ ವಾರ್ಡ್ ನಿರ್ವಹಣಾ ಕೈಪಿಡಿ ಬಿಡುಗಡೆ
 • ಬಿಬಿಎಂಪಿ ಆಯುಕ್ತರ ಅಧಿಕಾರ ಮೊಟಕು; ವಿಶೇಷ, ಹೆಚ್ಚುವರಿ ಆಯುಕ್ತರಿಗೆ ಹೆಚ್ಚಿನ ಹೊಣೆ- ನಗರಾಭಿವೃದ್ಧಿ ಇಲಾಖೆ ಆದೇಶ
 • ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು
 • ಸರ್ಕಾರದ ಕಿರುಕುಳದಿಂದ ಕೊಡೆಲಾ ಆತ್ಮಹತ್ಯೆ: ಚಂದ್ರಬಾಬು ನಾಯ್ಡು ಆರೋಪ
 • ಕಳುವಾದ ಮೊಬೈಲ್ ಫೊನ್ ಪತ್ತೆಗೆ ಹೊಸ ತಂತ್ರ !
 • ಮೋಟಾರು ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ 19ರಂದು ಬೆಂಗಳೂರು ವಕೀಲರ ಸಂಘದ ಪ್ರತಿಭಟನೆ
 • ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಬೆಂಗಳೂರು ನಗರ ಉಳಿಸಿಕೊಂಡ ಮುಖ್ಯಮಂತ್ರಿ
 • ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ: ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ
 • ಐಸಿಸಿ ಟೆಸ್ಟ್ ಶ್ರೇಯಾಂಕ: ಸ್ಮಿತ್‌ಗೆ ಅಗ್ರಸ್ಥಾನ, ದ್ವಿತೀಯ ಸ್ಥಾನದಲ್ಲಿ ಕೊಹ್ಲಿ
 • ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಬಂಧನ: ಕೇಂದ್ರ ಸರ್ಕಾರ
 • ರೈಲು ನಿಲ್ದಾಣಗಳ ಮೇಲಿನ ಯಾವುದೇ ದಾಳಿ ತಡೆಯಲು ಹೆಚ್ಚಿನ ಭದ್ರತಾ ವ್ಯವಸ್ಥೆ
 • “ಶಕುಂತಲಾ ದೇವಿ” ಚಿತ್ರೀಕರಣ ಆರಂಭ
Entertainment Share

ಸಲ್ಲೂ ಜೊತೆ ವರೀನಾ ಹೆಜ್ಜೆ !

ಮುಂಬೈ, ಜೂನ್ 11 (ಯುಎನ್ಐ) ಐಟಂ ಸಾಂಗ್ ಗಳಿಂದ ಕೆಲ ಸಮಯದಿಂದ ದೂರು ಉಳಿದಿದ್ದ ನಟ ಸಲ್ಮಾನ್ ಖಾನ್ ಇದೀಗ ತಮ್ಮ ಮುಂಬರುವ 'ದಬಾಂಗ್-3' ಚಿತ್ರದಲ್ಲಿ ಉದಯೋನ್ಮುಖ ತಾರೆ ವರೀನಾ ಹುಸೇನ್ ಅವರೊಂದಿಗೆ ಐಟಂ ಸಾಂಗ್ ಗೆ ಹೆಜ್ಜೆ ಹಾಕಲು ತಯಾರಾಗಿದ್ದಾರೆ.

'ದಬಾಂಗ್ 3' ಚಿತ್ರದ 'ಮುನ್ನಾ ಬದ್ನಾಮ್ ಹುವಾ' ಐಟಂ ಸಾಂಗ್ ಗೆ ಸಲ್ಮಾನ್ ಸ್ಟೆಪ್ ಹಾಕಲಿದ್ದಾರೆ. ಈ ಹಾಡಿಗೆ ವೈಭವಿ ಮರ್ಚೆಂಟ್ ನೃತ್ಯ ಸಂಯೋಜನೆ ಮಾಡಲಿದ್ದಾರೆ. ಮೊದಲು ಈ ಹಾಡಿನಲ್ಲಿ ಸಲ್ಮಾನ್ ಖಾನ್ ಅವರೊಂದಿಗೆ ನಟಿ ಮೌನಿ ರಾಯ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೀಗ ಅವರ ಸ್ಥಾನಕ್ಕೆ 'ಲವ್ ಯಾತ್ರಿ' ಚಿತ್ರದ ಮೂಲಕ ಬಿಟೌನ್ ಪಾದಾರ್ಪಣೆ ಮಾಡಿರುವ ವರೀನಾ ಹುಸೇನ್ ಆಯ್ಕೆಯಾಗಿದ್ದಾರೆ.
ಒಂದು ತಿಂಗಳ ಒಳಗಾಗಿ ಮುಂಬೈನಲ್ಲಿ ಹಾಡಿನ ಚಿತ್ರೀಕರಣ ಪೂರ್ಣಗೊಳಿಸಲು ಚಿತ್ರತಂಡ ನಿರ್ಧರಿಸಿದೆಯಂತೆ. ಈ ಚಿತ್ರದಲ್ಲಿ ಸಲ್ಮಾನ್ ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮೊದಲಿನಂತೆ ಇಲ್ಲಿಯೂ ಸಲ್ಮಾನ್ ಚುಲ್ ಬುಲ್ ಪಾಂಡೆ ಆಗಿ ಕಾಣಿಸಿಕೊಳ್ಳಲಿದ್ದು, ಪೊಲೀಸ್ ಉದ್ಯೋಗ ಗಿಟ್ಟಿಸಿಕೊಳ್ಳುವುದಕ್ಕಿಂತ ಮುಂಚೆ ಪಾಂಡೆ ಹೇಗಿದ್ದ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗುವುದಂತೆ. ಮೊದಲ ಭಾಗದಂತೆ ಇಲ್ಲಿಯೂ ನಟಿ ಸೋನಾಕ್ಷಿ ಸಿನ್ಹಾ, ಸಲ್ಮಾನ್ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಮೊದಲ ಹಂತದ ಚಿತ್ರೀಕರಣವನ್ನು ಇಂದೋರ್ ನಲ್ಲಿ ಪೂರ್ಣಗೊಳಿಸಲಾಗಿದೆ.
ಡಿಸೆಂಬರ್ 20ಕ್ಕೆ 'ದಬಾಂಗ್-3' ಚಿತ್ರ ಬಿಡುಗಡೆಗೊಳ್ಳಲಿದೆ.
ಯುಎನ್ಐ ಪಿಕೆ ಎಸ್ಎಚ್ 1706