Connect with us


      
ಕರ್ನಾಟಕ

ಕೋವಿಡ್ ಮೂರನೇ ಅಲೆ ಬಗ್ಗೆ ಎಚ್ಚರಿಕೆ ವಹಿಸಲು ಅಬಕಾರಿ ಸಚಿವರ ಕರೆ

UNI Kannada

Published

on

ಬೆಂಗಳೂರು: ಜನೆವರಿ.02 (ಯು.ಎನ್.ಐ) ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆರಂಭವಾಗಿದ್ದು, ಎಲ್ಲರೂ ಮುಂಜಾಗ್ರತೆ ವಹಿಸಬೇಕು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದ್ದಾರೆ.

ಮಹಾಲಕ್ಷೀ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಂಕರಮಠ ವಾರ್ಡಿನ ಕುರುಬರಹಳ್ಳಿ ಮುಖ್ಯರಸ್ತೆಯ ಶ್ರೀಬಾಲಸುಬ್ರಹ್ಮಣ್ಯ ದೇವಾಲಯದ ಬಳಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟ, ಸುವರ್ಣ ಕರ್ನಾಟಕ ಕಟ್ಟಡ ನಿರ್ಮಾಣ ಅಸಂಘಟಿತ ಕಾರ್ಮಿಕರ ಟ್ರೇಡ್ ಯೂನಿಯನ್, ಕರ್ನಾಟಕ ಕಟ್ಟಡ ಮತ್ತು ಇತರೆ  ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಕೆ, ಶ್ರೀ ಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ನೊಂದಾಯಿತ ಕಟ್ಟಡ ಮತ್ತು ಇತರ  ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಭಿತರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವ್ಯಾಕ್ಸಿನ್ ಪಡೆಯದೇ ಇರುವ ಹಿರಿಯರು ಮತ್ತು ವಯಸ್ಕರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ನಾಳೆಯಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದ್ದು, ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಕೊಡಿಸಬೇಕು.ಕಾರ್ಮಿಕರ ಕಾರ್ಡ್ ಮಾಡಿಸಿಕೊಂಡರೆ ಕಾರ್ಮಿಕ ಇಲಾಖೆಯಿಂದ ಕುಟುಂಬದ 20 ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಮತ್ತು ಮಕ್ಕಳ ವಿಧ್ಯಾಭ್ಯಾಸಕ್ಕೆ  ಆರ್ಥಿಕ ನೆರವು ದೊರೆಯಲಿದೆ. ಆದ್ದರಿಂದ ಪ್ರತಿಯೊಬ್ಬರೂ ಕಾರ್ಮಿಕರ ಕಾರ್ಡ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 5 ಮಂದಿ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳನ್ನು ಸಚಿವರು ವಿತರಿಸಿದರು.ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟಿನ ಅಧ್ಯಕ್ಷ ಜಯರಾಮಯ್ಯ, ನಿಸರ್ಗ ಜಗದೀಶ್, ಬಿಜೆಪಿ ವಾರ್ಡ್ ಅಧ್ಯಕ್ಷ ಮಂಜುನಾಥ್ ಹಾಗೂ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.

Share