Connect with us


      
ದೇಶ

ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

Vidyashree S

Published

on

ಸಾಂದರ್ಭಿಕ ಚಿತ್ರ

ಶ್ರೀನಗರ: ಇಲ್ಲಿಯ ರಂಗ್ರೆತ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ಧಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಕಾರಣ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್‌ ಇ ಮೊಹಮ್ಮದ್‌ (ಜೆಇಎಂ) ನಡೆಸಿದ ದಾಳಿಗೆ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾದ ಮರುದಿನವೇ ಈ ಕಾರ್ಯಾಚರಣೆ ನಡೆದಿದೆ.

ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ ಉಗ್ರರಿಗೆ ಶರಣಾಗಲು ಅವಕಾಶ ನೀಡಲಾಯಿತು. ಅವರು ನಿರಾಕರಿಸುವುದರ ಜೊತೆಗೆ ಮನಬಂದಂತೆ ಗುಂಡು ಹಾರಿಸಿದರು. ಹಾಗಾಗಿ ನಾವು ಪ್ರತಿದಾಳಿ ನಡೆಸಿದೆವು ಎಂದು ಪೊಲೀಸ್‌ ವಕ್ತಾರರು ತಿಳಿಸಿದ್ದಾರೆ.

Continue Reading
Share