Published
1 month agoon
ಬೆಂಗಳೂರು: ಜುಲೈ 7 (ಯು.ಎನ್.ಐ.) ಕಿತ್ತೂರಿನ ರಾಣಿ ಚೆನ್ನಮ್ಮನ ಅರಮನೆ ಮತ್ತು ಕೋಟೆಯನ್ನು 18.05 ಕೋಟಿ ರೂ.ಗಳ ವೆಚ್ಚದಲ್ಲಿ ಸಂರಕ್ಷಣೆ ಹಾಗೂ ಪುನರ್ ಸ್ಥಾಪನೆಯನ್ನು ಹಾಗೂ ವಸ್ತು ಸಂಗ್ರಹಾಲಯದ ನವೀಕರಣ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು 27.51 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ 4 ನೇ ಸಭೆಯಲ್ಲಿ ಅವರು ಮಾತನಾಡಿ ಕಿತ್ತೂರು ಕೋಟೆ ಅತ್ಯಂತ ಶಿಥಿಲವಾಗಿದೆ. ಇದನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಪುನರ್ ಸ್ಥಾಪನೆ ಮತ್ತು ಜೀರ್ಣೋದ್ಧಾರ ಎರಡೂ ಆಗಬೇಕಿದೆ. ಕೋಟೆಯ ಒಳಭಾಗದ ಜೀರ್ಣೋದ್ಧಾರ ಸರಿಯಾಗಿ ಮಾಡಬೇಕು ಹಾಗೂ ಕೋಟೆಯ ಸುತ್ತ ಸ್ವಚ್ಛ ಮಾಡಬೇಕು. ಇದರ ನಿರ್ವಹಣೆಗೆ ಅಂದಾಜುಪಟ್ಟಿಯನ್ನು ತಯಾರಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ವಸ್ತು ಸಂಗ್ರಹಾಲಯದಲ್ಲಿ ಕಿತ್ತೂರು ಸಂಸ್ಥಾನದ ಸಂಪೂರ್ಣ ಕಥೆಯನ್ನು ಹೇಳುವಂತೆ ಅಭಿವೃದ್ಧಿಗೊಳಿಸಬೇಕು. ಪ್ರತಿ ಪಾತ್ರಕ್ಕೂ ಸಮಾನ ಮಹತ್ವವನ್ನು ನೀಡಬೇಕು ಕಿತ್ತೂರು ಅರಮನೆಯ ದರ್ಬಾರಿನ ಪ್ರತಿರೂಪವನ್ನು ನಿರ್ಮಿಸಲು ಹುಬ್ಬಳ್ಳಿಯ ಮೂರು ಸಾವಿರ ಮಠ ಹಾಗೂ ಅಮ್ಮಿನಭಾವಿ ಮಠಗಳ ವಾಸ್ತುಶಿಲ್ಪವನ್ನು ಅಧ್ಯಯನ ಮಾಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಹಾಲೋಗ್ರಾಫಿಕ್ ಸ್ಟುಡಿಯೋ ನಿರ್ಮಾಣವನ್ನು ಮುಂದಿನ ಹಂತದಲ್ಲಿ ಕೈಗೊಳ್ಳುವಂತೆ ಸೂಚಿಸಿದರು.
ಕಾಮಗಾರಿಯನ್ನು ಅನುಭವ ಮತ್ತು ಪರಿಣಿತಿಹೊಂದಿರುವ ಗುತ್ತಿಗೆದಾರರಿಂದ ಮಾಡಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಡಾ. ರಾಜ್ ಕುಟುಂಬ
ಸ್ವಾತಂತ್ರ್ಯೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದ; ಓರ್ವನಿಗೆ ಚಾಕು ಇರಿತ
ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು: ಸಿಎಂ
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..