Connect with us


      




ದೇಶ

ಕಾಶ್ಮೀರಿ ಪಂಡಿತರ ಮೇಲೆ ಮತ್ತೆ ಭಯೋತ್ಪಾದಕ ದಾಳಿ; ಒಬ್ಬರ ಸಾವು

Lakshmi Vijaya

Published

on

ಶ್ರೀನಗರ: ಆಗಸ್ಟ್ 16 (ಯು.ಎನ್.ಐ.) ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತರೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಸಹೋದರ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುದ್ಗಾಮ್‌ನ ಸರ್ಕಾರಿ ಕಚೇರಿಯಲ್ಲಿ ಕಾಶ್ಮೀರಿ ಪಂಡಿತನೊಬ್ಬನ ಹತ್ಯೆಯು ವ್ಯಾಪಕ ಪ್ರತಿಭಟನೆಯನ್ನು ಹುಟ್ಟುಹಾಕಿದ ಸುಮಾರು ಮೂರು ತಿಂಗಳ ನಂತರ ಈ ಘಟನೆ ನಡೆದಿದೆ. ಅಂದಿನಿಂದ, 5000 ಕ್ಕೂ ಹೆಚ್ಚು ಕಾಶ್ಮೀರಿ ಪಂಡಿತ್ ಉದ್ಯೋಗಿಗಳು ಉದ್ದೇಶಿತ ದಾಳಿಗೆ ಹೆದರಿ ತಮ್ಮ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಕಣಿವೆಯಲ್ಲಿ ಪರಿಸ್ಥಿತಿ ಸುಧಾರಿಸುವವರೆಗೆ ಜಮ್ಮುವಿಗೆ ಸ್ಥಳಾಂತರಗೊಳ್ಳುವಂತೆ ಅವರು ಒತ್ತಾಯಿಸುತ್ತಿದ್ದಾರೆ.

ಶೋಪಿಯಾನ್‌ನ ಚೋಟಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ನಾಗರಿಕರ ಮೇಲೆ ಗುಂಡು ಹಾರಿಸಿದ್ದಾರೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಒಬ್ಬರು ಗಾಯಗೊಂಡಿದ್ದಾರೆ. ಇಬ್ಬರೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ದಾಳಿಯ ಪ್ರದೇಶವನ್ನು ಸುತ್ತುವರಿಯಲಾಗಿದೆ. ಹೆಚ್ಚಿನ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅವರ ಸಹೋದರ ಪಿಂಟು ಕುಮಾರ್ ಗಾಯಗೊಂಡಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಿಂದ ಕಾಶ್ಮೀರವು ಉದ್ದೇಶಿತ ಹತ್ಯೆಗಳ ಸರಣಿಗೆ ಸಾಕ್ಷಿಯಾಗಿದೆ. ಬಲಿಯಾದವರಲ್ಲಿ ಹಲವರು ವಲಸೆ ಕಾರ್ಮಿಕರು ಮತ್ತು  ಕಾಶ್ಮೀರಿ ಪಂಡಿತರು.

ಅಕ್ಟೋಬರ್‌ನಲ್ಲಿ, ಐದು ದಿನಗಳಲ್ಲಿ ಏಳು ನಾಗರಿಕರು ಕೊಲ್ಲಲ್ಪಟ್ಟರು. ಅವರಲ್ಲಿ ಒಬ್ಬರು ಕಾಶ್ಮೀರಿ ಪಂಡಿತ, ಓರ್ವರು ಸಿಖ್ ಮತ್ತು ಇಬ್ಬರು ವಲಸಿಗ ಹಿಂದೂಗಳು. ಈ ಘಟನೆ ಬಳಿಕ ಅನೇಕ ಕಾಶ್ಮೀರಿ ಪಂಡಿತ್ ಕುಟುಂಬಗಳು ಕಣಿವೆಯಲ್ಲಿ ತಮ್ಮ ಮನೆಗಳನ್ನು ತೊರೆದರು.

Share