Connect with us


      
ದೇಶ

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಹತ್ಯೆ

Vanitha Jain

Published

on

ಶ್ರೀನಗರ: ಮಾರ್ಚ್ 30 (ಯು.ಎನ್.ಐ.) ಶ್ರೀನಗರದಲ್ಲಿ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಭದ್ರತಾ ಪಡೆಗಳು ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಹಳೆಯ ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯಿತು ಎಂದು ಹೇಳಿದರು.

ಭದ್ರತಾಪಡೆಯ ದಾಳಿಯಿಂದ ಪ್ರಚೋದಿಸಲ್ಪಟ್ಟ ಭಯೋತ್ಪಾದಕರು ಗುಂಡಿನ ದಾಳಿ ಆರಂಭಿಸಿದರು. ಭಯೋತ್ಪಾದಕರನ್ನು ಹತ್ತಿಕ್ಕಲು ಭದ್ರತಾ ಪಡೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿತು. ಆಗ ಇವರಿಬ್ಬರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಹತ್ಯೆಯಾದವರಲ್ಲಿ ಒಬ್ಬ ಮಾಧ್ಯಮದ ಗುರುತಿನ ಚೀಟಿಯನ್ನು ಹೊಂದಿದ್ದರು ಎಂದು ಪೊಲೀಸ್ ಮಹಾನಿರೀಕ್ಷಕರು ತಿಳಿಸಿದ್ದಾರೆ.

Share