Connect with us


      
ಕರ್ನಾಟಕ

ರಾಜ್ಯ ಒಕ್ಕಲಿಗರ ಸಂಘ; ನೂತನ ಅಧ್ಯಕ್ಷ ಬಾಲಕೃಷ್ಣ

Kumara Raitha

Published

on

ಬೆಂಗಳೂರು: ಜನೆವರಿ 05 (ಯು.ಎನ್.ಐ.) ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಆಯ್ಕೆಯಾಗಿದ್ದಾರೆ.
ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿದಂತೆ ನಾನಾ ಹುದ್ದೆಗಳಿಗೆ ಬುಧವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನ ಪಡೆಯಲು 18 ಮತಗಳು ಬೇಕಿದ್ದವು. ಒಟ್ಟು 35 ನಿರ್ದೇಶಕರ ಪೈಕಿ 20 ನಿರ್ದೇಶಕರು ಬಾಲಕೃಷ್ಣ ಪರ ಮತ ಚಲಾಯಿಸಿದರು. ಬಾಲಕೃಷ್ಣ ಅವರು ಬಹುಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಂಘದ ಮಾಜಿ ಅಧ್ಯಕ್ಷ ಬಿ. ಕೆಂಚಪ್ಪಗೌಡ 14 ಮತಗಳನ್ನು ಪಡೆದು ಪರಾಭವಗೊಂಡರು.
ಉಪಾಧ್ಯಕ್ಷರಾಗಿ ಡಾ. ಕೆ.ವಿ. ರೇಣುಕಾಪ್ರಸಾದ್ (ಸುಳ್ಯ), ಡಿ. ಹನುಮಂತಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಕೋನಪ್ಪರೆಡ್ಡಿ (ಕೋಲಾರ), ಸಹಾಯಕ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರಮತ್ತು ಖಜಾಂಚಿಯಾಗಿ ಆರ್. ಪ್ರಕಾಶ್ ಆಯ್ಕೆಯಾಗಿದ್ದಾರೆ.
ಕಳೆದ ಡಿ.12ರಂದು ಸಂಘದ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಸಂಘದ 35 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗಿತ್ತು.
ಅಧ್ಯಕ್ಷ ಸ್ಥಾನಕ್ಕಾಗಿ ಸೀಕ್ರೇಟ್ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಲಾಗಿತ್ತು. ಅಧ್ಯಕ್ಷಗಾದಿಗಾಗಿ ಸಿ.ಎನ್.ಬಾಲಕೃಷ್ಣ ಹಾಗೂ ಸಂಘದ ಹಿಂದಿನ ಅಧ್ಯಕ್ಷ ಬಿ. ಕೆಂಚಪ್ಪಗೌಡ ನಡುವೆ ತೀವ್ರ ಪೈಪೆÇೀಟಿ ಇತ್ತು. ಆದರೆ, ಅಂತಿಮವಾಗಿ ಸಿ.ಎನ್. ಬಾಲಕೃಷ್ಣ ಗೆಲುವು ಸಾಧಿಸಿದರು. ಆಯ್ಕೆಯಾಗುತ್ತಿದ್ದಂತೆಯೇ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಒಕ್ಕಲಿಗರ ಸಂಘದ ಆವರಣದಲ್ಲಿ ಸಂಭ್ರಮಾಚರಣೆ ಮಾಡಿದರು.
ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣಾಧಿಕಾರಿ ಎಸ್. ಜಿಯಾ ಉಲ್ಲಾ ಪದಾಧಿಕಾರಿಗಳ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು. ಹೀಗಾಗಿ, ಒಕ್ಕಲಿಗರ ಸಂಘಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲದಿಂದಿದ್ದ ಆಡಳಿತಾಧಿಕಾರಿಗಳ ಅಧಿಕಾರಾವಧಿ ಕೊನೆಗೊಂಡಂತಾಯಿತು.

Share