Tuesday, Sep 29 2020 | Time 13:25 Hrs(IST)
  • ಬಾಬ್ರಿ ಮಸೀದಿ ದ್ವಂಸ ಪ್ರಕರಣ: ನಾಳೆ ಅಂತಿಮ ತೀರ್ಪು, ಭದ್ರತೆ ಬಿಗಿ ಗೊಳಿಸಲು ರಾಜ್ಯಗಳಿಗೆ ಕೇಂದ್ರ ಆದೇಶ
  • ಮೂವರು ದರೋಡೆಕೋರರು ಬಂಧನ
  • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
  • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
  • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
  • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
  • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
  • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
  • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
  • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
  • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
  • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
  • ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್
  • ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಉಮಾ ಭಾರತಿ
  • ನಮಾಮಿ ಗಂಗೆ : 6 ಬೃಹತ್ ಯೋಜನೆಗಳಿಗೆ ಮೋದಿ ಚಾಲನೆ
business economy Share

ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 117 ಅಂಕ ಏರಿಕೆ

ಮುಂಬೈ, ಸೆ 16 (ಯುಎನ್‌ಐ) ಇಂಧನ, ಗ್ರಾಹಕ ವಿವೇಚನೆ ಸರಕು ಮತ್ತು ಸೇವೆಗಳು, ಎಫ್‍ಎಂಸಿಜಿ, ಮೆಟೀರಿಯಲ್ಸ್ ಷೇರುಗಳ ಹೆಚ್ಚು ಖರೀದಿಯಿಂದ ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್‌ಇ)ದ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ ಬೆಳಗಿನ ವಹಿವಾಟಿನಲ್ಲಿ 117 ಅಂಕ ಏರಿಕೆ ದಾಖಲಿಸಿ 39,161.01 ಕ್ಕೆ ತಲುಪಿದೆ.
ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಸೂಚ್ಯಂಕ ನಿಫ್ಟಿ ಸಹ 17 ಅಂಕ ಏರಿಕೆ ಕಂಡು 11,538.45 ಕ್ಕೆ ತಲುಪಿದೆ.
ಸೆನ್ಸೆಕ್ಸ್ ಮಧ್ಯಂತರ ವಹಿವಾಟಿನಲ್ಲಿ ಗರಿಷ್ಠ ಮತ್ತು ಕನಿಷ್ಠ ಕ್ರಮವಾಗಿ 39,161.01 ಮತ್ತು 39,037.96ರಲ್ಲಿತ್ತು.
ನಿಫ್ಟಿ ಮಧ್ಯಂತರ ವಹಿವಾಟಿನಲ್ಲಿ ಗರಿಷ್ಠ ಮತ್ತು ಕನಿಷ್ಠ ಕ್ರಮವಾಗಿ 11,546.01 ಮತ್ತು 11,516.75ರಲ್ಲಿತ್ತು.
ಪ್ರಮುಖ 30 ಕಂಪೆನಿಗಳ ಷೇರುಗಳ ಪೈಕಿ 15 ಏರಿಕೆ ಕಂಡರೆ, 15 ಕಂಪೆನಿಗಳ ಷೇರುಗಳು ಕುಸಿದಿವೆ.
ಲಾಭ ಕಂಡ ಪ್ರಮುಖ ಷೇರುಗಳ ಪೈಕಿ ಎಂ ಅಂಡ್ ಎಂ, ಬಜಾಜ್ ಆಟೋ, ಮಾರುತಿ ಸುಜುಕಿ, ಎಲ್ ಆಂಡ್ ಟಿ ಮತ್ತು ನೆಸ್ಲೆ ಸೇರಿವೆ.
ನಷ್ಟ ಕಂಡ ಷೇರುಗಳಲ್ಲಿ ಎಚ್‌ಸಿಎಲ್ ಟೆಕ್ನಾಲಜೀಸ್,, ಆಕ್ಸಿಸ್ ಬ್ಯಾಂಕ್ ಸೇರಿವೆ.
ಯುಎನ್‍ಐ ಎಸ್ಎಲ್ಎಸ್ 1010