Connect with us


      
ಕರ್ನಾಟಕ

ರಾಜ್ಯದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ 156 ಕೋವಿಡ್ ಪ್ರಕರಣಗಳು ದೃಢ

Vanitha Jain

Published

on

ಬೆಂಗಳೂರು: ಮೇ 14 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಸೇರಿದಂತೆ ಹಲವೆಡೆ ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 156 ಕೋವಿಡ್ ಪ್ರಕರಣಗಳು ದೃಢಪಟ್ಟಿರುವ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು 156 ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,884ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ‘ಕೂ’ ಮಾಡಿದ್ದಾರೆ. ಇನ್ನೂ ರಾಜ್ಯದಲ್ಲಿ ಕೋವಿಡ್ ನಿಂದ ಯಾವುದೇ ಮರಣ ಸಂಭವಿಸಿಲ್ಲ. 179 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, 19,500 ಕೋವಿಡ್ ಟೆಸ್ಟ್ ಮಾಡಲಾಗಿದೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 0.80ರಷ್ಟಿದ್ದು, ಬೆಂಗಳೂರು ನಗರದಲ್ಲಿ 143 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,793ಕ್ಕೆ ಏರಿಕೆಯಾಗಿದೆ.

Share