Published
5 months agoon
By
UNI Kannada
ಬೆಳಗಾವಿ, ಡಿ ೧೨(ಯುಎನ್ ಐ) ರಾಜ್ಯ ಬಿಜೆಪಿ ಸರ್ಕಾರ ಶೇ. ೪೦ರಷ್ಟು ಕಮಿಷನ್ ಸರ್ಕಾರ ಎಂಬ ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಆರೋಪ ತಳ್ಳಿಹಾಕಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್.. ಶೇ. ೪೦ ಪರ್ಸೆಂಟೇಜ್ ಎಂದು ಯಾರಾದರೂ ಪ್ರೂವ್ ಮಾಡಿದ್ದಾರೆಯೇ ಎಂದು ಪ್ರಶ್ನಿಸಿ ಸುಮ್ಮನೆ ಹೇಳೊದಕ್ಕೆ ಎಲ್ಲವನ್ನು ಹೇಳುತ್ತಾರೆ. ಅವರ ಕಾಲದಲ್ಲಿ ಎಷ್ಟಿತ್ತು, ಇವರ ಕಾಲದಲ್ಲಿ ಇಷ್ಟಿತ್ತು ಎಂದು ಸುಮ್ಮನೆ ಚರ್ಚೆ ಮಾಡುತ್ತಾರೆ. ಅಧಿವೇಶನದಲ್ಲಿ ವಿಪಕ್ಷಗಳ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾವು ಸಿದ್ದವಾಗಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, ಸಾರ್ವಜನಿಕ ವಿಷಯಗಳನ್ನು ಚರ್ಚೆ ಮಾಡುವ ಉದ್ದೇಶದಿಂದಲೇ ಅಧಿವೇಶನ ಕರೆಯಲಾಗುತ್ತದೆ. ಇತ್ತಿಚೆಗೆ ಅಧಿವೇಶನದಲ್ಲಿ ಸಾರ್ವಜನಿಕ ವಿಷಯಗಳು ಚರ್ಚೆ ಆಗುವುದಿಲ್ಲ. ಯಾವುದೋ ವಿಷಯ ಚರ್ಚೆ ಮಾಡಿ, ಪ್ರತಿಭಟನೆ ಮಾಡುವಂತಹುದನ್ನು ನೋಡುತ್ತಿದ್ದೇವೆ. ಬೆಳಗಾವಿ ಅಧಿವೇಶನದಲಿ ಈ ಭಾಗದ ರೈತರು ಸೇರಿದಂತೆ ಬೇರೆ ಬೇರೆ ಸಮಸ್ಯೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ಮಾಡಿ ಸರ್ಕಾರದ ಗಮನಕ್ಕೆ ತರಲಿ. ಸರ್ಕಾರ ಎಲ್ಲದಕ್ಕೂ ಸಿದ್ಧವಿದೆ ಎಂದು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.
ವಿಧಾನಪರಿಷತ್ ಚುನಾವಣೆಗೆ ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ
ಬಬುಲ್ ಸುಪ್ರಿಯೋ ಬಳಿಕ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್! ಟಿಎಂಸಿ ಸೇರಿದ ಬಿಜೆಪಿ ಸಂಸದ
ಕೇಂದ್ರವು ರೈತರನ್ನು ಕ್ರೀಡಾಂಗಣದಲ್ಲಿ ಜೈಲಿನಲ್ಲಿಡಲು ಬಯಸಿತ್ತು: ಸಿಎಂ ಕೇಜ್ರಿವಾಲ್
ರೈತರು ಸರ್ಕಾರಗಳನ್ನು ಉರುಳಿಸಬಹುದು: ಸಿಎಂ ಕೆಸಿಆರ್
ದುರಹಂಕಾರವಲ್ಲ… ಅದು ವಿಶ್ವಾಸ: ರಾಹುಲ್ ಗಾಂಧಿಗೆ ಸಚಿವ ಜೈಶಂಕರ್ ತಿರುಗೇಟು
ಸಂಪರ್ಕ ಕ್ರಾಂತಿಗೆ ನಾಂದಿ ಹಾಡಿದ ರಾಜೀವ್ ಗಾಂಧಿ