Connect with us


      




ಕರ್ನಾಟಕ

468 ಹುದ್ದೆಗಳ ಶೀಘ್ರ ಭರ್ತಿ – ಸಚಿವ ಪ್ರಭು ಚವ್ಹಾಣ್

Published

on

ಬೆಂಗಳೂರು, ಡಿಸೆಂಬರ್ 31 (ಯು.ಎನ್.ಐ.) ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ 468 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನುಮತಿ ನೀಡಿದ್ದಾರೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೋಪನಾ ಸಚಿವ, ಸರ್ಕಾರ ಬಂದು ಎರಡೂವರೆ ವರ್ಷ ಆಯ್ತು. ನಾನು ಎಲ್ಲಿ ಹೋದ್ರೂ ಒಂದೇ ಪ್ರಶ್ನೆ. ಪಶುಸಂಗೋಪನಾ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ವಿಚಾರದ ಪ್ರಶ್ನೆ ಮಾಡಲಾಗುತ್ತಿತ್ತು. ಇದೀಗ ಆ ಪ್ರಶ್ನೆಗೆ ಫಲ ಸಿಕ್ಕಿದೆ ಎಂದರು.

1083 ಹುದ್ದೆಗಳು ನಮ್ಮ‌ಇಲಾಖೆಯಲ್ಲಿ ಖಾಲಿ ಇವೆ. 900 ಹುದ್ದೆಗಳ ಭರ್ತಿಗಾಗಿ ಅನುಮತಿ ಕೇಳಲಾಗಿತ್ತು. ಈಗ ಇಲಾಖೆಯಲ್ಲಿನ 400 ಹುದ್ದೆ ಭರ್ತಿಗೆ ಸಿಎಂ  ಸಮ್ಮತಿಸಿದ್ದಾರೆ. ಒಟ್ಟು 468 ಹುದ್ದೆಗಳ ಭರ್ತಿಗೆ ನಿರ್ಧರಿಸಿದ್ದು, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅನುಮತಿ ಸಿಗಲಿದೆ ಎಂದರು.

ಗೋ ಸಂರಕ್ಷಣೆ ಕಾಯ್ದೆಯ ನಂತರ 10 ಸಾವಿರ ಪ್ರಾಣಿಗಳ ರಕ್ಷಣೆಯಾಗಿದೆ. ರಕ್ಷಣೆ ಮಾಡಿದ ಗೋವುಗಳು ಗೋಶಾಲೆಗೆ ಬಿಟ್ಟಿದ್ದೇವೆ. ಈ ಬಗ್ಗೆ 500 ಕ್ಕಿಂತ ಹೆಚ್ಚು ಕೇಸ್ ದಾಖಲಿಸಿದ್ದೇವೆ. ಪ್ರತಿ ಜಿಲ್ಲೆಯಲ್ಲಿ 50,100 ಎಕರೆ ಗೋಶಾಲೆಗೆ ಜಾಗವನ್ನ ಹುಡುಕಿದ್ದೇವೆ. ಒಂದು ಗೋ ಶಾಲೆಗೆ 2 ಕೋಟಿ ಬೇಕಾಗಿದ್ದು, ಸರ್ಕಾರ ಒಂದು ಗೋಶಾಲೆಗೆ 50 ಲಕ್ಷ ಇಟ್ಟಿದೆ. ಈಗಾಗಲೇ 36 ಲಕ್ಷ ಹಣ ರಿಲೀಸ್ ಆಗಿದ್ದು, ಕೆಲಸ ನೋಡಿ ಉಳಿದ ಹಣ ಬಿಡುಗಡೆ ಮಾಡ್ತೇವೆ ಎಂದು ತಿಳಿಸಿದರು.

ಪ್ರಸ್ತುತ 19 ಜಿಲ್ಲೆಗಳಲ್ಲಿ ಗೋಶಾಲೆ ಪೂರ್ವ ಸಿದ್ಧತೆಗಳು ನಡೆದಿವೆ. ಬೇರೆ ಬೇರೆ ಕಡೆ ಭೇಟಿ ನೀಡಲಾಗಿದ್ದು, ಪರಿಶೀಲನೆ ನಡೆಸಿದ್ದೇವೆ. ಗೋ‌ಮೂತ್ರದಿಂದ ಸೋಪು, ಶಾಂಪು ತಯಾರಿಕೆ, ಸೆಗಣಿಯಿಂದ ಆಯಿಲ್ ಪೇಂಟ್ ಮಾಡ್ತಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದ್ದು, ಎಲ್ಲ ಪ್ರೊಡಕ್ಟ್ ಗಳನ್ನು ತಯಾರಿಸಲು ತೀರ್ಮಾನಿಸಲಾಗಿದೆ. ನಮ್ಮ ರೈತರು ಸ್ವಯಂ ಉದ್ಯೋಗ ಮಾಡಬಹುದಾಗಿದ್ದು, ಗೋಬರ್ ಗ್ಯಾಸ್ ಬಗ್ಗೆಯೂ ಚಿಂತಿಸಿದ್ದೇವೆ ಎಂದು ಪಶುಸಂಗೋಪನ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ಕರ್ನಾಟಕ

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

Published

on

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಭಾರತದ ಸ್ವತಂತ್ರ್ಯಕ್ಕೆ ಬಹಳ ದೊಡ್ಡ ಬುನಾದಿ ಹಾಕಿಕೊಟ್ಟ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಅವರ 125ನೇ ಜನ್ಮ ದಿನಾಚರಣೆಯನ್ನ ವಿಚಾರಧಾರೆಯ ಮೂಲಕ, ಚರ್ಚೆಗಳ ಮೂಲಕ, ವಿಮರ್ಶೆಗಳ ಮೂಲಕ ಸ್ಮರಣೆ ಮಾಡುವ ಮೂಲಕ ಆಚರಣೆ ಮಾಡಲಿದ್ದೇವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ಬ್ರಿಟೀಷರ ವಿರುದ್ದ ಸೈನ್ಯವನ್ನ ಕಟ್ಟಿ ಹೋರಾಟ ಮಾಡಿದ ಅಪ್ರತಿಮ ವೀರ ಸುಭಾಷ್ ಚಂದ್ರಭೋಸ್. ಯುವಕರಿಗೆ ಪ್ರೇರಣೆಕೊಟ್ಟದ್ದು. ನೀವು ನನಗೆ ರಕ್ತ ಕೊಡಿ ನಾನು ನಿಮಗೆ ಸ್ವತಂತ್ರ್ಯಕೊಡಿಸುತ್ತೇನೆ ಎಂದು ಯುವಕರನ್ನ ಉತ್ಸಾಹಿಸಿ ಸೈನ್ಯಕಟ್ಟಿ ಹೋರಾಡಿದ ಸೇನಾನಿ ಎಂದು ಅವರ ಸಾಧನೆಯನ್ನ ಸ್ಮರಿಸಿದರು.

Continue Reading

ಕರ್ನಾಟಕ

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Published

on

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು ಎಂದು ಸಿಎಂ ಮೃತ ಗಣ್ಯರ ಸಾಧನೆಗಳನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎಲ್.‌ ಮಂಜುನಾಥ್‌ ವಿಧಿವಶ

Published

on

By

ಬೆಂಗಳೂರು, ಜ 23 (ಯುಎನ್‌ ಐ) ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ಹೃದಯಾಘಾತದಿಂದ ನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ರಾಜ್ಯ ಹೈಕೋರ್ಟ್‌ ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2000ರ ಡಿ.11 ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2001ರ ಅ. 27 ರಂದು ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು

Continue Reading
Advertisement
ದೇಶ11 mins ago

ರಾಷ್ಟ್ರೀಯ ಬಾಲ ಪುರಸ್ಕಾರ್ ಪುರಸ್ಕೃತರೊಂದಿಗೆ ಪ್ರಧಾನಿ ನಾಳೆ ಸಂವಾದ

ನವದೆಹಲಿ, ಜ ೨೩(ಯುಎನ್ ಐ) ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪುರಸ್ಕೃತರೊಂದಿಗೆ ನಾಳೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ....

ಅಂಕಣ12 mins ago

ಮಾಯಾಜಾಲದ ಬೆನ್ನು ಹತ್ತಿ

ಅಂಕಣ: ಮುಖಗಳು -೩ ಒಂಬತ್ತನೆ ತರಗತಿ ವಿದ್ಯಾರ್ಥಿ ತಂದೆಯೊಬ್ಬರು ಫೋನ್ ಮಾಡಿದ್ದರು. ‘ಮಗ ಮೊಬೈಲ್ ಕೊಡಿಸು ಎಂದು ಹಠ ಮಾಡುತ್ತಿದ್ದಾನೆ ಏನು ಮಾಡಲಿ?’ ಎಂದು ಕೇಳಿದ್ದರು. ‘ಅವನಿಗೇಕೆ...

ದೇಶ15 mins ago

ಟ್ರೈನ್ ಡ್ರೈವರ್‌ಗೆ ನಿದ್ದೆ ಎಂಬ ಚಿಂತೆ; ಪ್ರಯಾಣಿಕರಿಗೆ ಸುಸ್ತೋ ಸುಸ್ತು..!!

ಶಹಜಹಾನ್ಪುರ್/ಉತ್ತರಪ್ರದೇಶ: ಜನೆವರಿ 23 (ಯು.ಎನ್.ಐ.) “ನನ್ನ ನಿದ್ದೆ ಸಂಪೂರ್ಣವಾಗಿಲ್ಲ. ನಾನು ಸದ್ಯ ರೈಲು ಚಲಾಯಿಸುವುದಿಲ್ಲ.” ಉತ್ತರ ಪ್ರದೇಶದ ಶಹಜಹಾನ್‌ಪುರ ರೈಲು ನಿಲ್ದಾಣದಲ್ಲಿ ಶುಕ್ರವಾರ ಇಂಥದ್ದೊಂದು ವಿಚಿತ್ರ ಘಟನೆ...

ದೇಶ44 mins ago

ಬಂಗಾಳ: ನೇತಾಜಿ ಜನ್ಮದಿನದಂದು ಲಾಠಿ ಚಾರ್ಜ್

ಕೋಲ್ಕತ್ತಾ: ಜನೆವರಿ 23 (ಯು.ಎನ್.ಐ.) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ರಾಜಕೀಯ ನಿಂತಿಲ್ಲ. ಪಶ್ಚಿಮ ಬಂಗಾಳದ...

ಅಂಕಣ2 hours ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ2 hours ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ3 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ3 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು4 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ4 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಟ್ರೆಂಡಿಂಗ್

Share