Connect with us


      




ಕರ್ನಾಟಕ

ಅಂಬಿ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ರೂಪಾಯಿ ಬಿಡುಗಡೆ

Iranna Anchatageri

Published

on

ಬೆಂಗಳೂರು : ಜನೆವರಿ 06 (ಯು.ಎನ್.ಐ.) ಸ್ಯಾಂಡಲ್ ವುಡ್ ನ ಜಲಿಲಾ ಅಂತಾನೇ ಕರೆಯಿಸಿಕೊಳ್ಳುವ ನಟ ಅಂಬರೀಷ್ ಅವರ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಕ್ಯಾಬಿನೆಟ್ ಮೀಟಿಂಗ್ ಬಳಿಕ ಈ ಮಾಹಿತಿ ತಿಳಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಂಬಿ ಸ್ಮಾರಕ ನಿರ್ಮಾಣ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ 12 ಕೋಟಿ ರೂಪಾಯಿ ಅನುದಾನ ಕೊಡಲಾಗುವುದು. ಡಾ. ರಾಜ್ ಕುಮಾರ್ ಸ್ಮಾರಕದ ಬಳಿ ಇರುವ ಅಂಬರೀಷ್ ಸಮಾಧಿ ಜಾಗದಲ್ಲಿ ಈ ಸ್ಮಾರಕ ನಿರ್ಮಾಣವಾಗಲಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

Share