Connect with us


      




ದೇಶ

ಆರ್ಯನ್ ಖಾನ್ ಡ್ರಗ್ ಕೇಸ್; ಇಬ್ಬರು ಅಧಿಕಾರಿಗಳು ಅಮಾನತು

Lakshmi Vijaya

Published

on

ಮುಂಬೈ: ಏಪ್ರಿಲ್ 13 (ಯು.ಎನ್.ಐ) ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಮತ್ತೊಂದು ಮಹತ್ತರ ಬೆಳವಣಿಗೆಯಾಗಿದೆ. ಆರ್ಯನ್ ಖಾನ್ ಭಾಗವಹಿಸಿದ್ದ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆ ಪ್ರಕರಣದ ತನಿಖೆ ನಡೆಸ್ತಿದ್ದ ಇಬ್ಬರು ಅಧಿಕಾರಿಗಳನ್ನ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಮಾನತುಗೊಳಿಸಿದೆ.

ಎನ್‌ಸಿಬಿಯ ವಿಜಿಲೆನ್ಸ್ ತಂಡವು ನಡೆಸುತ್ತಿರುವ ವಿಚಾರಣೆಯಲ್ಲಿ ಇಬ್ಬರು ಅಧಿಕಾರಿಗಳು ಸಂಶಯಾಸ್ಪದ ಚಟುವಟಿಕೆಯಲ್ಲಿ ತೊಡಗಿದ್ದರು. ಹೀಗಾಗಿ ಅವರನ್ನ ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 3, 2021 ರಂದು ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ಎನ್‌ಸಿಬಿ ದಾಳಿಯ ಸಂದರ್ಭದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಯಿತು.ಆರ್ಯನ್ ಖಾನ್ ಸೇರಿದಂತೆ  19 ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಆರ್ಯನ್  ಖಾನ್ ಮತ್ತು ಇತರ 17 ಮಂದಿಗೆ ಜಾಮೀನು ಸಿಕ್ಕಿದ್ದು, ಇಬ್ಬರು ಆರೋಪಿಗಳು ಮಾತ್ರ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

Share