Published
6 months agoon
ಬೆಂಗಳೂರು: ಜನೆವರಿ 05 ( ಯು.ಎನ್.ಐ.) ವಸತಿ ಮತ್ತು ಮೂಲಸೌಲಭ್ಯ ಸಚಿವ ವಿ.ಸೋಮಣ್ಣ ಅವರು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಸತಿ ಇಲಾಖೆ ವ್ಯಾಪ್ತಿಯ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ನೀಡಲಾದ ಹೊಸ ಮನೆಗಳ ಗುರುಗೆ ಎದುರಾಗಿ ಫಲಾನುಭವಿಗಳ ಆಯ್ಕೆ ಮತ್ತು ರಾಜ್ಯದ ಗ್ರಾಮೀಣ ಭಾಗದಲ್ಲಿ ವಸತಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಡಿಯೋ ಸಂವಾದ ನಡೆಸಿದರು.
ಮುಂದುವರೆದು, ಪ್ರಗತಿಯಲ್ಲಿರುವ ಮನೆಗಳನ್ನು ಅದರಲ್ಲೂ ಗೋಡೆ ಮತ್ತು ಛಾವಣಿ ಹಂತದಲ್ಲಿರುವ ಮನೆಗಳನ್ನು ಬರುವ ಮಾರ್ಚ್ 22ನೇ ತಾರೀಖಿನ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಈಗಾಗಲೇ ನೀಡಲಾಗಿರುವ ಸರ್ಕಾರಿ ಆದೇಶದಂತೆ ಹಾಗೂ ನಿಯಮಾವಳಿಗಳಂತೆ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಗ್ರಾಮಸಭೆ ಮುಖಾಂತರ ಆಯ್ಕೆ ಮಾಡಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಮುಚಿತ ಮಾರ್ಗದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಸಲ್ಲಿಸುವುದು ಹಾಗೂ ಇನ್ನು ಹತ್ತು ತಿಂಗಳ ಒಳಗಾಗಿ ಮನೆಗಳ ನಿರ್ಮಾಣ ಮನೆಗಳ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸೂಚನೆ ಮಾನ್ಯ ಸಚಿವರು ನೀಡಿದರು.
ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕರು, ವಸತಿ ಇಲಾಖೆಯ ಉಪ ಕಾರ್ಯದರ್ಶಿಗಳು ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
“ಡಿಕೆಶಿ ಮಾತಾಡಲು ಅವಕಾಶ ಕೊಟ್ಟಿಲ್ಲ” – ಶಿಸ್ತು ಸಮಿತಿ ನೋಟಿಸ್ಗೆ ಲಕ್ಷ್ಮೀನಾರಾಯಣ ಟೀಕಾಪ್ರಹಾರ
ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ
“ಕೂಡಲ ಸಂಗಮವು ಜನಾಕರ್ಷಣೆಯ ತಾಣವಾಗಬೇಕು” – ಸಿಎಂ ಬೊಮ್ಮಾಯಿ
45.56 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅರಮನೆ, ಕೋಟೆ ಸಂರಕ್ಷಣೆ, ಜೀರ್ಣೋದ್ಧಾರ
ವಿದ್ಯುತ್ ಬಿಲ್ ಪಾವತಿಗೆ 6 ತಿಂಗಳ ಕಾಲಾವಕಾಶ ಇಲ್ಲ : ಬೆಸ್ಕಾಂ ಸ್ಪಷ್ಟನೆ
‘ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ’