Connect with us


      
ದೇಶ

ಅಪಘಾತ: ಸ್ಥಳದಲ್ಲೇ 10 ಮಂದಿಯ ದುರ್ಮರಣ

Vanitha Jain

Published

on

ಲಕ್ನೋ: ಜೂನ್ 23 (ಯು.ಎನ್.ಐ.) ಉತ್ತರ ಪ್ರದೇಶದ ಪಿಲಿಭಿತ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಭಕ್ತಾದಿಗಳನ್ನು ಸಾಗಿಸುತ್ತಿದ್ದ ಟ್ರಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಭಕ್ತರು ಹರಿದ್ವಾರದಿಂದ ಯುಪಿಯ ಲಖಿಂಪುರಕ್ಕೆ ಹಿಂತಿರುಗುತ್ತಿದ್ದಾಗ ಗಜರೌಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಹರಿದ್ವಾರದಿಂದ ಹಿಂತಿರುಗುತ್ತಿದ್ದ ಡಿಸಿಎಂ ವಾಹನ ಇಂದು ಬೆಳಗಿನ ಜಾವ 4:30ರ ಸುಮಾರಿಗೆ ಅಪಘಾತಕ್ಕೀಡಾಗಿ 10 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. 17 ಜನರಲ್ಲಿ, 10 ಜನರು ಸ್ಥಳದಲ್ಲೇ ಸಾವನ್ನಪ್ಪಿದರು, 5 ಜನರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಿಲ್ಭಿತ್ ಡಿಎಂ ಪುಲ್ಕಿತ್ ಖರೆ ಟ್ವೀಟ್ ಮಾಡಿದ್ದಾರೆ.

Share